ಬೆಂಗಳೂರು (ಜೂನ್ 22); ಮೂತ್ರ ವಿಸರ್ಜನೆ ವೇಳೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕರಿಯಪ್ಪ(22) ಹಾಗೂ ನಾಗರಾಜು(19) ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಯಚೂರು ಜಿಲ್ಲೆಯ ಕಾರ್ಮಿಕರಾಗಿದ್ದು, ಒಜಾಸ್ ಕಂಪೆನಿಯಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಇದೇ ಕಂಪೆನಿ ಮೂಲಕ ರಾಜಕಾಲುವೆ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದರು. ಆದರೆ, ದುರಾದೃಷ್ಟವಶಾತ್ ಕರೆಂಟ್ ಶಾಕ್ಗೆ ಬಲಿಯಾಗಿದ್ದಾರೆ.
ನಿನ್ನೆ ಮಲ್ಲಸಂದ್ರ ಬಳಿಯ ರಾಜಕಾಲುವೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಕಾರ್ಮಿಕರು, ಈ ವೇಳೆ ಮೂತ್ರ ವಿಸರ್ಜನೆಗೆ ಹೋದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ವಿರುದ್ದವೂ ಕೇಸ್ ದಾಖಲಿಸಿದ್ದಾರೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ