Sahitya Akademi Award 2022: ದಾದಾಪೀರ್‌ ಜೈಮನ್‌, ತಮ್ಮಣ್ಣ ಬೀಗಾರ್​ಗೆ 2022ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ದಾದಾಪೀರ್‌ ಜೈಮನ್‌ ಪಾತ್ರರಾಗಿದ್ದಾರೆ. ಜೊತೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2022ರ ಬಾಲ ಸಾಹಿತ್ಯ ಪ್ರಶಸ್ತಿಗೆ ತಮ್ಮಣ್ಣ ಬೀಗಾರ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಪ್ರಶಸ್ತಿಗೆ ಭಾಜನರಾದ ದಾದಾಪೀರ್‌ ಜೈಮನ್‌ ಮತ್ತು ತಮ್ಮಣ್ಣ ಬೀಗಾರ

ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಪ್ರಶಸ್ತಿಗೆ ಭಾಜನರಾದ ದಾದಾಪೀರ್‌ ಜೈಮನ್‌ ಮತ್ತು ತಮ್ಮಣ್ಣ ಬೀಗಾರ

 • Share this:
  ನವದೆಹಲಿ: 2022ರ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ( Sahitya Akademi Award - 2022)  ನೀಡಲಾಗುವ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ (Literary Work) ನೀಡುವ ಪ್ರಶಸ್ತಿ (Award) ಪಟ್ಟಿ ಪ್ರಕಟಗೊಂಡಿದೆ.ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ದಾದಾಪೀರ್‌ ಜೈಮನ್‌  ಪಾತ್ರರಾಗಿದ್ದಾರೆ. ಜೊತೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ 2022ರ ಬಾಲ ಸಾಹಿತ್ಯ ಪ್ರಶಸ್ತಿಗೆ ತಮ್ಮಣ್ಣ ಬೀಗಾರ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಗಳನ್ನು ಡಿಸೆಂಬರ್ (December) ತಿಂಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ(Delhi) ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಚಂದ್ರಶೇಖರ ಕಂಬಾರ ಅವರು, ಪ್ರಶಸ್ತಿಗೆ ಭಾಜನರಾದ ವಿಜೇತರನ್ನು ಅಭಿನಂದಿಸಿದ್ದಾರೆ.

  ದಾದಾಪೀರ್ ಜೈಮನ್ ಗೆ ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ. ದಾದಾಪೀರ್ ಜೈಮನ್  ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯವರು. ಇವರಿಗೆ 2022ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ. ದಾದಾಪೀರ್ ಜೈಮನ್ ಅವರ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ 2022ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ.

  ದಾದಾಪೀರ್ ಜೈಮನ್ ಅವರ ʼಪರ್ದಾ ಮತ್ತು ಪಾಲಿಗಮಿʼ ಅನುವಾದ ಕೃತಿ ಸಹ ಸಾಕಷ್ಟು ಜನಪ್ರಿಯತೆ ಗಳಿಸಿದೆ. ದಾದಾಪೀರ್ ಅವರ ʼನೀಲಕುರಿಂಜಿ’ ಕಥಾ ಸಂಕಲನವನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನ ಪ್ರಕಟ ಮಾಡಿದೆ.

  ಇದನ್ನೂ ಓದಿ: ನಳಿನ್ ಕುಮಾರ್ ಕಟೀಲ್ ಬದಲಾವಣೆ ಬಹುತೇಕ ಫಿಕ್ಸ್; ಈ ಐವರಲ್ಲಿ ಯಾರಾಗ್ತಾರೆ ಬಿಜೆಪಿ ರಾಜ್ಯಾಧ್ಯಕ್ಷ?

  ತಮ್ಮಣ್ಣ ಬೀಗಾರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಬಾಲ ಸಾಹಿತ್ಯ ಪ್ರಶಸ್ತಿ

  ಇನ್ನು ಶಿರಸಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರಿಗೆ 2022ರ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಸಿಗುವ ಬಾಲ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಎಂಬ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಗೌರವ ದೊರೆತಿದೆ. ತಮ್ಮಣ್ಣ ಬೀಗಾರ ಅವರ ʼಬಾವಲಿ ಗುಹೆ’ ಮಕ್ಕಳ ಕಾದಂಬರಿಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ.

  ವಿಜೇತರಿಗೆ ಐವತ್ತು ಸಾವಿರ ರೂಪಾಯಿ ನಗದು ಹಾಗೂ ಸನ್ಮಾನ

  ಅಂದಹಾಗೆ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಸನ್ಮಾನ ಒಳಗೊಂಡಿದೆ. ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ. ಉಷಾ, ನಗರಗೆರೆ ರಮೇಶ್ ಹಾಗೂ ಎನ್. ಎಸ್. ಗುಂಡೂರ ಭಾಗವಹಿಸಿದ್ದರು.

  ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು, ಲೋಹಿತ್ ನಾಯ್ಕರ್ ಹಾಗೂ ಎಂ. ಎಚ್. ನಾಗರಾಜ್ ಜ್ಯೂರಿಗಳಾಗಿ ಭಾಗವಹಿಸಿದ್ದರು. ಇನ್ನು ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿ ಸಂಯೋಜಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆದಿದೆ.

  ಇದನ್ನೂ ಓದಿ: ಸರ್ಕಾರದ ವಿರುದ್ಧ ಮತ್ತೆ 40% ಕಮಿಷನ್ ತೂಗುಕತ್ತಿ; ಮುನಿರತ್ನ ವಿರುದ್ಧ ಆರೋಪ, ದಾಖಲೆ ಕೊಡಿ ಅಂತಾ ಸಚಿವರ ಸವಾಲ್

  ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಇದಾಗಿದೆ. ದೇಶದ ವಿವಿಧ ಭಾಷೆಗಳ  ಸಾಹಿತಿಗಳನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತದೆ. ಯುವ ಸಾಹಿತಿಗಳು, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನ ಮಾಡಲಾಗುತ್ತದೆ. 1954ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯನ್ನು ಪ್ರತಿವರ್ಷವೂ ನೀಡಲಾಗುತ್ತದೆ. ಸಾಹಿತ್ಯ ಅಕಾಡೆಮಿ ಅಂಗೀಕರಿಸಿದ 24 ಭಾಷೆಗಳ ಒಂದೊಂದು ಪುಸ್ತಕಕ್ಕೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.
  Published by:renukadariyannavar
  First published: