Dakshina Kannada: 4 ತಾಲೂಕಿನಲ್ಲಿ 144 ಸೆಕ್ಷನ್​ ಮುಂದುವರಿಕೆ; 3 ದಿನ ಮದ್ಯ ಮಾರಾಟ ಬಂದ್​

ದಕ್ಷಿಣ ಕನ್ನಡ ಜೆಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಆಗಸ್ಟ್ 6ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮದ್ಯ ಮಾರಾಟ ಕೂಡ ಬಂದ್ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮಂಗಳೂರು (ಜು. 29): ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜೆಲ್ಲೆಯ 4 ತಾಲ್ಲೂಕುಗಳಲ್ಲಿ ಆಗಸ್ಟ್ 6ರವರೆಗೆ ನಿಷೇಧಾಜ್ಞೆ (144 Section) ಮುಂದುವರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ (District Collector Dr. Rajendra K.V) ಆದೇಶ ಹೊರಡಿಸಿದ್ದಾರೆ. ಜೊತೆಗೆ ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮದ್ಯ ಮಾರಾಟ ಬಂದ್ (Liquor Sale Banned) ಮಾಡಲಾಗಿದೆ. ಬಂಟ್ವಾಳ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜನರು ಗುಂಪು ಗುಂಪಾಗಿ ಓಡಾಡುವುದು, ವಿನಾಕಾರಣ ತಿರುಗಾಡಲು ಅವಕಾಶವಿಲ್ಲ. ಸಾರ್ವಜನಿಕ ಸಭೆ, ಸಮಾರಂಭಗಳಿಗೂ ನಿಷೇಧ ಹೇರಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಮೂಲ್ಕಿ, ಪಣಂಬೂರು ಮತ್ತು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಗುರುವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದೆ.

ದ. ಕನ್ನಡ ಜಿಲ್ಲೆಯಾದ್ಯಾಂತ ಮದ್ಯ ಮಾರಾಟ ಬಂದ್

ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ.  ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಅಗಸ್ಟ್ ಒಂದನೇ ತಾರೀಖು ಬೆಳಗ್ಗೆ ಎಂಟು ಗಂಟೆಯವರೆಗೆ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರೋ ಹಿನ್ನೆಲೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಗುಪ್ತಚರ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.

ಸಂಜೆ 6 ಗಂಟೆಯೊಳಗೆ ಅಂಗಡಿ ಬಂದ್​ಗೆ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೊಲೆಗಳಿಂದ ಪರಿಸ್ಥಿತಿ ಬಿಗಡಾಯಿಸಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಠಿಣ ಕ್ರಮಕೈಗೊಂಡಿದ್ದಾರೆ. ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದರು.

ಇದನ್ನೂ ಓದಿ: Murder Case: ಚಿಕನ್​ ಅಂಗಡಿ ತೆರೆದಿದ್ದೇ ಕೊಲೆಗೆ ಕಾರಣವಾಯ್ತಾ? ಪ್ರವೀಣ್​ ಸಹೋದರನ ಸ್ಫೋಟಕ ಹೇಳಿಕೆ

ಆಗಸ್ಟ್ 1 ರವರಗೆ ಈ ಆದೇಶ ಜಾರಿ

ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಜಿಲ್ಲೆಯ ಎಲ್ಲ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆಯೊಳಗೆ ಬಾಗಿಲು ಹಾಕಬೇಕು. ಆಗಸ್ಟ್ 1 ರವರಗೆ ಈ ಆದೇಶ ಜಾರಿಯಲ್ಲಿರಲಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಮುದಾಯದ ಪ್ರಮುಖರೊಂದಿಗೆ  ಶಾಂತಿ ಸಭೆ

ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಈ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಜುಲೈ 30 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸಹ ಶಾಂತಿ ಸಭೆ ನಡೆಸೋದಾಗಿ ಹೇಳಿದ್ದಾರೆ.

ಬಂಧಿತರ ವಿಚಾರಣೆ ನಡೆಯುತ್ತಿದೆ- ADGP

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಬಂಧಿತ ಝಾಕೀರ್ ಮತ್ತು ಶಫೀಕ್ ಪಿಎಫ್ಐ ಸಂಘಟನೆಯ ಜೊತೆ ನಂಟು ಇರುವ ಬಗ್ಗೆ ಮಾಹಿತಿ ದೊರೆತಿದೆ. ಆದರೆ ಪಿಎಫ್ಐ ಸಂಘಟನೆಗೆ ಅಧಿಕೃತ ಸದಸ್ಯತ್ವ ನೊಂದಣಿ ನಿಯಮದ ವ್ಯವಸ್ಥೆಯಿಲ್ಲ

ಇದನ್ನೂ ಓದಿ:  Siddaramaiah ಅಧಿಕಾರವಧಿಯಲ್ಲಿ 32 ಕೊಲೆ, ನಾವು ಎಲ್ಲವನ್ನು ನಿಭಾಯಿಸಿದ್ದೇವೆ: CM Bommai

ಪ್ರವೀಣ್​ಗೆ 2 ತಿಂಗಳಿಂದ ಬೆದರಿಕೆ ಕರೆ

ಪ್ರವೀಣ್ ಗೆ ಎರಡು ತಿಂಗಳಿಂದ ಬೆದರಿಕೆ ಕರೆ ಬರುತ್ತಿದ್ದ ಬಗ್ಗೆ ಬೆಳ್ಳಾರೆ ಠಾಣೆಗೆ ಮೌಖಿಕ ಮಾಹಿತಿ ನೀಡಿದ್ದಾರೆ. ಯಾರ ಬಳಿ ಮಾಹಿತಿ ನೀಡಿದ್ದಾರೆ ಎನ್ನುವುದರ ಮಾಹಿತಿ ಪಡೆದುಕೊಳ್ಳಲಾಗುವುದು. ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಪ್ರಕರಣದ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು. ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
Published by:Pavana HS
First published: