Karnataka Weather Today:ಅಕ್ಟೋಬರ್ ಬಂದರೂ ನಿಲ್ಲದ ವರುಣನ ಆರ್ಭಟ -ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ

Rainfall: ವಾಯುಭಾರ ಕುಸಿತದ ಪರಿಣಾಮದಿಂದಾಗಿ ಹಲವು ರಾಜ್ಯಗಳಿಗೆ  ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ

ಸಾಂದರ್ಭಿ ಚಿತ್ರ

ಸಾಂದರ್ಭಿ ಚಿತ್ರ

  • Share this:
Karnataka Rains Today ಬೆಂಗಳೂರು(ಅ.04):ಈಗಾಗಲೇ ರಾಜ್ಯದಲ್ಲಿ ಶಾಹೀನ್ ಚಂಡಮಾರುತ(Cyclone Shaheen) ಪ್ರಭಾವ ಬೀರಿದ್ದು ಉತ್ತರ ಒಳನಾಡು ಮತ್ತು ಕರಾವಳಿ(Coastal Districts) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಧ್ಯೆ ಅಕ್ಟೋಬರ್​ 6 ವರೆಗೆ  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ ಸೋಮವಾರ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಅಕ್ಟೋಬರ್ 5 ಮತ್ತು 6ರಂದು ಅಂದರೆ ಮಂಗಳವಾರ ಮತ್ತು ಬುಧವಾರ  ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ (Orange Alert)ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಅವಧಿ ಪೂರ್ಣಗೊಂಡಿದೆ. ಆದರೆ ಚಂಡಮಾರುತದ ಪ್ರಭಾವದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.  ಶಾಹೀನ್​ ಚಂಡಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ  ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ಪೂರ್ವ-ಮಧ್ಯ ಅರಬ್ಬೀ ಸಮುದ್ರದಿಂದ ಚಂಡಮಾರುತ ಹಾದುಹೋಗಲಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ

ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 6ರ ತನಕ ಮಳೆಯಾಗಲಿದ್ದು, ಶಾಹೀನ್ ಚಂಡಮಾರುತದ ಪರಿಣಾಮ ಗುಜರಾತ್ ಕರಾವಳಿ ಪ್ರದೇಶ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಸೋಮವಾರ ಭಾರೀ ಮಳೆಯಾಗುವ  ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಹೇಗಿದೆ ಚಂಡಮಾರುತದ ಪ್ರಭಾವ?

ಶಾಹೀನ್ ಚಂಡಮಾರುತ ಭಾರತದ ಕರಾವಳಿ ತೀರಗಳಿಂದ ದೂರ  ಹೋಗಿದೆ ಆದರೆ ಒಮಾನ್‌ನಲ್ಲಿ ತನ್ನ ಪ್ರಭಾವ ಮುಂದುವರೆಸಿದೆ. ಚಂಡಮಾರುತ ಪರಿಚಲನೆಯು ಸಮುದ್ರ ಮಟ್ಟಕ್ಕಿಂತ 4.5 ಕಿ.ಮೀವರೆಗೂ ವಿಸ್ತರಿಸಿದೆ. ಇನ್ನೊಂದು ಚಂಡಮಾರುತದ ಪರಿಚಲನೆಯು ನೈರುತ್ಯ ಬಂಗಾಳ ಕೊಲ್ಲಿಯಲ್ಲಿದೆ. ಇದು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿಮೀ ವರೆಗೆ ವಿಸ್ತರಿಸಿದೆ. ಆದರೆ ಚಂಡಮಾರುತದ ಪ್ರಭಾವ ಕೆಲ ರಾಜ್ಯಗಳ ಮೇಲೆ ಬೀರಿದ್ದು, ಈ ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಾಯುಭಾರ ಕುಸಿತದ ಪರಿಣಾಮದಿಂದಾಗಿ ಹಲವು ರಾಜ್ಯಗಳಿಗೆ  ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಮುಂದಿನ 24 ಗಂಟೆಗಳ ದೇಶದ ಹವಾಮಾನ ಸ್ಥಿತಿ ಹೆಗಿದೆ? 

ಮುಂದಿನ 24 ಗಂಟೆಗಳಲ್ಲಿ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಮತ್ತು ದಕ್ಷಿಣ ಒಳನಾಡು ಕರ್ನಾಟಕ, ಕೇರಳ ಮತ್ತು ಕೆಲವು  ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಚಂಡಮಾರುತ ಹೆಚ್ಚು ಪ್ರಭಾವ ಬೀರುತ್ತಿರುವ  ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾದ ಕೆಲವು ಭಾಗಗಳು, ಛತ್ತೀಸ್‌ಗಢದ ಕೆಲವು ಭಾಗ, ಮಧ್ಯಪ್ರದೇಶದ ಕೆಲವು ಭಾಗ, ವಿದರ್ಭ, ಮರಾಠವಾಡ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ನಿಲ್ಲದ ಪವರ್ ಕಟ್ ಸಮಸ್ಯೆ -ಇಂದೂ ಸಹ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ..

ಆಗ್ನೇಯ ರಾಜಸ್ಥಾನ, ದಕ್ಷಿಣ ಗುಜರಾತ್ ಮತ್ತು ತೆಲಂಗಾಣ, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ.
Published by:Sandhya M
First published: