HOME » NEWS » State » CT RAVI BJP GENERAL SECRETARY CT RAVI APPOINTED AS KARNATAKA AND SOUTH INDIAN STATE BJP IN CHARGE SCT

CT Ravi: ಸಿ.ಟಿ. ರವಿಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಉಸ್ತುವಾರಿ ನೀಡಿದ ಬಿಜೆಪಿ ಹೈಕಮಾಂಡ್

CT Ravi: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಿ.ಟಿ. ರವಿ ಅವರಿಗೆ ಬಿಜೆಪಿ ಹೈಕಮಾಂಡ್ ದಕ್ಷಿಣ ಭಾರತದ ಉಸ್ತುವಾರಿಯನ್ನು ವಹಿಸಿದೆ. ಇದೇ ಮೊದಲ ಬಾರಿಗೆ ರಾಜ್ಯದವರೇ ಕರ್ನಾಟಕ ರಾಜ್ಯ ಬಿಜೆಪಿಗೆ ಉಸ್ತುವಾರಿಯಾಗಿದ್ದಾರೆ.

news18-kannada
Updated:October 7, 2020, 1:44 PM IST
CT Ravi: ಸಿ.ಟಿ. ರವಿಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಉಸ್ತುವಾರಿ ನೀಡಿದ ಬಿಜೆಪಿ ಹೈಕಮಾಂಡ್
ಸಿ ಟಿ ರವಿ
  • Share this:
ನವದೆಹಲಿ (ಅ. 7): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಚಿಕ್ಕಮಗಳೂರು ಶಾಸಕ ಅವರಿಗೆ ಬಿಜೆಪಿ ಹೈಕಮಾಂಡ್​ ಮತ್ತೊಂದು ಪ್ರಮುಖ ಜವಾಬ್ದಾರಿ ವಹಿಸಿದೆ. ರಾಷ್ಟ್ರ ಮಟ್ಟದ ಜವಾಬ್ದಾರಿ ಇರುವುದರಿಂದ ಎರಡು ಹುದ್ದೆಗಳನ್ನು ನಿಭಾಯಿಸಲು ಕಷ್ಟವಾಗುತ್ತದೆ ಎಂದು ಬಿ.ಎಸ್. ಯಡಿಯೂರಪ್ಪನವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಿ.ಟಿ. ರವಿ ಅವರು ಕೆಲವೇ ದಿನಗಳ ಹಿಂದೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಸಿಟಿ ರವಿ ಅವರಿಗೆ ದಕ್ಷಿಣ ಭಾರತದ ಸಂಪೂರ್ಣ ಉಸ್ತುವಾರಿ ನೀಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

ನಿನ್ನೆ ಜೆ.ಪಿ. ನಡ್ಡಾ ಅವರ ನೇತೃತ್ವದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ ಬಿಜೆಪಿ ಹೈಕಮಾಂಡ್ ಸಿ.ಟಿ. ರವಿ ಅವರನ್ನು ದಕ್ಷಿಣ ಭಾರತದ ಉಸ್ತುವಾರಿಯಾಗಿ ನೇಮಕ ಮಾಡಿದೆ. ಸಿಟಿ ರವಿ ಕರ್ನಾಟಕದ ಉಸ್ತುವಾರಿ ಕೂಡ ಆಗಿದ್ದಾರೆ. ಇದೇ ಮೊದಲ ಬಾರಿಗೆ ರಾಜ್ಯದವರೇ ಕರ್ನಾಟಕ ರಾಜ್ಯ ಬಿಜೆಪಿಗೆ ಉಸ್ತುವಾರಿಯಾಗಿದ್ದಾರೆ. ಸದ್ಯ ತಾತ್ಕಾಲಿಕವಾಗಿ ಉಸ್ತುವಾರಿ ಸ್ಥಾನ ನೀಡಿರುವ ಹೈಕಮಾಂಡ್ ಬಿಹಾರ ಚುನಾವಣೆ ಬಳಿಕ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ನ್ಯೂಸ್ 18 ಕನ್ನಡಕ್ಕೆ ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Youtube Video

ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಟಿ. ರವಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಸಿ.ಟಿ. ರವಿ ಅವರಿಗೆ ಬಂಪರ್ ಅವಕಾಶವನ್ನು ನೀಡಿದೆ. ಕಳೆದ ತಿಂಗಳಾಂತ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮತ್ತು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿತ್ತು.
Published by: Sushma Chakre
First published: October 7, 2020, 1:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories