Crime News: ನಿರ್ಜನ ಪ್ರದೇಶದಲ್ಲಿ ಡಬಲ್ ಮರ್ಡರ್; ಕುಡಿದ ಮತ್ತಿನಲ್ಲಿ ಸ್ನೇಹಿತರಿಂದಲೇ ಕೊಲೆ ಶಂಕೆ

ಕೊಲೆಯಾದವರು ಮತ್ತು ಕೊಲೆ ಮಾಡಿದವರ ಬಗ್ಗೆ ಪತ್ತೆ ಹಚ್ಚಲು ಮೂರು ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಸದ್ಯ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮೃತರು ಮತ್ತು ಆರೋಪಿಗಳ ಬಗ್ಗೆ ತನಿಖೆ ಆರಂಭಿಸಿದ್ದಾ

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

  • Share this:
ಆನೇಕಲ್(ಸೆ.2) : ಅದು ನೀಲಗಿರಿ ತೋಪಿಗೆ ಅಂಟಿಕೊಂಡಿರುವ ನಿರ್ಜನ ಪ್ರದೇಶ. ಅಲ್ಲಿ ಜನರ ಓಡಾಟವೂ ತೀರಾ ವಿರಳ. ಆದ್ರೆ ಅಲ್ಲಿ ಆಗಬಾರದ ಘಟನೆಯೊಂದು ನಡೆದು ಹೋಗಿದೆ. ಯಾರೋ ದುಷ್ಕರ್ಮಿಗಳು ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಂದು ಪರಾರಿಯಾಗಿದ್ದಾರೆ.

ಹೌದು, ಬುಧವಾರ ಬೆಳಗ್ಗೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಿಂಗೇನಾ ಅಗ್ರಹಾರ ಸಮೀಪದ ನಿರ್ಜನ ಪ್ರದೇಶದಲ್ಲಿ ಆಗಬಾರದ್ದು ಆಗಿ ಹೋಗಿತ್ತು. ಇಬ್ಬರು ಅಪರಿಚಿತ ವ್ಯಕ್ತಿಗಳ ಮೃತ ದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿರುವ ರೀತಿಯಲ್ಲಿ ಪತ್ತೆಯಾಗಿತ್ತು. ಅಕ್ಕಪಕ್ಕದಲ್ಲಿ ಕುಡಿದು ಬಿಸಾಡಿರುವ ಮದ್ಯದ ಬಾಟಲಿಗಳು ಕಂಡುಬಂದಿದ್ದವು. ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಖಾಕಿ ಪಡೆ ಇಡೀ ಪ್ರದೇಶವನ್ನು ಸುತ್ತುವರೆದಿತ್ತು. ಶ್ವಾನದಳ, ಪೊರೆನ್ಸಿಕ್ ಲ್ಯಾಬ್ ಸಿಬ್ಬಂದಿಯಿಂದ ಶೋಧನೆ ಮುಂದುವರಿದಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಇದೆಲ್ಲವನ್ನು ಗುಂಪು ಗುಂಪಾಗಿ ನಿಂತು ಸಾರ್ವಜನಿಕರು ಗಮನಿಸುತ್ತಿದ್ದರು.

ಸುಮಾರು 25 ರಿಂದ 30 ವರ್ಷ ವಯೋಮಾನದ ಇಬ್ಬರು ವ್ಯಕ್ತಿಗಳನ್ನು  ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತರಲ್ಲಿ ಓರ್ವ ಸಂಪಿಗೆನಗರ ವಾಸಿ ರವಿ ಕುಮಾರ್ ಎಂದು ಗುರುತಿಸಲಾಗಿದೆ. ಮತ್ತೊರ್ವ ಉತ್ತರ ಭಾರತ ಮೂಲದವನೆಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಂದಹಾಗೆ ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿ, ವಾಟರ್ ಬಾಟಲಿ ಮತ್ತು ಮಿಕ್ಸ್ಚರ್ ಸಿಕ್ಕಿದ್ದು, ಎಣ್ಣೆ ಪಾರ್ಟಿ ಬಳಿಕ ಸ್ನೇಹಿತರಿಂದಲೇ ಡಬಲ್ ಮರ್ಡರ್ ಆಗಿರುವ ಸಾಧ್ಯತೆ  ಇದೆ. ಜೊತೆಗೆ ಹೆಣ್ಣು ಅಥವಾ ಹಣಕ್ಕಾಗಿ ಮೊದಲೇ ಯೋಜನೆ ರೂಪಿಸಿ ಚೆನ್ನಾಗಿ ಕುಡಿಸಿ ಬಳಿಕ ಕೊಲೆ ಮಾಡಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎನ್ನುತ್ತಿವೆ ಪೊಲೀಸ್ ಮೂಲಗಳು.

ಇದನ್ನೂ ಓದಿ:Gold Price Today: ಇಂದು ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ; ಬೆಳ್ಳಿ ಬೆಲೆಯಲ್ಲಿ ಇಳಿಕೆ

ಇನ್ನೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರನ್ನೂ ಕೊಲೆ ಮಾಡಲಾಗಿದೆ. ಕೊಲೆಯಾದವರು ಮತ್ತು ಕೊಲೆ ಮಾಡಿದವರ ಬಗ್ಗೆ ಪತ್ತೆ ಹಚ್ಚಲು ಮೂರು ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಸದ್ಯ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಮೃತರು ಮತ್ತು ಆರೋಪಿಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅತಿ ಶೀಘ್ರದಲ್ಲಿಯೇ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. ಸಾರ್ವಜನಿಕರು ಸಹ ಇಂತಹ ಘಟನೆಗಳು ಗಮನಕ್ಕೆ ಬಂದಾಗ ಪೊಲೀಸರಿಗೆ ಮಾಹಿತಿ ನೀಡಬೇಕು. ಸಿನಿಮಾದಲ್ಲಿ ತೋರಿಸಿದ ಹಾಗೆ ಪೊಲೀಸರು ಮಾಹಿತಿ‌ ನೀಡಿದವರಿಗೆ ಕಿರುಕುಳ ನೀಡುವುದಿಲ್ಲ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ:Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯ ಆರ್ಭಟ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಒಟ್ಟಿನಲ್ಲಿ ಡಬಲ್ ಮರ್ಡರ್ ಪ್ರಕರಣದಲ್ಲಿ ಆರೋಪಿಗಳು ಸೆರೆ ಸಿಕ್ಕ ಬಳಿಕವೇ ಘಟನೆಗೆ ನಿಖರ ಕಾರಣ ತಿಳಿದು ಬರಲಿದೆ. ಸದ್ಯ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕುಡಿದ ನಶೆಯಲ್ಲಿ ಅಥವಾ ಹೆಣ್ಣಿನ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ಪರಸ್ಪರರು ಗಲಾಟೆ ಮಾಡಿಕೊಂಡು ಕೊನೆಗೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಸಾಧ್ಯತೆ ಇದೆ.
Published by:Latha CG
First published: