Darshan: ಪಕ್ಷಕ್ಕಿಂತ ನನಗೆ ವ್ಯಕ್ತಿ ಮುಖ್ಯ; ಮುನಿರತ್ನ ಪರ ನಟ​ ದರ್ಶನ್​ ಪ್ರಚಾರ

DBoss Darshan: ನಾನು ಯಾವುದೇ ಪಕ್ಷವನ್ನು ನೋಡಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರ ಮಾಡುತ್ತಿದ್ದೇನೆ. ಕೊರೋನಾ ಲಾಕ್​ಡೌನ್ ಸಮಯದಲ್ಲಿ ಬಡವರು, ಶ್ರೀಮಂತರು ಅನ್ನದೆ ಎಲ್ಲರೂ ಸಂಕಷ್ಟದಲ್ಲಿದ್ದರು. ಅಂಥವರಿಗೆ ಮುನಿರತ್ನ ಸಹಾಯಹಸ್ತ ನೀಡಿದ್ದರು ಎಂದು ನಟ ದರ್ಶನ್​ ಹೇಳಿದ್ದಾರೆ.

ದರ್ಶನ್

ದರ್ಶನ್

  • Share this:
ಬೆಂಗಳೂರು (ಅ. 30): ಆರ್​ಆರ್​ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಪರವಾಗಿ ಇಂದು ಚುನಾವಣಾ ಪ್ರಚಾರ ಪಡೆಸುತ್ತಿದ್ದಾರೆ. ಯಶವಂತಪುರದಿಂದ ರೋಡ್​ ಶೋ ನಡೆಸುತ್ತಿರುವ ದರ್ಶನ್​ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮುನಿರತ್ನ ಅವರ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೆಯೂ ಅವರ ಪರ ಪ್ರಚಾರ ಮಾಡಿದ್ದೇನೆ. ಕೊರೋನಾ ಸಮಯದಲ್ಲಿ ಮುನಿರತ್ನ ಅವರು ಹೇಗೆ ಕೆಲಸ ಮಾಡಿದ್ದಾರೆ ಎಂಬುದನ್ನು ನೋಡಿದ್ದೇನೆ. ಅವರು ಸಾವಿರಾರು ಬಡ ಜನರಿಗೆ ಸಹಾಯ ಮಾಡಿದ್ದಾರೆ. ಅವರ ಕೆಲಸಗಳನ್ನು ನೋಡಿಯೇ ನಾನಿಂದು ಅವರ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಈ ವೇಳೆ ನಟ ದರ್ಶನ್​ ಹೇಳಿದ್ದಾರೆ.

ನಾನು ಯಾವುದೇ ಪಕ್ಷವನ್ನು ನೋಡಿ ಪ್ರಚಾರ ಮಾಡುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರ ಮಾಡುತ್ತಿದ್ದೇನೆ. ಕೊರೋನಾ ಲಾಕ್​ಡೌನ್ ಸಮಯದಲ್ಲಿ ಬಡವರು, ಶ್ರೀಮಂತರು ಅನ್ನದೆ ಎಲ್ಲರೂ ಸಂಕಷ್ಟದಲ್ಲಿದ್ದರು. ಅಂಥವರಿಗೆ ಮುನಿರತ್ನ ಸಹಾಯಹಸ್ತ ನೀಡಿದ್ದರು. ನಾನೂ ಊಟಕ್ಕೆ, ಹಾಲು ಸಿಗದೆ ಸಮಸ್ಯೆ ಎದುರಿಸಿದ್ದೆ. ಆರ್​ಆರ್​ ನಗರದಲ್ಲಿ ಉತ್ತಮ ರಸ್ತೆಗಳಾಗಿವೆ, ಅಭಿವೃದ್ಧಿ ಕೆಲಸಗಳು ಆಗಿವೆ. ಅದನ್ನು ಗಮನದಲ್ಲಿಟ್ಟುಕೊಂಡು ನಾನು ಮುನಿರತ್ನ ಅವರ ಪರವಾಗಿ ಮತಯಾಚನೆ ಮಾಡುತ್ತಿದ್ದೇನೆ ಎಂದು ದರ್ಶನ್​ ಹೇಳಿದ್ದಾರೆ.

ಇಂದು ಬೆಳಗ್ಗೆ 10.30ಕ್ಕೆ ಯಶವಂತಪುರದಿಂದ ದರ್ಶನ್​ ಚುನಾವಣಾ ಪ್ರಚಾರ ಶುರುವಾಗಿದೆ. ಈ ವೇಳೆ ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ಇರಿಸಲಾಗಿದೆ. ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ಭದ್ರತೆಗಾಗಿ ಒಬ್ಬರು ಡಿಸಿಪಿ, 3 ಜನ ಎಸಿಪಿ, 5 ಜನ ಇನ್​ಸ್ಪೆಕ್ಟರ್, 15 ಜನ ಸಬ್ ಇನ್​ಸ್ಪೆಕ್ಟರ್, 50 ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಕೆಎಸ್ ಆರ್ ಪಿ ತುಕಡಿ, 1 ಸಿಎಆರ್​ ತುಕಡಿ ಕೂಡ ಭದ್ರತೆಗಾಗಿ ನಿಯೋಜನೆ‌ ಮಾಡಲಾಗಿದೆ. ಈಗಾಗಲೇ ಯಶವಂತಪುರದಲ್ಲಿ ರೋಡ್​ ಶೋ ನಡೆಸಲಾಗುತ್ತಿದ್ದು, ಮಧ್ಯಾಹ್ನ 1.15 ಗಂಟೆಗೆ ಜಾಲಹಳ್ಳಿ ವಿಲೇಜ್ ಮೂಲಕವಾಗಿ ರೋಡ್ ಶೋ ನಡೆಸಲಾಗುತ್ತದೆ.

ಮಧ್ಯಾಹ್ನ 2 ಗಂಟೆಗೆ ಹೆಚ್.ಎಂ.ಟಿ ಪೀಣ್ಯದಿಂದ‌ ಗೊರಗುಂಟೆಪಾಳ್ಯದಲ್ಲಿ, ಸಂಜೆ 4 ಗಂಟೆಗೆ‌ ಲಕ್ಷ್ಮಿದೇವಿನಗರದ ಕೂಲಿನಗರ ಸೇತುವೆಯಿಂದ ರೋಡ್ ಶೋ ನಡೆಯಲಿದೆ. ಸಂಜೆ 5 ಗಂಟೆಗೆ ಲಗ್ಗೆರೆ ಆಲದಮರ ಸರ್ಕಲ್ ಮೂಲಕ ಕೊಟ್ಟಿಗೆಪಾಳ್ಯ ಪೈಪ್ ಲೈನ್, ಸುಂಕದಕಟ್ಟೆಗಳಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 6 ಗಂಟೆಗೆ ಕೊಟ್ಟಿಗೆಪಾಳ್ಯದ ಬಿಡಿಎ ಕಾಂಪ್ಲೆಕ್ಸ್ ವರೆಗೆ, ರಾತ್ರಿ 8.15ಕ್ಕೆ ಜ್ಞಾನಭಾರತಿಯ ಕೆಂಗುಂಟೆ, ಮಲ್ಲತ್ತಹಳ್ಳಿಗಳ್ಳಿ ರೋಡ್ ಶೋ, ರಾತ್ರಿ 9:00 ವರೆಗೆ ವಾರ್ಡ್ ರಾಜರಾಜೇಶ್ವರಿನಗರದ ಪ್ರವೇಶದ್ವಾರದ ಮೂಲಕ ರಾಜರಾಜೇಶ್ವರಿನಗರದ ಪ್ರಮುಖ‌ ರಸ್ತೆಗಳಲ್ಲಿ ಚಿತ್ರನಟ ದರ್ಶನ್ ರೋಡ್ ಶೋ ನಡೆಯಲಿದೆ.

ಇದನ್ನೂ ಓದಿ: Darshan: ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಇಂದು ಡಿಬಾಸ್​ ದರ್ಶನ್​ ರೋಡ್​ ಶೋ

ಕೇವಲ ರಾಜಕಾರಣಿಯಲ್ಲದೆ ನಿರ್ಮಾಪಕರೂ ಆಗಿರುವ ಮುನಿರತ್ನ ಪರ ಸ್ಯಾಂಡಲ್​ವುಡ್​ನ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಇಂದು ಪ್ರಚಾರ ನಡೆಸಲಿದ್ದಾರೆ. ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿದ್ದ ದರ್ಶನ್​ ಅವರು ಮುನಿರತ್ನ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದೇ ಕಾರಣಕ್ಕೆ ಇಂದು ಅವರ ಪರವಾಗಿ ಮತಯಾಚನೆ ಮಾಡಲಿದ್ದಾರೆ. ದರ್ಶನ್​ ಪ್ರಚಾರದಿಂದ ಆರ್​ಆರ್​ ನಗರ ಇಂದು ಮತ್ತಷ್ಟು ರಂಗೇರಲಿದೆ.

ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ಘೋಷಿಸಲಾಗಿದೆ. ಆರ್​.ಆರ್ ನಗರದ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದ ಐಎಎಸ್​ ಅಧಿಕಾರಿ ದಿ. ಡಿ.ಕೆ. ರವಿ ಅವರ ಪತ್ನಿ ಕುಸುಮಾ ಸ್ಪರ್ಧಿಸಲಿದ್ದಾರೆ. ಆರ್​ಆರ್​ ನಗರ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಕಣಕ್ಕಿಳಿಯಲಿದ್ದಾರೆ. ಆರ್​ಆರ್​ ನಗರ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಸ್ಪರ್ಧಿಸಲಿದ್ದಾರೆ.
Published by:Sushma Chakre
First published: