ಕೊರೋನಾ ಸೋಂಕಿನಿಂದ ಗುಣಮುಖನಾಗಿದ್ದೇನೆ, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ; ಸಚಿವ ಶ್ರೀರಾಮುಲು

ಆತ್ಮೀಯರೆ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ‌ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು ಎಂದು ಶ್ರೀರಾಮುಲು ಅಭಿನಂದಿಸಿದ್ಧಾರೆ.

ಸಚಿವ ಶ್ರೀರಾಮುಲು.

ಸಚಿವ ಶ್ರೀರಾಮುಲು.

 • Share this:
  ಬೆಂಗಳೂರು (ಆಗಸ್ಟ್‌ 26); ಮಾರಣಾಂತಿಕ ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಚಿವ ಬಿ. ಶ್ರೀರಾಮುಲು ತಾವು ಈ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುವುದಾಗಿ ಸ್ವತಃ ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

  ಕಳೆದ ಆಗಸ್ಟ್‌ 09ರಂದು ಕೊರೋನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು, ಶಿವಾಜಿ ನಗರದ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಲು ಮುಂದಾಗಿದ್ದರು. ಅವರ ಈ ಕ್ರಮ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಶೆಗೆ ಕಾರಣವಾಗಿತ್ತು. ಎರಡು ವಾರಗಳ ಚಿಕಿತ್ಸೆ ಬಳಿಕ ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಹೇಳಲಾಗುತ್ತಿದೆ.  ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು, " ಆತ್ಮೀಯರೆ, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ‌ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು" ಎಂದು ಅಭಿನಂದಿಸಿದ್ಧಾರೆ.

  ಅಲ್ಲದೆ, ಈ ಸಂದರ್ಭದಲ್ಲಿ, ಸಹಕಾರ ನೀಡಿದ‌ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಅವರಿಗೂ ಮತ್ತು ಸಂಪುಟದ ಸಹೋದ್ಯೋಗಿಗಳಿಗೂ ಹಾಗೂ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳು" ಎಂದು ತಿಳಿಸಿದ್ದಾರೆ.  ಮತ್ತೊಂದು ಟ್ವೀಟ್‌ನಲ್ಲಿ, "ಚಿತ್ರದುರ್ಗದಲ್ಲಿನ ಆರೋಗ್ಯ ಕವಚ ಅಂಬ್ಯುಲೆನ್ಸ್ ನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿ ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರಿ ಆಸ್ತಿಗಳನ್ನು ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಕೆ ನೀಡಿದ್ದಾರೆ.
  Published by:MAshok Kumar
  First published: