Hassan Crime: ಹಾಸನದಲ್ಲಿ ಹಳೇ ದ್ವೇಷಕ್ಕೆ ಹಾಡಹಗಲೇ ಯುವಕನಿಗೆ ಗುಂಡಿಕ್ಕಿ ಹತ್ಯೆ
Hassan Crime News: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ಹಳೇ ದ್ವೇಷ ಹಿನ್ನೆಲೆ ಯುವಕನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ
- News18 Kannada
- Last Updated: July 15, 2020, 7:43 PM IST
ಹಾಸನ (ಜು. 15): ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ಯುವಕನಿಗೆ ಬಂದೂಕಿನಿಂದ ಶೂಟ್ ಮಾಡಲಾಗಿದೆ. ಮೃತ ಯುವಕ ಕಳೆದ ಎರಡು ವರ್ಷಗಳ ಹಿಂದೆ ತಮ್ಮ ಅಣ್ಣನ ಮಗಳನ್ನು ಅಪಹರಿಸಿದ ಕಾರಣದಿಂದ ಕೇಸ್ ದಾಖಲಾಗಿತ್ತು. ಇದೇ ಪ್ರಕರಣದ ಕಾರಣಕ್ಕೆ ಎರಡೂ ಕುಟುಂಬದ ನಡುವೆ ದ್ವೇಷ ಹೆಚ್ಚಾಗಿದ್ದು, ಈ ಹಳೇ ದ್ವೇಷದ ಸಂಬಂಧ ಯುವತಿಯ ಚಿಕ್ಕಪ್ಪ ಯುವಕನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈಗ ಇಡೀ ಗ್ರಾಮದಲ್ಲಿ ದ್ವೇಷದ ಜ್ವಾಲೆ ಮತ್ತಷ್ಟು ಹೆಚ್ಚಾಗಿದ್ದು, ಬಿಗುವಿನ ವಾತಾವರಣ ಉಂಟಾಗಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ಹಳೇ ದ್ವೇಷ ಹಿನ್ನೆಲೆ ಯುವಕನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆ ಮಾಡಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ಬಂದೂಕಿನಿಂದ ಯುವಕನನ್ನು ಶೂಟ್ ಮಾಡಿ ಹತ್ಯೆ ಮಾಡಲಾಗಿದೆ. ಮಧು ಎಂಬಾತನನ್ನು ಅದೇ ಗ್ರಾಮದ ರೂಪೇಶ್ ಎಂಬುವವನು ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಧು ಎಂಬುವವನು ಸೊಪ್ಪಿನಹಳ್ಳಿ ಗ್ರಾಮದಿಂದ ಬೈರಾಪುರ ಗ್ರಾಮಕ್ಕೆ ಬೈಕ್ನಲ್ಲಿ ಬರುತ್ತಿದ್ದ ಎರಡೂ ಗ್ರಾಮದ ಹೊರವಲಯದಲ್ಲಿ ರೂಪೇಶ್ ಡಬ್ಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಪಿಯು ನಿರ್ದೇಶಕರಿಂದ ಸೈಬರ್ ಕ್ರೈಂಗೆ ದೂರು
ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ದ್ವೇಷ ಸಾಧಿಸುತ್ತಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಇಬ್ಬರ ನಡುವಿನ ದ್ವೇಷ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ರೂಪೇಶ್ ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಮೂರು ಪ್ರತ್ಯೇಕ ತಂಡ ರಚಿಸಿದ್ದಾರೆ. ಘಟನೆ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೇ ಪ್ರಕರಣದ ಕಾರಣಕ್ಕೆ ಪ್ರಕರಣ ನ್ಯಾಯಾಲಯದಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಆದರೆ ಈ ಮಧು ಎಂಬುವನು ಮತ್ತೆ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ರೂಪೇಶ್ ಮತ್ತು ಸಂಬಂಧಿಕರ ಮೇಲೆ ಆಗಿಂದಾಗ್ಗೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈ ಕಾರಣದಿಂದಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ರೂಪೇಶ್ ತಪ್ಪಿಸಿಕೊಂಡಿದ್ದು, ವಿಚಾರಣೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ.
(ವರದಿ: ಡಿಎಂಜಿ ಹಳ್ಳಿ ಅಶೋಕ್)
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ಹಳೇ ದ್ವೇಷ ಹಿನ್ನೆಲೆ ಯುವಕನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆ ಮಾಡಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ಬಂದೂಕಿನಿಂದ ಯುವಕನನ್ನು ಶೂಟ್ ಮಾಡಿ ಹತ್ಯೆ ಮಾಡಲಾಗಿದೆ. ಮಧು ಎಂಬಾತನನ್ನು ಅದೇ ಗ್ರಾಮದ ರೂಪೇಶ್ ಎಂಬುವವನು ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಮಧು ಎಂಬುವವನು ಸೊಪ್ಪಿನಹಳ್ಳಿ ಗ್ರಾಮದಿಂದ ಬೈರಾಪುರ ಗ್ರಾಮಕ್ಕೆ ಬೈಕ್ನಲ್ಲಿ ಬರುತ್ತಿದ್ದ ಎರಡೂ ಗ್ರಾಮದ ಹೊರವಲಯದಲ್ಲಿ ರೂಪೇಶ್ ಡಬ್ಬಲ್ ಬ್ಯಾರಲ್ ಗನ್ನಿಂದ ಶೂಟ್ ಮಾಡಿದ್ದಾನೆ ಎನ್ನಲಾಗಿದೆ.