ಬೆಂಗಳೂರು (ಜುಲೈ 03); ಮತ್ತೊಂದು ಬರ್ಬರ ಹತ್ಯೆಗೆ ರಾಜ್ಯ ರಾಜಧಾನಿ ಇಂದು ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾವಲ್ ಭೈರಸಂದ್ರದ ಅಂಬೇಡ್ಕರ್ ಕಾಲೇಜು ಮುಂಭಾಗದಲ್ಲಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಕೃಷ್ಣಮೂರ್ತಿ (30) ಎಂದು ಗುರುತಿಸಲಾಗಿದೆ. 2-3 ಜನ ದುಷ್ಕರ್ಮಿಗಳಿಂದ ಕೃತ್ಯ ನಡೆದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಟೈಲ್ಸ್ ವರ್ಕ್ ಮಾಡುತ್ತಿದ್ದ ಕೃಷ್ಣಮೂರ್ತಿ ಹತ್ಯೆಯ ಹಿಂದೆ ಆತನ ಪತ್ನಿಯ ಕೈವಾಡ ಶಂಕೆಯೂ ಇದೆ ಎನ್ನಲಾಗುತ್ತಿದೆ.
ಕೃಷ್ಣಮೂರ್ತಿ ಇತ್ತೀಚೆಗೆ ತನ್ನ ಮೊದಲ ಪತ್ನಿಯನ್ನು ತೊರೆದು ಎರಡನೇ ಮದುವೆಯಾಗಿದ್ದ. ಎರಡು ತಿಂಗಳಿನಿಂದ ಎರಡನೇ ಪತ್ನಿ ಜೊತೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು. ಈ ವಿವಾದ ಪೊಲೀಸ್ ಠಾಣೆ ಮೆಟ್ಟಿಲೂ ಏರಿತ್ತು. ಈ ವೇಳೆ ಪೊಲೀಸರು ಎರಡು ಮೂರು ಬಾರಿ ಗಂಡ ಹೆಂಡತಿಗೆ ಎಚ್ಚರಿಕೆ ನೀಡಿ ಕಳಿಸಿದ್ದರು. ಹೀಗಾಗಿ ಗಂಡನ ಕಿರುಕುಳ ತಾಳದೆ ಹೆಂಡತಿಯೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಶಂಕೆಯೂ ಇದೆ. ಆ ಕೋನದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಬಗ್ಗೆ ಹೇಳಿಕೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಡಾ. ಶರಣಪ್ಪ, "ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ವರದಿಯಾಗಿದೆ. ಮೃತನ ಹೆಸರು ಕೃಷ್ಣಮೂರ್ತಿ. ನಿನ್ನೆ ರಾತ್ರಿ ವೇಳೆಯೇ ಕೊಲೆ ನಡೆದಿರುವ ಶಂಕೆ ಇದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ಇಬ್ಬರು ಅಥವಾ ಮೂವರು ವ್ಯಕ್ತಿಗಳು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಮೃತ ವ್ಯಕ್ತಿ ಹಾಗಾಗ ಪತ್ನಿಯ ಜೊತೆ ಜಗಳ ಮಾಡಿಕೊಳ್ತಿದ್ದ ಎಂಬ ಮಾಹಿತಿ ಇದೆ. ಸದ್ಯ ಎರಡು ಆಯಾಮದಲ್ಲಿ ತನಿಖೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನ ಬಂಧಿಸುತ್ತೇವೆ" ಎಂದು ತಿಳಿಸಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ