ಮೇಲ್ಮನೆ ಚುನಾವಣೆ: ಸಿ.ಪಿ. ಯೋಗೇಶ್ವರ್​ಗೆ ಬಿಜೆಪಿ ಟಿಕೆಟ್?

ಜೂನ್ ತಿಂಗಳಲ್ಲಿ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಸಿದ್ಧವಾಗುವಂತೆ ಸ್ವತಃ ಯಡಿಯೂರಪ್ಪ ಅವರೇ ಸಿಪಿ ಯೋಗೇಶ್ವರ್​ಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.

news18
Updated:December 17, 2019, 11:10 AM IST
ಮೇಲ್ಮನೆ ಚುನಾವಣೆ: ಸಿ.ಪಿ. ಯೋಗೇಶ್ವರ್​ಗೆ ಬಿಜೆಪಿ ಟಿಕೆಟ್?
ಜೂನ್ ತಿಂಗಳಲ್ಲಿ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಸಿದ್ಧವಾಗುವಂತೆ ಸ್ವತಃ ಯಡಿಯೂರಪ್ಪ ಅವರೇ ಸಿಪಿ ಯೋಗೇಶ್ವರ್​ಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.
  • News18
  • Last Updated: December 17, 2019, 11:10 AM IST
  • Share this:
ಬೆಂಗಳೂರು(ಡಿ. 17): ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ಅತೃಪ್ತ ಶಾಸಕರನ್ನು ಸೆಳೆದು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ಸಿ.ಪಿ. ಯೋಗೇಶ್ವರ್ ಅವರಿಗೆ ಮಂತ್ರಿ ಭಾಗ್ಯ ಕೂಡಿ ಬರುವ ಕಾಲ ಸಮೀಪಿಸುತ್ತಿರುವಂತಿದೆ. ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲು ಕೊನೆಯವರೆಗೂ ಪ್ರಯತ್ನಿಸಿದ್ದ ಯೋಗೇಶ್ವರ್ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಸಾಧ್ಯತೆ ಇದೆ. ಆ ಮೂಲಕ ಮಂತ್ರಿ ಸ್ಥಾನ ನೀಡುವ ಯೋಜನೆ ಯಡಿಯೂರಪ್ಪ ಅವರ ತಲೆಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈ ಮೂಲಗಳ ಪ್ರಕಾರ, ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರನ್ನು ಆಗ್ನೇಯ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಸಬಹುದು. ಜೂನ್ ತಿಂಗಳಲ್ಲಿ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಸಿದ್ಧವಾಗುವಂತೆ ಸ್ವತಃ ಯಡಿಯೂರಪ್ಪ ಅವರೇ ಸಿಪಿವೈಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.

ಇದನ್ನೂ ಓದಿ: ನೀರಾವರಿ ಖಾತೆಗೆ ಪಟ್ಟು ಹಿಡಿದ ರಮೇಶ್ ಜಾರಕಿಹೊಳಿ, ಮೂಲ ಬಿಜೆಪಿಗರಿಂದ ಅಡ್ಡಗಾಲು; ಬಿಎಸ್​ವೈ ಮೇಲೆ ಹೆಚ್ಚಿದ ಒತ್ತಡ

ಜೂನ್ ತಿಂಗಳಲ್ಲಿ ಮೇಲ್ಮನೆಯಲ್ಲಿ 6 ನಾಮನಿರ್ದೇಶಿತ ಸ್ಥಾನಗಳು ಸೇರಿದಂತೆ ಒಟ್ಟು 18 ಸ್ಥಾನಗಳು ಖಾಲಿ ಉಳಿಯಲಿವೆ. ಇದರಲ್ಲಿ ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರವೂ ಸೇರಿವೆ. ಇಷ್ಟೂ ಕ್ಷೇತ್ರಗಳಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಸದಸ್ಯರಿರುವುದು. ಹೀಗಾಗಿ, ಮೇಲ್ಮನೆಯಲ್ಲಿ ಬಿಜೆಪಿಯ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಈ ಚುನಾವಣೆ ಸಹಕಾರಿಯಾಗಲಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published: December 17, 2019, 11:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading