ರಾಮನಗರ(ನ.01): 65 ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಡಿಸಿಎಂ ಅಶ್ವಥ್ ನಾರಾಯಣ್ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಕೊರೋನಾ ಹಿನ್ನೆಲೆ ಸರಳವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಎಸ್ಪಿ ಎಸ್.ಗಿರೀಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್ ಎಂ.ಇ.ಎಸ್ ಪರವಾಗಿ ಬ್ಯಾಟಿಂಗ್ ಮಾಡಿದರು. ಗಡಿಭಾಗದಲ್ಲಿ ಕನ್ನಡಕ್ಕೆ ಪೆಟ್ಟು ಬೀಳ್ತಿರುವ ವಿಚಾರ ಹಾಗೂ ಎಂ.ಇ.ಎಸ್ ಸಂಘಟನೆಯ ಪಿತೂರಿ ವಿಚಾರಕ್ಕೆ ಡಿಸಿಎಂ ಸ್ಪಷ್ಟನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಅವರು ಪ್ರತಿವರ್ಷ ಹೀಗೆ ಮಾಡ್ತಿದ್ದಾರೆ, ಅವರಿಗೂ ಸ್ವಾತಂತ್ರ್ಯವಿದೆ, ಅವರ ಭಾವನೆ ವ್ಯಕ್ತಪಡಿಸಲು. ಆದರೆ ನಾವು ಕನ್ನಡತನವನ್ನ ಹೆಚ್ಚಿಸುವ ಪ್ರಯತ್ನ ಮಾಡ್ತಿದ್ದೇವೆಂದು ಡಿಸಿಎಂ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದರು.
ಇನ್ನುಆರ್.ಆರ್.ನಗರ, ಶಿರಾ ಉಪಚುನಾವಣೆ ಹಿನ್ನೆಲೆ ಮಾತನಾಡಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಉಳಿದ ಎರಡೂ ಪಕ್ಷಗಳಿಗೆ ಜನ ಬೆಂಬಲ ಕೊಡಲ್ಲ, ಬಿಜೆಪಿಗೆ ಬೆಂಬಲ ಕೊಟ್ಟರೆ ಶ್ರೇಯಸ್ಸು ಎಂದು ಜನರಿಗೆ ಗೊತ್ತಿದೆ. ಜೊತೆಗೆ ಆರ್.ಆರ್.ನಗರದ ಅಭ್ಯರ್ಥಿ ಎರಡೂ ಬಾರಿ ಶಾಸಕರಾಗಿದ್ದಾರೆ. ಕಳೆದ ಬಾರಿ 20 ಸಾವಿರ, ಈ ಬಾರಿ 70 ಸಾವಿರದಿಂದ ಗೆಲ್ಲುತ್ತಾರೆ. ಮೂರನೇ ಬಾರಿಯೂ ಮುನಿರತ್ನ ಆಯ್ಕೆಯಾಗುತ್ತಾರೆ ಎಂದರು.
ಸಚಿವ ಬಿ.ಸಿ.ಪಾಟೀಲಗೆ ಬಿಜೆಪಿ ಕಾರ್ಯಕರ್ತರಿಂದಲೇ ಘೇರಾವ್!
ಇನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಕೆಲಸ ಮಾಡ್ತಿದೆ. ನಮ್ಮ ದೇಶದಲ್ಲಿ ಚುನಾವಣಾ ಆಯೋಗ ಕಾನೂನಿನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಕ್ಕಳು ಮೂರು ಭಾಷೆಯ ಮೇಲೆ ಹಿಡಿತ ಹೊಂದಬೇಕಿದ್ದು, ಮಾತೃ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಅಶ್ವತ್ಥನಾರಾಯಣ್ ಹೇಳಿದರು.
ಮೂರರಿಂದ ಆರು ವರ್ಷದ ಮಕ್ಕಳಲ್ಲಿ ಶೇ. 80 ರಷ್ಟು ಮೆದುಳಿನ ಬೆಳವಣಿಗೆ ಇರುತ್ತದೆ. ಈ ವಯಸ್ಸಿನಲ್ಲಿ ಮಕ್ಕಳು ಹದಿನೈದು ಭಾಷೆಯನ್ನು ಕಲಿಯಲು ಸಾಧ್ಯವಿದೆ. ಮಕ್ಕಳು ಕನ್ನಡ ಭಾಷೆಯೊಂದಿಗೆ ಹೆಚ್ಚಿನ ಭಾಷೆ ಕಲಿತರೆ ಜ್ಞಾನ ವೃದ್ಧಿಯಾಗುತ್ತದೆ ಕಲಿಕೆಯಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬಹುದು ಎಂದರು.
ವರದಿ: ಎ.ಟಿ.ವೆಂಕಟೇಶ್ ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ