HOME » NEWS » State » CRIME NEWS PUC STUDENT KILLS COLLEGE MATE IN BANGLORE MAK

Crime News: ಮೂವರು ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಓರ್ವನ ಕೊಲೆಯಲ್ಲಿ ಅಂತ್ಯ!

ನಿನ್ನೆ ಸಂಜೆ ಕೊಲೆಯಾದ ವಿದ್ಯಾರ್ಥಿ ತನ್ನ ಸ್ನೇಹಿತನೊಂದಿಗೆ ಜಗಳ ಮಾಡಿಕೊಂಡಿದ್ದ. ನಿನ್ನೆ ಗಲಾಟೆ ಬಳಿಕ ಇಂದು ಮತ್ತೊಮ್ಮೆ ವಿದ್ಯಾರ್ಥಿಗಳು ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ 17 ವರ್ಷದ ವಿದ್ಯಾರ್ಥಿಯನ್ನು ಡ್ರ್ಯಾಗರ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

news18-kannada
Updated:March 9, 2021, 7:45 PM IST
Crime News: ಮೂವರು ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಓರ್ವನ ಕೊಲೆಯಲ್ಲಿ ಅಂತ್ಯ!
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು (ಮಾರ್ಚ್​ 09); ಮೂವರು ಪಿಯುಸಿ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ಕೊನೆಗೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಶವಂತಪುರದಲ್ಲಿ ಕಂಡು ಬಂದಿದೆ. 17 ವರ್ಷದ ಪಿಯುಸಿ ವಿದ್ಯಾರ್ಥಿಯನ್ನು ಇಬ್ಬರು ವಿದ್ಯಾರ್ಥಿಗಳು ಡ್ಯಾಗರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆ ಮಾಡಿದ ಹಾಗೂ ಕೊಲೆಯಾದ ವಿದ್ಯಾರ್ಥಿ ಎಲ್ಲರೂ ಅಪ್ರಾಪ್ತರು. ರೇವಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯ ಕೊಲೆಯಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿನ್ನೆ ಸಂಜೆ ಕೊಲೆಯಾದ ವಿದ್ಯಾರ್ಥಿ ತನ್ನ ಸ್ನೇಹಿತನೊಂದಿಗೆ ಜಗಳ ಮಾಡಿಕೊಂಡಿದ್ದ. ನಿನ್ನೆ ಗಲಾಟೆ ಬಳಿಕ ಇಂದು ಮತ್ತೊಮ್ಮೆ ವಿದ್ಯಾರ್ಥಿಗಳು ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ 17 ವರ್ಷದ ವಿದ್ಯಾರ್ಥಿಯನ್ನು ಡ್ರ್ಯಾಗರ್ ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿರುವ ಇಬ್ಬರೂ ಅಪ್ರಾಪ್ತ ವಿದ್ಯಾರ್ಥಿಗಳಾಗಿದ್ದು, ಘಟನೆ ಬಳಿಕ ಎಸ್ಕೇಪ್ ಆಗಿದ್ದಾರೆ. ಯಶವಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Death Penalty for the Rapist: ಉತ್ತರ ಪ್ರದೇಶದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಕೊಲೆಯಾದ ವಿದ್ಯಾರ್ಥಿ ಮತ್ತು ಕೊಲೆ ಮಾಡಿದ ವಿದ್ಯಾರ್ಥಿಗಳು ಅಪ್ರಾಪ್ತರಾಗಿರುವ ಕಾರಣ ಪೊಲೀಸ್​ ಅಧಿಕಾರಿಗಳು ಈವರೆಗೆ ಅವರ ಹೆಸರುಗಳನ್ನು ಬಹಿರಂಗಪಡಿಸಿಲ್ಲ. ಅಲ್ಲದೆ, ಕೊಲೆಗೆ ಕಾರಣವೂ ತಿಳಿದುಬಂದಿಲ್ಲ. ಇದೀಗ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುವ ಮೂಲಕ ಕೊಲೆಯ ಕಾರಣವನ್ನು ಬಹಿರಂಗಪಡಿಸಬೇಕಿದೆ. ಅಲ್ಲದೆ, ಮೃತ ವಿದ್ಯಾರ್ಥಿಯ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ.
Published by: MAshok Kumar
First published: March 9, 2021, 7:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories