HOME » NEWS » State » COVID CASES RAISING IN KODAGU RSK SESR

Covid 19: ಕೊಡಗಿನಲ್ಲಿ ಮತ್ತೆ ಏರಿಕೆಯಾಗುತ್ತಾ ಕೋವಿಡ್ ಮಹಾಮಾರಿ?

ಸದ್ಯ ಕೊಡಗಿನಲ್ಲಿ 131 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಒಂದು ವೇಳೆ ಪ್ರಕರಗಳು ಜಾಸ್ತಿಯಲ್ಲಿ ಕೇರ್ ಸೆಂಟರ್ ಗಳು ಬೇಕಾಬಹುದೆಂದು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

news18-kannada
Updated:April 10, 2021, 3:01 PM IST
Covid 19: ಕೊಡಗಿನಲ್ಲಿ ಮತ್ತೆ ಏರಿಕೆಯಾಗುತ್ತಾ ಕೋವಿಡ್ ಮಹಾಮಾರಿ?
ಕೊರೋನಾ ಸಾಂದರ್ಭಿಕ ಚಿತ್ರ
  • Share this:
ಕೊಡಗು (ಏ. 9) : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿದ್ದು  ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೀಗಾಗಿ ಜಿಲ್ಲಾಡಳಿತ ಕೊಡಗಿನ ವಿವಿಧೆಡೆ ಮತ್ತೆ ಕೋವಿಡ್ ಕೇರ್ ಸೆಂಟರ್ ಗಳನ್ನು ಆರಂಭಿಸಲು ಮುಂದಾಗಿದೆ. ಇದು ಕೊಡಗಿನಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಸ್ಫೋಟಗೊಳ್ಳುವ ಮುನ್ಸೂಚನೆಯೇ ಎಂಬ ಅನುಮಾನ ವ್ಯಕ್ತವಾಗಿದೆ. 2020ರ ಮಾರ್ಚ್ ತಿಂಗಳಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿತ್ತು. ಕೋವಿಡ್ ಪ್ರಕರಣ ಪತ್ತೆಯಾದ ವ್ಯಕ್ತಿ ಸಾಕಷ್ಟು ಜನರನ್ನು ಸಂಪರ್ಕಿಸಿದ್ದರು. ಅವರಿಂದ ಬೇರೆಯವರಿಗೆ ಕೋವಿಡ್ ಹರಡಿರಲಿಲ್ಲ. ಆದರೆ, ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯಿಂದ ಇಡೀ ಮನೆಯವರಿಗೆ ಕೋವಿಡ್ ಹರಡುತ್ತಿದೆ. ಇದರಿಂದಾಗಿ  ಜಿಲ್ಲೆಯಲ್ಲಿ ಸದ್ಯ ನಿತ್ಯ ಬರೋಬ್ಬರಿ 20 ರಿಂದ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಇದನ್ನು ಮನಗಂಡಿರುವ  ಜಿಲ್ಲಾಡಳಿತ ಈಗಾಗಲೇ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮತ್ತೆ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಆಯಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ.

ಕುಶಾಲನಗರ ಸಮೀಪದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಮಡಿಕೇರಿ ನಗರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತರಬೇತಿ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸಿದ್ಧತೆ ಮಾಡಲಾಗುತ್ತಿದೆ.

ಇದನ್ನು ಓದಿ: ರಸಗೊಬ್ಬರ ಬೆಲೆ ಏರಿಕೆ, ಸಂಸದರ ಗುಲಾಮಿ ಮನಸ್ಥಿತಿಗೆ ಕರ್ನಾಟಕ ಸರ್ವನಾಶ‌; ಸಿದ್ದರಾಮಯ್ಯ ಕಿಡಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿರುವ ಹತ್ತನೆ ತರಗತಿ ವಿದ್ಯಾರ್ಥಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ನಂತರ ಅಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಈಗಾಗಲೇ 200 ಬೆಡ್ ಗಳಿವೆ. ಇದರಲ್ಲಿ 50 ಬೆಡ್ಡ್ ಗಳು ಐಸಿಯು ವಾರ್ಡ್‍ನಲ್ಲಿದ್ದರೆ, 150 ಬೆಡ್ ಗಳು ಜಿಲ್ಲಾಸ್ಪತ್ರೆಯ ವಿವಿಧ ವಾರ್ಡ್‍ಗಳಲ್ಲಿ ಇವೆ. ಅದರ ಜೊತೆಗೆ ಮೂರು ತಾಲ್ಲೂಕಿನ ಮೂರು ಕೋವಿಡ್ ಕೇರ್ ಸೆಂಟರ್ ನಲ್ಲಿ ತಲಾ ನೂರು ಬೆಡ್ ಗಳನ್ನು ರೆಡಿ ಮಾಡಿಕೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸದ್ಯ ಕೊಡಗಿನಲ್ಲಿ 131 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಒಂದು ವೇಳೆ ಪ್ರಕರಗಳು ಜಾಸ್ತಿಯಲ್ಲಿ ಕೇರ್ ಸೆಂಟರ್ ಗಳು ಬೇಕಾಬಹುದೆಂದು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮತ್ತೊಂದೆಡೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವು ಮಾಡಲಾಗಿದೆ. ಇದರಿಂದ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಂದ ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕೋವಿಡ್ ಪ್ರಕರಣಗಳು ಜಾಸ್ತಿಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಸದ್ಯ ಕೊಡಗಿನಲ್ಲಿ 131 ಸಕ್ರಿಯ ಪ್ರಕರಗಳಿದ್ದು, ಪ್ರತಿನಿತ್ಯ 20 ರಿಂದ 25 ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಜಿಲ್ಲಾಡಳಿತ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ರೆಡಿ ಮಾಡಿಕೊಳ್ಳುತ್ತಿದೆ.
Published by: Seema R
First published: April 10, 2021, 3:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories