• Home
  • »
  • News
  • »
  • state
  • »
  • Accident: ಕ್ರೂಸರ್ ಹಾಗೂ ಬೈಕ್​ ನಡುವೆ ಭೀಕರ ಅಪಘಾತ; ತಂದೆ, ಮಗಳು ಸಾವು, ತಾಯಿಗೆ ಗಂಭೀರ ಗಾಯ

Accident: ಕ್ರೂಸರ್ ಹಾಗೂ ಬೈಕ್​ ನಡುವೆ ಭೀಕರ ಅಪಘಾತ; ತಂದೆ, ಮಗಳು ಸಾವು, ತಾಯಿಗೆ ಗಂಭೀರ ಗಾಯ

ಅಪಘಾತದಲ್ಲಿ ತಂದೆ-ಮಗಳ ಸಾವು

ಅಪಘಾತದಲ್ಲಿ ತಂದೆ-ಮಗಳ ಸಾವು

ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ನಡೆದಿದೆ.

  • News18 Kannada
  • Last Updated :
  • Karnataka, India
  • Share this:

ವಿಜಯಪುರ (ನ.10): ಕ್ರೂಸರ್ ವಾಹನ (Cruiser Vehicle) ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ (Bike Accident) ಹೋಗ್ತಿದ್ದ ತಂದೆ, ಮಗಳು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ (Vijayapura) ಜಿಲ್ಲೆಯ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ನಡೆದಿದೆ. ರಮೇಶ್ ನಾಟಿಕಾರ (35), ಪುತ್ರಿ ಖುಷಿ (8) ಮೃತ ದುರ್ದೈವಿಪೊಯಾಗಿದ್ದಾರೆ. ಇನ್ನು ಈ ಭೀಕರ ಅಪಘಾತದಲ್ಲಿ (Accident) ರಮೇಶ್ ನಾಟಿಕಾರ ಅವರ ಪತ್ನಿ ಶ್ರೀದೇವಿಗೆ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆ (District Hospital) ದಾಖಲು ಮಾಡಲಾಗಿದೆ. 


cruiser and bike Accident in vijayapura father daughter death mother critically injured
ಅಪಘಾತದಲ್ಲಿ ತಂದೆ-ಮಗಳ ಸಾವು


ಕ್ರೂಸರ್ ಸಮೇತ ಚಾಲಕ ಎಸ್ಕೇಪ್​


ರಮೇಶ್ ನಾಟಿಕಾರ ಅವರು ಬಸವನಬಾಗೇವಾಡಿ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಕ್ರೂಸರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: Karnataka Weather Report: ರಾಜ್ಯದಲ್ಲಿ ಚಳಿ ಆರಂಭ, ಕೋಲಾರದಲ್ಲಿ ಮುಂದುವರೆಯಲಿದೆ ಮಳೆಯಬ್ಬರ!


ಹಾಸನದಲ್ಲಿ KSRTC ಬಸ್​ ಡಿಕ್ಕಿ ಹಲವರಿಗೆ ಗಾಯ


ಕೆಎಸ್ಆರ್​ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣ್ಣೇನಳ್ಳಿ-ಜೋಡಿಗಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಓರ್ವ ಪತ್ರಕರ್ತನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ


ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕೆಎಸ್ಆರ್​ಟಿಸಿ ಬಸ್ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: BBMP Tax Fraud: ಬೆಂಗಳೂರಿನಲ್ಲಿ ಬೃಹತ್ ಪ್ರಮಾಣದ ತೆರಿಗೆ ವಂಚನೆ; 130 ಕೋಟಿ ಗುಳುಂ


ಬೀದರ್​ನಲ್ಲಿ ಭೀಕರ ಅಪಘಾತ 5 ಮಂದಿ ಸಾವು


ಐಶರ್ ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಐವರ ಸಾವನ್ನಪ್ಪಿರುವ (Death) ದಾರುಣ ಘಟನೆ ಬೀದರ್ (Bidar) ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ನಡೆದಿತ್ತು. ಭೀಕರ ಅಪಘಾತದಲ್ಲಿ (Accident) ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು (Women) ಸಾವನ್ನಪ್ಪಿದ್ದಾರೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಸಾವೀಗೀಡಾದ ದುರ್ದೈವಿಗಳಾಗಿದ್ದಾರೆ.


ಗಾಯಾಳುಗಳು ಆಸ್ಪತ್ರೆಗೆ ದಾಖಲು


ಇನ್ನು ಅಪಘಾತದಲ್ಲಿ 6 ಜನ‌ ಗಾಯಾಳುಗಳನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.  ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.


ಒಂದೇ ಕುಟುಂಬದ ಮೂವರ ಸಾವು


ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ನಾಲ್ಕು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ (Shivamogga Accident) ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಂಚಿನಕೊಪ್ಪದಲ್ಲಿ (Manchinakoppa, Shikaripura) ಅಪಘಾತ ನಡೆದಿತ್ತು. ಹಲುಗಿನಕೊಪ್ಪ ಮೂಲದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು. ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮಲ್ಲಿಕಾರ್ಜುನ್ ಎಂಬವರು ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ತೆರಳುತ್ತಿದ್ದರು.


ಕಾರ್​ ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು. ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ್, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಗಾಯಳುಗಳನ್ನು ಶಿಕಾರಿಪುರದ ಆಸ್ಪತ್ರೆಗೆ ರವಾನಿಸಲಾಗಿತ್ತು.

Published by:ಪಾವನ ಎಚ್ ಎಸ್
First published: