• Home
  • »
  • News
  • »
  • state
  • »
  • Dattamala Abhiyana: ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ, ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ

Dattamala Abhiyana: ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ, ಮಾಲಾಧಾರಿಗಳಿಂದ ದತ್ತ ಪಾದುಕೆ ದರ್ಶನ

ದತ್ತಮಾಲಾ ಅಭಿಯಾನಕ್ಕೆ ತೆರೆ

ದತ್ತಮಾಲಾ ಅಭಿಯಾನಕ್ಕೆ ತೆರೆ

ಕಳೆದೊಂದು ವಾರದಿಂದ ಶ್ರೀರಾಮಸೇನಾ ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ.

  • News18 Kannada
  • Last Updated :
  • Karnataka, India
  • Share this:

ಚಿಕ್ಕಮಗಳೂರು (ನ.13): ಕಳೆದೊಂದು ವಾರದಿಂದ ಶ್ರೀರಾಮಸೇನಾ (Sri Ramasena) ವತಿಯಿಂದ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ (Dattamala Abhiyan) ಇಂದು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ರಾಜ್ಯದ ಮೂಲೆ-ಮೂಲೆಗಳಿಂದ ಬಂದಿದ್ದ ಸಾವಿರಾರು ದತ್ತಭಕ್ತರು ದತ್ತ ಪಾದುಕೆ ದರ್ಶನ ಪಡೆದು ಪುನೀತರಾದ್ರು.  800ಕ್ಕೂ ಅಧಿಕ ಪೊಲೀಸರು ಹೆಜ್ಜೆಗೊಬ್ಬರಂತೆ ನಿಂತು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದರು.


ದತ್ತಪೀಠ ಹೊರಭಾಗದಲ್ಲಿ ಹೋಮ-ಹವನ ನಡೆಸಿ, ದತ್ತಪೀಠ ಹಿಂದೂಗಳದ್ದೆಂದು ಕೂಗಿದ್ರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇದ್ರು ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ಮಾಡಿಲ್ಲ ಎಂದು ಸರ್ಕಾರಗಳ ವಿರುದ್ಧ ಕೆಂಡಾಮಂಡಲರಾದ್ರು.


dattamala abhiyan ended on a peaceful


ದತ್ತಮಾಲಾ ಅಭಿಯಾನಕ್ಕೆ ತೆರೆ


ಕಳೆದೊಂದು ವಾರದಿಂದ ಕಾಫಿನಾಡು ಚಿಕ್ಕಮಗಳೂರಿನ ದತ್ತಪೀಠದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆ ಬಿದ್ದಿದೆ. ಬೆಳಗ್ಗೆ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಿ ದತ್ತಪಾದುಕೆ ದರ್ಶನ ಪಡೆದ್ರು. ಅಭಿಯಾನಕ್ಕೆ ಆಗಮಿಸಿದ್ದ ಸ್ವಾಮೀಜಿಗಳಿಗೆ ದತ್ತಪಾದುಕೆಗೆ ಪುಷ್ಪಾರ್ಚನೆ ಮಾಡಿದರು. ಬಳಿಕ, ಹೋಮ ಮಂಟಪದಲ್ಲಿ ಗಣಪತಿ, ದತ್ತಾತ್ರೇಯ ಹೋಮವನ್ನು ನಡೆಸಿ ಧಾರ್ಮಿಕ ಸಭೆಯನ್ನು ನಡೆಸಿದರು.
ಹಿಂದೂಗಳಿಗೆ ಒಪ್ಪಿಸಬೇಕೆಂಬ ಆಗ್ರಹ


ಹಿಂದೂ ಅರ್ಚಕರ ಶೀಘ್ರ ನೇಮಿಸಿ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕೆಂಬ ಆಗ್ರಹ ಎಂದಿನಂತೆ ಇತ್ತು. ದತ್ತಪೀಠದ ಚೆಂಡು ಸರ್ಕಾರದ ಅಂಗಳದಲ್ಲಿದೆ. ಹಿಂದುತ್ವದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರ ಕೂಡಲೇ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ದತ್ತಪೀಠದ ಹೆಸರೇಳೆಕೊಂಡು ಅಧಿಕಾರಕ್ಕೆ ಬಂದ ಶಾಸಕ ಸಿ.ಟಿ.ರವಿಗೆ ಅರ್ಚಕರ ನೇಮಿಸಿ ಪೂಜೆ ಪ್ರಾರಂಭ ಮಾಡಿದರೆ ನಿಮ್ಮಪ್ಪನ ಗಂಟು ಹೋಗೋದ ಎಂದು ಸಿ.ಟಿ.ರವಿ ವಿರುದ್ಧ ಕಿಡಿಕಾರಿದ್ದಾರೆ.


ಶ್ರೀರಾಮಸೇನೆ ಕಾರ್ಯಕರ್ತರ ಮೆರವಣಿಗೆ


ಇನ್ನು ರಾಜ್ಯದ ವಿವಿಧ ಭಾಗದಿಂದ ದತ್ತಮಾಲಾಧಾರಿಗಳು ಆಗಮಿಸಿದ್ರು. ಇದೇ ಮೊದಲ ಬಾರಿಗೆ ದತ್ತಾತ್ರೇಯ ಮೂರ್ತಿಯೊಂದಿಗೆ ಮೆರವಣಿಗೆ ಆರಂಭಿಸಿದ ಶ್ರೀರಾಮಸೇನೆ ಕಾರ್ಯಕರ್ತರು ಸ್ವಾಮಿಯ ಮೂರ್ತಿ ಕೆಳಗಡೆ ಬಂದಿದೆ. ಮುಂದಿನ ವರ್ಷ ದತ್ತಪೀಠದಲ್ಲಿ ಆಸೀನನಾಗ್ತಾನೆ ಎಂದು ಅಭಿಪ್ರಾಯ ಹೊರಹಾಕಿದ್ದಾರೆ.


ದತ್ತಪಾದುಕೆ ದರ್ಶನ ಪಡೆದ ಭಕ್ತರು


ಸುಮಾರು 5 ಸಾವಿರಕ್ಕೂ ಅಧಿಕ ದತ್ತಭಕ್ತರು ದತ್ತಪಾದುಕೆ ದರ್ಶನ ಪಡೆದು ಪುನೀತರಾದ್ರು. ಪೊಲೀಸರು ಕೂಡ ಚಿಕ್ಕಮಗಳೂರು ನಗರ ಹಾಗೂ ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತೋ ಕಲ್ಪಿಸಿದ್ದರು. ಸುಮಾರು 1000ಕ್ಕೂ ಅಧಿಕ ಪೊಲೀಸರ ಸರ್ಪಗಾವಲಿನಲ್ಲಿ ದತ್ತಮಾಲಾ ಅಭಿಯಾನಕ್ಕೆ ಶಾಂತಿಯುತ ತೆರೆಬಿದ್ದಿದೆ.


ಪೊಲೀಸ್​ ಬಿಗಿಭದ್ರತೆ


ಒಟ್ಟಾರೆ, ಕಳೆದೊಂದು ವಾರದಿಂದ ಕೇಸರಿಮಯವಾಗಿದ್ದ ಚಿಕ್ಕಮಗಳೂರು ನಾಳೆಯಿಂದ ಯತಾಸ್ಥಿತಿಗೆ ಮರಳಲಿದೆ. ಎರಡ್ಮೂರು ದಶಕಗಳ ಹಿಂದಿನ ದತ್ತಪೀಠವೇ ಬೇರೆ ಇಂದಿನ ದತ್ತಪೀಠವೇ ಬೇರೆ. ದತ್ತಪೀಠ ಅಂದ್ರೆ ಅಂದು ಭಕ್ತಿ ಇದ್ರೆ, ಇಂದು ಗಲಾಟೆ ಎಂಬ ಭಯದ ವಾತಾವರಣ ಇದೆ. ಆದ್ರೆ, ಪೊಲೀಸರು ಸರ್ಪಗಾವಲಿನಿಂದ ಯಾವುದೇ ಅಹಿತಕರ ಘಟನೆ ನಡೆಯದೇ ಎಲ್ಲಾ ಶಾಂತರೀತಿಯಲ್ಲಿ ಮುಕ್ತಾಯವಾಗಿದ್ದು, ಎಂದಿನಂತೆ ದತ್ತಪೀಠ ಹಿಂದುಗಳ ಪೀಠ, ಅದನ್ನ ಹಿಂದೂಗಳಿಗೆ ಒಪ್ಪಿಸಬೇಕೆಂಬ ಕೂಗು ಮಾತ್ರ ಜೋರಾಗಿತ್ತು.


ಇದನ್ನೂ ಓದಿ: Sriramulu: ಸಿದ್ದರಾಮಯ್ಯ ಎಲ್ಲಿ ನಿಂತ್ರು ಗೆಲ್ಲೋದಿಲ್ಲ; ಡಿಕೆಶಿ ಪರ ರಾಮುಲು ಬ್ಯಾಟಿಂಗ್​!


ನಗರದಲ್ಲಿ ಶೋಭಾಯಾತ್ರೆ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ವಾಹನ ಸಂಚಾರ ಮತ್ತು ನಿಲುಗಡೆ ನಿಷೇಧಿಸಲಾಗಿತ್ತು. ನವೆಂಬರ್ 13 ರಂದು ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬಸವನಹಳ್ಳಿ ಮುಖ್ಯರಸ್ತೆ ಮತ್ತು ಎಂ.ಜಿಯಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಅವರು ತಿಳಿಸಿದ್ದರು.

Published by:ಪಾವನ ಎಚ್ ಎಸ್
First published: