news18-kannada Updated:January 15, 2021, 10:09 AM IST
ಚಾಕು ಇರಿದುಕೊಂಡ ವ್ಯಕ್ತಿ
ಚಿಕ್ಕಬಳ್ಳಾಪುರ (ಜ. 15): ಪಿತ್ರಾರ್ಜಿತ ಆಸ್ತಿ ಹಂಚಿಕೆಯ ವಿವಾದದ ಹಿನ್ನೆಲೆಯಲ್ಲಿ ಸೂಕ್ತ ಪರಿಹಾರ ಸಿಗದೆ ಹಿರಿಯ ಅಣ್ಣ ತನ್ನಷ್ಟಕ್ಕೆ ತಾನೇ ಚಾಕುವಿನಿಂದ ತಿವಿದುಕೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯದಲ್ಲಿ ಜಗನ್ನಾಥ (63) ಹಿರಿಯ ಅಣ್ಣ ಚಾಕುವಿನಿಂದ ಇರಿದುಕೊಂಡ ವ್ಯಕ್ತಿ.
ಚಿಕ್ಕಬಳ್ಳಾಪುರ ತಾಲೂಕಿನ ಗಂಗಸಂದ್ರ ಗ್ರಾಮದ ತೋಟದ ಮನೆಯಲ್ಲಿ ಲೇಟ್ ಸಿದ್ದಪ್ಪನವರ ಐದು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯ ಹಂಚಿಕೆಯ ವಿವಾದ ಸುಮಾರು ವರ್ಷಗಳಿಂದ ಸಾಕಷ್ಟು ತಗಾದೆಗಳಿಂದ ಕೂಡಿತ್ತು. ಆದರೆ, ನಿನ್ನೆ ಅಣ್ಣ-ತಮ್ಮಂದಿರು ಸೇರಿ ಮಾತುಕತೆ ನಡೆಸಿ ಜಮೀನುಗಳ ವಿಭಾಗಗಳನ್ನು ರಿಜಿಸ್ಟರ್ ಮಾಡಿಸಲು ಗೌರಿಬಿದನೂರು ತಾಲೂಕು ಕಚೇರಿಗೆ ಹೋಗಿದ್ದರು. ಅಲ್ಲಿ ಸೂಕ್ತ ಪರಿಹಾರ ಸಿಗದ ಹಿನ್ನಲೆ ಅಣ್ಣ-ತಮ್ಮಂದಿರಿಗೆ ಮಾತಿಗೆ ಮಾತು ಬೆಳೆದಿತ್ತು.
ಇದನ್ನೂ ಓದಿ: ಬೆಂಗಳೂರಿನ ಸ್ಟಾರ್ ಹೋಟೆಲ್ನಲ್ಲೇ ಕುಳಿತು ಲಕ್ಷಾಂತರ ರೂ. ಪಂಗನಾಮ; ಸ್ವರೂಪ್ ಶೆಟ್ಟಿ ಮತ್ತೊಂದು ಕೃತ್ಯ ಬಯಲು
ಈ ಸಂದರ್ಭ ಹಿರಿಯ ಅಣ್ಣ ಜಗನ್ನಾಥ್ ತಾಲೂಕು ಕಚೇರಿ ಆವರಣದಲ್ಲೇ ತನ್ನಷ್ಟಕ್ಕೆ ತಾನೇ ಚಾಕುವಿನಿಂದ ತನ್ನ ಹೊಟ್ಟೆಗೆ ತಿವಿದುಕೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇನ್ನು ಚಾಕುವಿನಿಂದ ತಿವಿದುಕೊಂಡ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಹೊಟ್ಟೆಯ ಭಾಗಕ್ಕೆ ನಾಲ್ಕೈದು ಭಾಗಗಳಲ್ಲಿ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಹೊಟ್ಟೆಗೆ ಇರಿದುಕೊಂಡ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕೇಸ್ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.
Published by:
Sushma Chakre
First published:
January 15, 2021, 10:09 AM IST