• Home
 • »
 • News
 • »
 • state
 • »
 • School Bus Accident: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಶಾಲಾ ಬಸ್​ ಡಿಕ್ಕಿ; 6 ಮಕ್ಕಳಿಗೆ ಗಂಭೀರ ಗಾಯ

School Bus Accident: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಶಾಲಾ ಬಸ್​ ಡಿಕ್ಕಿ; 6 ಮಕ್ಕಳಿಗೆ ಗಂಭೀರ ಗಾಯ

ಮರಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್

ಮರಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್

ಗಾಯಗೊಂಡ ಮಕ್ಕಳಿಗೆ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಮಕ್ಕಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 • News18 Kannada
 • 4-MIN READ
 • Last Updated :
 • Davanagere (Davangere), India
 • Share this:

ದಾವಣಗೆರೆ: ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಸ್ಕೂಲ್ ಬಸ್ (School Bus) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್​​ನಲ್ಲಿದ್ದ 6 ಮಕ್ಕಳು (School Children) ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆ ಜಗಳೂರು ತಾಲೂಕಿನ ರಸ್ತೆ ಮಾಚಿಕೆರೆ ಬಳಿ ನಡೆದಿದೆ. ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದ್ದು, ಗಾಯಗೊಂಡ ಮಕ್ಕಳಿಗೆ ಜಗಳೂರು (Jagalur) ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.  ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೆಲ ಮಕ್ಕಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ (Davanagere Hospital) ದಾಖಲಿಸಲಾಗಿದೆ. ಬಸ್​ ಚಾಲಕ ಕೂಡ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬಿ.ಆರ್.ಟಿ ಹುಲಿರಕ್ಷಿತಾರಣ್ಯದ ಶ್ವಾನ ಝಾನ್ಸಿ ಸಾವು


ಚಾಮರಾಜನಗರ (Chamarajanagar District) ಜಿಲ್ಲೆಯ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ (BRT Tiger Reserve) ಅಪರಾಧ‌ ಪತ್ತೆ ಕಾರ್ಯಾಚರಣೆಗೆ ತರಬೇತಿ ನೀಡಲಾಗಿದ್ದ ಝಾನ್ಸಿ ಹೆಸರಿನ ಶ್ವಾನ ಸಾವನ್ನಪ್ಪಿದೆ. ಜರ್ಮನ್ ಶಫರ್ಡ್ (German Shepherd) ತಳಿಯ ಹೆಣ್ಣು ಶ್ವಾನ ಝಾನ್ಸಿಗೆ ಚಂಡೀಗಢದ ಐಟಿಬಿಪಿ ಕೇಂದ್ರದಲ್ಲಿ ತರಬೇತಿ ನೀಡಲಾಗಿತ್ತು.


ಝಾನ್ಸಿ


ಆದರೆ ಕಳೆದ ಒಂದು ವಾರದ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಝಾನ್ಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ ಝಾನ್ಸಿಗೆ ಲಾರಿ ಡಿಕ್ಕಿ ಹೊಡೆದಿತ್ತು. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.


ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚಾಮರಾಜನಗರ ಗಡಿ ಭಾಗದಲ್ಲಿ ಕಟ್ಟೆಚ್ಚರ


ಕೇರಳದಲ್ಲಿ (Kerala) ಹಕ್ಕಿಜ್ವರ ಭೀತಿ (Bird Flu) ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆಗೆ ಪ್ರವೇಶಿಸುವ ಕೇರಳ ವಾಹನಗಳ ಮೇಲೆ ನಿಗಾ ಇಟ್ಟಿರುವ ಪಶುಪಾಲನಾ ಇಲಾಖೆ, ಗಡಿ ಜಿಲ್ಲೆಗೂ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.


Bird flu discovered in France More than 10000 ducks died stg asp
ಸಾಂದರ್ಭಿಕ ಚಿತ್ರ


ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಹೆಚ್ಚಾಗಿದ್ದು, ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯಕ್ಕೆ ಪ್ರವೇಶಿಸುತ್ತಿರುವ ವಾಹನಗಳಿಗೆ ಸೋಡಿಯಂ ಹೈಪೊಕ್ಲೊರೈಡ್ ದ್ರಾವಣ ಸಿಂಪಡಿಸಿ ಪಶುಪಲನಾ ಇಲಾಖೆ ಸಿಬ್ಬಂದಿ ಒಳಬಿಡುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಒಂದೂ ಪ್ರಕರಣ ವರದಿಯಾಗಿಲ್ಲ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಶಿವಣ್ಣ ಮಾಹಿತಿ ನೀಡಿದ್ದಾರೆ.


ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಾವು


ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದಿದ್ದರು. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿತ್ತು. ಮೃತ ಶಿಕ್ಷಕರನ್ನು 56 ವರ್ಷದ ಸಂಗನಗೌಡರ ಎಂದು ಗುರುತಿಸಲಾಗಿದೆ.


ಮೃತ ಶಿಕ್ಷಕ


ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಸಂಗನಗೌಡ ಅವರು, ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸದ್ಯ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published by:Sumanth SN
First published: