2 ವರ್ಷಗಳ ಕಾಲ ಜನರನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೊನಾ (Coronavirus), ಲಸಿಕೆ (Vaccine) ಬಳಿಕ ಕಂಟ್ರೋಲ್ ಆಗಿತ್ತು. ಇದೀಗ ಮತ್ತೆ ತನ್ನ ರೂಪ ಬದಲಿಸಿಕೊಂಡು BF.7 ಹೆಸರಲ್ಲಿ (Covid New Variant) ಜನರನ್ನು ಕಾಡಲು ಸಜ್ಜಾಗಿದೆ ಅನ್ನೋದು ಸರ್ಕಾರದ ಮಾಹಿತಿ. ಸಿಎಂ ಕೂಡ ಅಧಿಕಾರಿಗಳ ಸಭೆ ನಡೆಸಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ. ಇದರೊಂದಿಗೆ ಆರೋಗ್ಯ ಇಲಾಖೆ (Health Department) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮಾಸ್ಕ್ ಕಡ್ಡಾಯ (Face Mask) ಸೇರಿದಂತೆ, ಸಾರ್ವಜನಿಕರ ಸಭೆ, ಮದುವೆ ಸಮಾರಂಭಗಳಿಗೆ ವಿಶೇಷ ಮಾರ್ಗಸೂಚಿಯನ್ನು (Corona Guidelines) ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮನಸ್ ಮತ್ತು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಯಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಇದರ ಅನ್ವಯ ಸಿಎಂ ಹಾಗೂ ಆರೋಗ್ಯ ಇಲಾಖೆ ಸಚಿವರು ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಮಾರ್ಗಸೂಚಿ ಬಿಡುಗಡೆಗೆ ಸೂಚಿಸಿದ್ದರು. ಇದರಂತೆ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸಲಹೆ ನೀಡಿದೆ.
ಸಾರ್ವಜನಿಕ ಸಭೆ, ಮದುವೆ ಸಮಾರಂಭಗಳಿಗೆ ವಿಶೇಷ ಗೈಡ್ ಲೈನ್ಸ್
ಮುಚ್ಚಿದ ಸ್ಥಳಗಳು ಅಂದರೇ, ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಥಿಯೇಟರ್, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸಿವುದು ಅಗತ್ಯವಾಗಿರುತ್ತದೆ. ಅದರಲ್ಲೂ, ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಿವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ. ಉಳಿದಂತೆ ಕೋವಿಡ್ ಬೂಸ್ಟರ್ ಡೋಸ್ ಪಡೆಯಲು ಅರ್ಹತೆ ಹೊಂದಿರುವವರು ಶೀಘ್ರವಾಗಿ ಲಸಿಕೆ ಪಡೆದುಕೊಳ್ಳುಬೇಕು.
ಇಮ್ಯೂನಿಟಿಗಾಗಿ ಯೋಗ ಮಾಡಲು ಸಾರ್ವಜನಿಕರಿಗೆ ಸಲಹೆ
ಉಸಿರಾಟ ಸಮಸ್ಯೆ ಹಾಗೂ ಕೋವಿಡ್ ಸೋಂಕಿನ ಲಕ್ಷಣಗಳು ಹೊಂದಿರುವವರು ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಕೊಳ್ಳಬೇಕು. ಕೊರೊನಾ ಟೆಸ್ಟ್ ಬಳಿಕ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ, ನಿಯಮಗಳನ್ನು ಪಾಲನೆ ಮಾಡಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮ ಹಾಗೂ ಧ್ಯಾನವನ್ನು ಮಾಡಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್
ಮದುವೆ, ಸಭೆ ಮತ್ತು ಸಮಾರಂಭಗಳಲ್ಲಿ ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ ಬೆಳಕು ವ್ಯವಸ್ಥೆ ಇರುವ ಸ್ಥಳದಲ್ಲಿ, ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.
ಬದಲಾಗುತ್ತಿರುವ ಕೋವಿಡ್-19 ಜಾಗತಿಕ ಸ್ಥಿತಿಗತಿಗಳ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಸಂಜೆ ನಡೆದ ಉನ್ನತ ಮಟ್ಟದ ಸಭೆಯ ಚರ್ಚೆಗಳ ಆಧಾರದ ಮೇಲೆ ಸೋಂಕು ತಡೆಗಟ್ಟಲು ಕೆಲ ಮುಂಜಾಗ್ರತಾ ಕ್ರಮಗಳನ್ನು ಜಾರಿ ಮಾಡಲಾಗಿದ್ದು, ಈ ಕುರಿತು ಆರೋಗ್ಯ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ.@DHFWKA pic.twitter.com/ksNvV4y2IT
— Dr Sudhakar K (@mla_sudhakar) December 22, 2022
ಉಳಿದಂತೆ ಡಿಸೆಂಬರ್ 24 ರಿಂದ ಪ್ರತಿ ಅಂತರಾಷ್ಟ್ರೀಯ ವಿಮಾನದಲ್ಲಿ ಬರುವ ನಿರ್ದಿಷ್ಟ ಸಂಖ್ಯೆಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ನಡೆಸಲಿದ್ದಾರೆ. ವಿಮಾನದಲ್ಲಿ ಆಗಮಿಸುವ ಒಟ್ಟು ಪ್ರಯಾಣಿಕರಲ್ಲಿ ಶೇ.2 ರಷ್ಟು ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗುತ್ತದೆ. ಆ ಬಳಿಕವೇ ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಒಂದೊಮ್ಮೆ ಪಾಸಿಟಿವ್ ವರದಿ ಖಚಿತವಾದರೇ, ಅಂತಹ ಮಾದರಿಗಳನ್ನು ಜೀನೋಮ್ ಟೆಸ್ಟ್ಗೆ ಕಳುಹಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ