• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಗುಂಡ್ಲುಪೇಟೆ ಬಳಿ ತೋಟದ ಮನೆಗೆ ನುಗ್ಗಿ ದರೋಡೆ; ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ

ಗುಂಡ್ಲುಪೇಟೆ ಬಳಿ ತೋಟದ ಮನೆಗೆ ನುಗ್ಗಿ ದರೋಡೆ; ಕೆಲವೇ ಗಂಟೆಗಳಲ್ಲಿ ಆರೋಪಿಗಳ ಬಂಧನ

ಗುಂಡ್ಲುಪೇಟೆ ಪೊಲೀಸ್ ಠಾಣೆ

ಗುಂಡ್ಲುಪೇಟೆ ಪೊಲೀಸ್ ಠಾಣೆ

ತಕ್ಷಣ ಪ್ರದೀಪ್ ಅವರು ಗ್ರಾಮಸ್ಥರಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಧಾವಿಸಿದ ಗ್ರಾಮಸ್ಥರು ಕುಸಿದುಬಿದ್ದು ಗಾಯಗೊಂಡಿದ್ದ ದರೋಡೆಕೋರನ ಕೈಕಾಲು ಕಟ್ಟಿ  ಗುಂಡ್ಲುಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

  • Share this:

ಚಾಮರಾಜನಗರ (ಅಕ್ಟೋಬರ್ 30): ತೋಟದ ಮನೆಗೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕಿನ ಹೊಂಗಳ್ಳಿಯಲ್ಲಿ ನಡೆದಿದೆ. ಆದರೆ ಕೆಲವೆ ಹೊತ್ತಿನಲ್ಲಿ ದರೋಡೆಕೋರರನ್ನು ಬಂದಿಸುವಲ್ಲಿ ಗುಂಡ್ಲುಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಂಗಳ್ಳಿ ಹೊರವಲಯಲದಲ್ಲಿ ಕೇರಳ ಮೂಲದ ಪ್ರದೀಪ್ ಎಂಬುವರು ತೋಟವೊಂದನ್ನು ಗುತ್ತಿಗೆ ಮಾಡಿಕೊಂಡು ತೋಟದ ಮನೆಯಲ್ಲೇ ವಾಸವಿದ್ದಾರೆ. ನಿನ್ನೆ ತಡ ರಾತ್ರಿ ತೋಟದ ಮನೆಗೆ ನುಗ್ಗಿದ ಮೂವರು ದರೋಡೆಕೋರರ ತಂಡ ಮಾಲೀಕ  ಪ್ರದೀಪ್ ಮೇಲೆ ಖಾರದಪುಡಿ ಎರಚಿ ರಾಡ್ ನಿಂದ ಹಲ್ಲೆ ನಡೆಸಿದೆ. ಈ ವೇಳೆ ಮಾಲೀಕ ಪ್ರದೀಪ್ ಸಹ ಪ್ರತಿದಾಳಿ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಹೊಡೆದಾಟ ನಡೆದಿದೆ. ಇದೇ ಸಂದರ್ಭದಲ್ಲಿ ಮನೆಯ ಒಳಗಿನಿಂದ ಕಬ್ಬಿಣದ ರಾಡ್ ತಂದ ಪ್ರದೀಪ್ ದರೋಡೆಕೋರರ ಮೇಲೆ ಬೀಸಿದ ಪರಿಣಾಮ  ಓರ್ವ ದರೋಡೆಕೋರ ಸ್ಥಳದಲ್ಲೇ ಕುಸಿದುಬಿದ್ದಿದ್ದಾನೆ.


ಉಳಿದಿಬ್ಬರು ದರೋಡೆಕೋರರು  ಪ್ರದೀಪ್  ಕುತ್ತಿಗೆಯಲ್ಲಿದ್ದ ಚಿನ್ನದ ಸರ   ಹಾಗೂ ಆತನ ಪತ್ನಿ  ಕುತ್ತಿಗೆಯಲ್ಲಿದ್ದ ಬಳಿ ಇದ್ದ 40 ಗ್ರಾಂ ತೂಕದ ಚಿನ್ನದ ಸರ  ದೋಚಿ ಪರಾರಿಯಾಗಿದ್ದಾರೆ. ತಕ್ಷಣ ಪ್ರದೀಪ್ ಅವರು ಗ್ರಾಮಸ್ಥರಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಧಾವಿಸಿದ ಗ್ರಾಮಸ್ಥರು ಕುಸಿದುಬಿದ್ದು ಗಾಯಗೊಂಡಿದ್ದ ದರೋಡೆಕೋರನ ಕೈಕಾಲು ಕಟ್ಟಿ  ಗುಂಡ್ಲುಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ನಮ್ಮ ಜೀವಕ್ಕೆ ಏನಾದ್ರೂ ಆದ್ರೆ ಡಿಸಿಎಂ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್ ಕಾರಣ; ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್


ತಕ್ಷಣ ಸ್ಥಳಕ್ಕೆ ಧಾವಿಸಿದ ಗುಂಡ್ಲುಪೇಟೆ ಪೊಲೀಸರು ಕುಸಿದುಬಿದ್ದಿದ್ದ, ಗ್ರಾಮಸ್ಥರು ಹಿಡಿದಿಟ್ಟಿದ್ದ ದರೋಡೆಕೋರನನ್ನು ಬಂಧಿಸಿ ಕರೆದೊಯ್ದು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈತ ನೀಡಿದ ಸುಳಿವಿನ  ಮೇರೆಗೆ ಉಳಿದ ಸರ್ಕಲ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉಳಿದ ಇಬ್ಬರು ದರೋಡೆಕೋರರನ್ನು ಕೆಲವೆ ಗಂಟೆಗಳಲ್ಲಿ ಬಂಧಿಸುವಲ್ಲಿ   ಯಶಸ್ವಿಯಾಗಿದ್ದಾರೆ.


ಬಂಧಿತ ದರೋಡೆಕೋರರನ್ನು ಗುಂಡ್ಲುಪೇಟೆ ತಾಲೋಕು ಕೋಡಹಳ್ಳಿಯ ಸಿದ್ದ, ಪ್ರದೀಪ ಹಾಗೂ ರವಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ತೋಟದ ಮಾಲೀಕ ಪ್ರದೀಪ್ ನನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆ ಕೋರರನ್ನು ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾದ ಗುಂಡ್ಲುಪೇಟೆ ಪೊಲೀಸರ ಕಾರ್ಯಾಚರಣೆಗೆ ಹೊಂಗಳ್ಳಿ ಗ್ರಾಮಸ್ಥರಿಂದ ಶ್ಲಾಘನೆ ವ್ಯಕ್ತವಾಗಿದೆ.

top videos
    First published: