• Home
  • »
  • News
  • »
  • state
  • »
  • Belagavi: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು; ಚಿತ್ರಹಿಂಸೆ ನೀಡಿ ಕೊಂದಿದ್ದಾರೆ ಎಂದು ಪುತ್ರಿ ಆರೋಪ

Belagavi: ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು; ಚಿತ್ರಹಿಂಸೆ ನೀಡಿ ಕೊಂದಿದ್ದಾರೆ ಎಂದು ಪುತ್ರಿ ಆರೋಪ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮೃತ ಆರೋಪಿ ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಚಿತ್ರಹಿಂಸೆ ನೀಡಿ ನಮ್ಮ ತಂದೆಯನ್ನು ಕೊಂದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಬೆಳಗಾವಿ (ನ.12): ಬೆಳಗಾವಿ  (Belagavi) ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರ ವಶದಲ್ಲಿ ಇದ್ದ ಆರೋಪಿಯೊಬ್ಬ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ. ಈ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದ್ದು, ಪ್ರಕರಣ ತನಿಖೆಯನ್ನು ಸಿಐಡಿಗೆ (CID) ವಹಿಸಲಾಗಿದೆ. ಗಾಂಜಾ ಪ್ರಕರಣ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸರು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸವನಗೌಡ ಪಾಟೀಲ್ (45) ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ಆತನನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುವ ಸಂದರ್ಭದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಆರೋಗ್ಯ ಏರುಪೇರು ಆಗಲು ಕಾರಣ ಏನು? ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಸಿಐಡಿ ತನಿಖೆಗೆ ವಹಿಸಲಾಗಿದೆ.


ನಿನ್ನೆ ಮಧ್ಯಾಹ್ನ ಬಂಧಿಸಿದ್ದ ಪೊಲೀಸರು


ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟದ ಪ್ರಕರಣದಲ್ಲಿ ಹಲವು ದಿನಗಳಿಂದ ಬಸನಗೌಡ ಪಾಟೀಲ್ (45) ಬೇಕಾಗಿದ್ದನು. ನಿನ್ನೆ ಮಧ್ಯಾಹ್ನ ಸ್ವಗ್ರಾಮದಲ್ಲಿ ಆತನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಆತನನ್ನು ಕರೆದುಕೊಂಡ ಬರಲಾಗಿತ್ತು. ಆದರೇ ಪೊಲೀಸ್ ವಶದಲ್ಲಿ ಇದ್ದ ಸಂದರ್ಭದಲ್ಲಿಯೇ ಆತನಿಗೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ


ಖಾಸಗಿ, ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರು ಯಾವುದೇ ಪ್ರಯೋಜವಾಗಿಲ್ಲ. ಇನ್ನೂ ಕುಟುಂಬಸ್ಥರು ಸಹ ಈ ಬಗ್ಗೆ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಮೃತನ ಮರಣೋತ್ತರ ಪರೀಕ್ಷೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆಯಲಿದ್ದು, ವರದಿ ಬಂದ ಬಳಿಕ ಸತ್ಯಾಸತ್ಯತೆ ಹೊರ ಬೀಳಲಿದೆ.


daughter reaction about accused suspicious death in police custody csb pvn
ಸಾಂದರ್ಭಿಕ ಚಿತ್ರ


ಸ್ಥಳಕ್ಕೆ ಪೊಲೀಸ್ ಆಯುಕ್ತರ ಭೇಟಿ


ತಡರಾತ್ರಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಸೇರಿ ಎಲ್ಲಾ ಅಧಿಕಾರಿಗಳು ಭೇಟಿ ನೀಡಿದ್ರು. ಬೆಳಗಾವಿ ಗ್ರಾಮೀಣ ಪೊಲೀಸರು ಹಾಗೂ ವೈದ್ಯರಿಂದ ಮಾಹಿತಿಯನ್ನು ಪಡೆದ್ರು. ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿ, ಬೆಳಗಾವಿ ಗ್ರಾಮೀಣ ಪೊಲೀಸರ ವಶದಲ್ಲಿದ್ದ ಆರೋಪಿ ಬಸನಗೌಡ ಪಾಟೀಲ್(45) ಮೃತಪಟ್ಟಿದ್ದಾನೆ.


ಖಾಸಗಿ ವೈದ್ಯರ ಬಳಿ ಚಿಕಿತ್ಸೆ


ಮೃತ ಬಸನಗೌಡ ಪಾಟೀಲ್, ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿಯಾಗಿದ್ದು, ಗಾಂಜಾ ಪ್ರಕರಣದಲ್ಲಿ ಬಸನಗೌಡನ ವಶಕ್ಕೆ ಪಡೆದು ಬೆಳಗಾವಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆ ತಂದಿದ್ದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಿಂದ ಬೆಳಗಾವಿಗೆ ಕರೆತಂದಿದ್ದ ಪೊಲೀಸರು.ಬಸನಗೌಡನಿಗೆ ಮೊದಲು ಸುಸ್ತು, ವಾಂತಿ, ಬೆವರು ಕಾಣಿಸಿಕೊಂಡಿತ್ತು, ತಕ್ಷಣ ನಮ್ಮ ಪೊಲೀಸರು ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿದ್ದಾರೆ.


ತೀವ್ರ ಹೃದಯಾಘಾತ ಎಂದ ವೈದ್ಯರು


ಠಾಣೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಮತ್ತೆ ಹೆಚ್ಚಾಗಿದ್ದು, ಈ ವೇಳೆಯಲ್ಲಿ  ಬಸನಗೌಡ ಪಾಟೀಲ್‌ನನ್ನ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಇಸಿಜಿ ಸೇರಿ ಎಲ್ಲಾ ಪರೀಕ್ಷೆ ಮಾಡಲಾಗಿದ್ದು, ತೀವ್ರ ಹೃದಯಾಘಾತ ಆಗಿದೆ ಎಂದು ವೈದ್ಯರು ಹೇಳಿದ್ದಾರೆ.


ಐಸಿಯು ನಲ್ಲಿ ದಾಖಲಿ ಚಿಕಿತ್ಸೆ ಕೊಡಿಸಿದ್ರು ಯಾವುದೇ ಪ್ರಯೋಜನ ಆಗಿಲ್ಲ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾನೆ. ಈ ಬಗ್ಗೆ ಕಸ್ಟೋಡಿಯಲ್ ಡೆತ್ ಪ್ರಕರಣ ದಾಖಲಿಸಿಕೊಂಡು ಸಿಐಡಿಗೆ  ವರ್ಗಾವಣೆ ಮಾಡುತ್ತೇವೆ. ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಹೇಳಿದ್ರು.


ಇದನ್ನೂ D K Shivakumar: ಪ್ರತಿಮೆ ಪಾಲಿಟಿಕ್ಸ್, ನನ್ನನ್ನು ಸಹ ಕರೆದಿಲ್ಲ ಕಣ್ರೀ, ದೇವೇಗೌಡರ ಕಡೆಗಣನೆಗೆ ಬಿಜೆಪಿ ವಿರುದ್ಧ ಡಿಕೆಶಿ ಗರಂಓದಿ: 


ಪೊಲೀಸರು ಚಿತ್ರಹಿಂಸೆ ನೀಡಿ ಕೊಂದಿದ್ದಾರೆ


ಮೃತ ಆರೋಪಿ ಬಸನಗೌಡ ಪಾಟೀಲ್ ಪುತ್ರಿ ರೋಹಿಣಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಚಿತ್ರಹಿಂಸೆ ನೀಡಿ ನಮ್ಮ ತಂದೆಯನ್ನು ಕೊಂದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೋಹಿಣಿ, ನಮ್ಮ ತಂದೆಯ ವಿರುದ್ಧ ಸುಳ್ಳು ಕೇಸ್ ಹಾಕಲಾಗಿದೆ. ನಮಗೆ ನ್ಯಾಯ ಸಿಗಬೇಕು. ಬಿಪಿ, ಶುಗರ್ ಸೇರಿ ಯಾವುದೇ ಸಮಸ್ಯೆ ಇರಲಿಲ್ಲ. ನಮ್ಮ ತಂದೆಯ ಕೈಗೆ ಹಗ್ಗ ಕಟ್ಟಿ,‌ ಚಿತ್ರಹಿಂಸೆ ನೀಡಿದ್ದು, ಪೊಲೀಸ್ ಠಾಣೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

Published by:ಪಾವನ ಎಚ್ ಎಸ್
First published: