HOME » NEWS » State » CWC MEETING KARNATAKA CONGRESS LEADERS CONTINUE TO SUPPORT GANDHI FAMILY FOR AICC IN CHARGE SNVS

CWC Meeting: ಗಾಂಧಿ ಕುಟುಂಬದವರೇ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲಿ: ಮುಂದುವರಿದಿದೆ ಕರ್ನಾಟಕ ಕಾಂಗ್ರೆಸ್ಸಿಗರ ಬೆಂಬಲ

ಗಾಂಧಿ ಕುಟುಂಬದವರು ದೇಶ ಮತ್ತು ಪಕ್ಷಕ್ಕಾಗಿ ಪ್ರಾಣವನ್ನೇ ಅರ್ಪಿಸಿದ್ಧಾರೆ. ಅವರು ಪಕ್ಷ ಮುನ್ನಡೆಸಬೇಕೆಂಬುದು ಎಲ್ಲಾ ನಾಯಕರು ಮತ್ತು ಕಾರ್ಯಕರ್ತರ ಅಭಿಪ್ರಾಯ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

news18-kannada
Updated:August 24, 2020, 3:17 PM IST
CWC Meeting: ಗಾಂಧಿ ಕುಟುಂಬದವರೇ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲಿ: ಮುಂದುವರಿದಿದೆ ಕರ್ನಾಟಕ ಕಾಂಗ್ರೆಸ್ಸಿಗರ ಬೆಂಬಲ
ರಾಹುಲ್ ಗಾಂಧಿ.
  • Share this:
ಬೆಂಗಳೂರು(ಆ. 24): ಗಾಂಧಿ ಕುಟುಂಬದ ಸದಸ್ಯರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಕೂಗು ಕರ್ನಾಟಕದಲ್ಲಿ ಹೆಚ್ಚು ಬಲ ಪಡೆದಿದೆ. ಸಿದ್ದರಾಮಯ್ಯ ಆದಿಯಾಗಿ ರಾಜ್ಯದ ಬಹುತೇಕ ಕಾಂಗ್ರೆಸ್ ಮುಖಂಡರು ಗಾಂಧಿ ಕುಟುಂಬದ ಪರವಾಗಿ ಧ್ವನಿಗೂಡಿಸಿದ್ದಾರೆ. ಕೇಂದ್ರ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಈ ಹಿಂದೆಯೇ ಈ ವಿಚಾರದ ಬಗ್ಗೆ ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದು ಗಾಂಧಿ ಕುಟುಂಬದವರೇ ಕಾಂಗ್ರೆಸ್ ಅಧ್ಯಕ್ಷರಾಗುವುದು ಸೂಕ್ತ ಎಂದಿದ್ದಾರೆ. ಇದೀಗ ಹಿರಿಯ ಕಾಂಗ್ರೆಸ್ ಮುಖಂಡರಾದ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಯು.ಟಿ. ಖಾದರ್ ಕೂಡ ಇದನ್ನ ಬೆಂಬಲಿಸಿದ್ದಾರೆ.

ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ಅಪಾರವಾದ ತ್ಯಾಗ, ಬಲಿದಾನ ಮಾಡಿದ್ದಾರೆ. ತಮ್ಮ ಸರ್ವಸ್ವವನ್ನೂ ದೇಶಕ್ಕಾಗಿ ಅರ್ಪಣೆ ಮಾಡಿದ್ದಾರೆ. ಅಲ್ಲದೆ, ದೀರ್ಘವಾದ ಸೆರೆವಾಸವನ್ನೂ ಅನುಭವಿಸಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಕಟ್ಟುವಲ್ಲಿಯೂ ಗಾಂಧಿ ಕುಟುಂಬದ ಕೊಡುಗೆ ಅಪಾರವಾಗಿದೆ. ಗಾಂಧಿ ಕುಟುಂಬದಿಂದಲೇ ನಾಯಕತ್ವ ಮುಂದುವರಿದರೆ ಒಳ್ಳೆಯದು. ಎಐಸಿಸಿ ಹೊಣೆಗಾರಿಕೆಯನ್ನು ಅವರೇ ವಹಿಸಿಕೊಳ್ಳುವುದು ಸೂಕ್ತ ಎಂದು ಎಸ್.ಆರ್. ಪಾಟೀಲ್ ಮನವಿ ಮಾಡಿದ್ದಾರೆ.
ಇನ್ನು, ದಿನೇಶ್ ಗುಂಡೂರಾವ್ ಅವರು ರಾಹುಲ್ ಗಾಂಧಿ ಕಾಂಗ್ರೆಸ್ ಚುಕ್ಕಾಣಿ ಹಿಡಿಯಲು ಸೂಕ್ತ ವ್ಯಕ್ತಿ ಎಂದಿದ್ದಾರೆ.ಗಾಂಧಿ ಕುಟುಂಬದ ನಾಯಕತ್ವವನ್ನ ಕಾರ್ಯಕರ್ತರು ಒಪ್ಪಿದ್ದಾರೆ. ಗಾಂಧಿ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ತಾವೇ ಪ್ರಧಾನಿ ಆಗಿ ಎಂದು ಮನಮೋಹನ್ ಸಿಂಗ್ ಹೇಳಿದರೂ ಸೋನಿಯಾ ಗಾಂಧಿ ಪಿಎಂ ಆಗಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಬಿಜೆಪಿ ರೀತಿಯಲ್ಲಿ ಬೇರೆ ಯಾರೋ ಕಂಟ್ರೋಲ್ ಮಾಡುವುದಿಲ್ಲ ಎಂದು ದಿನೇಶ್ ಗುಂಡೂರಾವ್ ನ್ಯೂಸ್18ಗೆ ಹೇಳಿದ್ದಾರೆ.

ಇದನ್ನೂ ಓದಿ: ನೂರಾರು ವರ್ಷ ಗಾಂಧಿ-ನೆಹರು ಕುಟುಂಬ ಮಾಡಿದ ತ್ಯಾಗವನ್ನು ಕಾಂಗ್ರೆಸ್ ಮರೆಯಬಾರದು; ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದು ಸೂಕ್ತ. ಅವರು ಇಡೀ ದೇಶ ಸುತ್ತಿದ್ದಾರೆ. ಪ್ರತಿ ರಾಜ್ಯದ ನಾಯಕರು ಗೊತ್ತಿದ್ದಾರೆ. ಜಿಎಸ್​ಟಿ, ನೋಟು ಅಮಾನ್ಯೀಕರಣ, ಕೋವಿಡ್ ಮುನ್ನೆಚ್ಚರಿಕೆ ಇವೆಲ್ಲವೂ ಅವರು ಹೇಳಿದಂತೆ ಆಗಿವೆ. ಈ ಹಿನ್ನೆಲೆಯಲ್ಲಿ ರಾಹುಲ್ ಅಧ್ಯಕ್ಷರಾದರೆ ಉತ್ತಮ ಎಂದಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು; ಸಿದ್ದರಾಮಯ್ಯ, ಈಶ್ವರ ಖಂಡ್ರೆ ಬೆಂಬಲ

ಇದಕ್ಕೆ ಯು.ಟಿ. ಖಾದರ್ ಕೂಡ ಧ್ವನಿಗೂಡಿಸಿದ್ದು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು. ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಗಾಂಧಿ ಕುಟುಂಬದ ಪರ ಇದೆ. ರಾಹುಲ್ ಗಾಂಧಿಯೇ ಎಐಸಿಸಿ ಅಧ್ಯಕ್ಷರಾದರೆ ಸೂಕ್ತ ಎಂದು ಹೇಳಿಕೆ ನೀಡಿದ್ದಾರೆ.
Published by: Vijayasarthy SN
First published: August 24, 2020, 1:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories