Karnataka Weather Report: ಇಂದಿನಿಂದ 2 ದಿನ ಬೆಂಗ್ಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಮಳೆ ಗುರೂ.. ಸ್ವಲ್ಪ ಹುಷಾರು..!

Karnataka Weather Report: ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮೋಡ ಕವಿದ ವಾತವರಣ ಇರಲಿದೆ. ಇಂದು ಗರಿಷ್ಠ  27, ಕನಿಷ್ಠ  18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ(Bengaluru Rain)ಯಾಗುವ ಸಾಧ್ಯತೆಗಳಿವೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕಳೆದ ಒಂದು ವಾರದಿಂದ ರಾಜ್ಯದಲ್ಲಿ (Karnataka) ಮೋಡ ಕವಿದ ವಾತಾವರಣ ನಿರ್ಮಾಣ(Cloudy Weather)ವಾಗಿದ್ದು, ಇಂದು ಸಹ ಅದೇ ವಾತಾವರಣ ಮುಂದುವರಿಯಲಿದೆ.  ಇತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ(Rainfall)ಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಭಾಗಗಳಲ್ಲಿ ಚಳಿಯ (Cold Weather) ಪ್ರಮಾಣ ಹೆಚ್ಚಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಎಂದಿನಂತೆ ಪ್ರಖರತೆಯಿಂದ ಬಿಸಿಲು ಇರಲಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮೋಡ ಕವಿದ ವಾತವರಣ ಇರಲಿದೆ. ಇಂದು ಗರಿಷ್ಠ  27, ಕನಿಷ್ಠ  18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕೆಲ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ(Bengaluru Rain)ಯಾಗುವ ಸಾಧ್ಯತೆಗಳಿವೆ. ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. 

ವಾಡಿಕೆಗಿಂತ ಹೆಚ್ಚಿನ ಮಳೆ

ಭಾರತೀಯ ಹವಾಮಾನ ಇಲಾಖೆ (IMD), ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರುವರಿ ವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉಡುಪಿ 31-24, ಮಂಗಳೂರು 30-24, ಉತ್ತರ ಕನ್ನಡ 29-20, ಧಾರವಾಡ 28-19, ಹಾವೇರಿ 29-20, ಹುಬ್ಬಳ್ಳಿ 28-19, ಬೆಳಗಾವಿ 27-19, ಗದಗ 28-19, ಕೊಪ್ಪಳ 29-21, ವಿಜಯಪುರ 28-20, ಬಾಗಲಕೋಟ 29-21, ಕಲಬುರಗಿ 29-20, ಬೀದರ್ 28-17, ಯಾದಗಿರಿ 31-21, ರಾಯಚೂರ 31-21, ಬಳ್ಳಾರಿ 29-21

ಇದನ್ನು ಓದಿ : ಸೂರ್ಯಗ್ರಹಣದ ಈ ದಿನ ಹೇಗಿರಲಿದೆ 12 ರಾಶಿಗಳ ಮೇಲಿನ ಪರಿಣಾಮ

ಅರೇಬಿಯನ್ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಹಾರಾಷ್ಟ್ರ, ಗುಜರಾತ್‌ನಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮುಂಬೈ, ಅದರ ಉಪನಗರಗಳು, ಉತ್ತರ ಮತ್ತು ಮಧ್ಯ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಬುಧವಾರ ಮಳೆ ಸುರಿದಿದೆ. ಪಾಲ್ಘರ್, ಥಾಣೆ, ರಾಯಗಡ, ಮುಂಬೈ, ನಾಸಿಕ್, ಧುಲೆ, ನಂದೂರ್‌ಬಾರ್‌ನಲ್ಲಿ ನಿನ್ನೆ ಮಳೆಯಾಗಿದೆ.

 ಜವಾದ್ ಚಂಡಮಾರುತ

ಇಂದು ಜವಾದ್ ಚಂಡಮಾರುತ ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿರುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾದ ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ:  Corona Vaccine: ಎರಡೂ ವ್ಯಾಕ್ಸಿನ್ ಆಗದಿದ್ರೆ ಬೆಂಗ್ಳೂರಲ್ಲಿ ಮಾಲ್, ಪಾರ್ಕಿಗೆ ನೋ ಎಂಟ್ರಿ!

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು  ಶುಕ್ರವಾರ ಲಘುವಾಗಿ ಸಾಧಾರಣ ಮಳೆಗೆ ಸಾಕ್ಷಿಯಾಗಬಹುದು ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಇಂದಿನಿಂದ ವಾರಾಂತ್ಯದವರೆಗೆ ಆಂಧ್ರಪ್ರದೇಶ, ಒಡಿಶಾದಿಂದ ಗಂಗಾನದಿ ಪಶ್ಚಿಮ ಬಂಗಾಳದವರೆಗೆ ಕರಾವಳಿಯಾದ್ಯಂತ ಒಟ್ಟು 150-200 ಮಿಮೀ ಮಳೆಯ ಪ್ರಮಾಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ತಪಾಮಾನ ಮತ್ತಷ್ಟು ಇಳಿಕೆಯಾಗಲಿದೆ.

ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. 10ರಿಂದ 15 ನಿಮಿಷಗಳ ಕಾಲ ಮಳೆ ಸುರಿದಿದೆ. ಇಂದೂ ಕೂಡ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮುಂಗಾರು ಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ(Rainfall) ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
Published by:Vasudeva M
First published: