ಕೋಲಾರದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಸಿಎಂ ಅಶ್ವಥ್ ನಾರಾಯಣ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಕೋವಿಡ್ ಪರೀಕ್ಷೆ ನಡೆಸಿದ 24 ಗಂಟೆಗಳ ಒಳಗೆ ಫಲಿತಾಂಶ ನೀಡಬೇಕು. ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಡಿಸಿಎಂ ಡಾ ಅಶ್ವಥ್ ನಾರಾಯಣ ಅವರು ತಿಳಿಸಿದರು.

ಡಾ. ಅಶ್ವಥ್ ನಾರಾಯಣ

ಡಾ. ಅಶ್ವಥ್ ನಾರಾಯಣ

  • Share this:
ಕೋಲಾರ(ಏ.28): ಕೋಲಾರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರು ಪ್ರಕರಣ ಹೆಚ್ಚಳ ಬೆನ್ನಲ್ಲೇ, ಡಿಸಿಎಂ ಅಶ್ವಥ್ ನಾರಾಯಣ ಅವರು ಕೊರೋನಾ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಮೊದಲು  ಜಿಲ್ಲಾ ವೈದ್ಯಾಧಿಕಾರಿ ಕಚೇರಿ ಆವರಣದಲ್ಲಿ ಕೋವಿಡ್ ವಾರ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಶಾಸಕರೊಂದಿಗೆ ವರ್ಚುವಲ್ ಸಭೆ ಮೂಲಕ ಕುಂದು ಕೊರತೆಗಳನ್ನು ಆಲಿಸಿದರು. ಬಳಿಕ ಕೋಲಾರದ ಎಸ್ ಎನ್ ಆಸ್ಪತ್ರೆಗೆ ಭೇಟಿ ನೀಡಿದ ಡಿಸಿಎಂ ಅಶ್ವಥ್ ನಾರಾಯಣ ಅವರು, ಜಿಲ್ಲಾಸ್ಪತ್ರೆಯಲ್ಲಿನ ಕುಂದುಕೊರತೆಗಳ ಬಗ್ಗೆ ಸಭೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಚಿವರು, ಜಿಲ್ಲೆಯಲ್ಲಿ ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಸೋಂಕಿತರನ್ನ ಹೇಗೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರತಿದಿನ ನಡೆಸುತ್ತಿರುವ ಕೋವಿಡ್ ಪರೀಕ್ಷೆಗಳು ಹಾಗೂ ಸಾವು ಪ್ರಕರಣಗಳ ಬಗ್ಗೆ ನೈಜ ವರದಿ ಸಿದ್ದಪಡಿಸಿಕೊಳ್ಳಿ ಎಂದು ತಿಳಿಸಿದರು. ಸಭೆಯಲ್ಲಿ ಸಂಸದ ಎಸ್ ಮುನಿಸ್ವಾಮಿ, ಶಾಸಕ ಶ್ರೀನಿವಾಸಗೌಡ ಹಾಗು ಡಿಸಿ, ಎಸ್ಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಡಿಸಿಎಮ್ ಅಶ್ವಥ್ ನಾರಾಯಣ ಅವರು,  ರಾಜ್ಯದಲ್ಲಿ ಕೊರೊನಾ ಲಸಿಕೆ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಕಾಲ ಕಾಲಕ್ಕೆ ತಕ್ಕಂಗೆ ಲಸಿಕೆ ಪೂರೈಕೆ ಮಾಡುತ್ತಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲದೆ ಇದ್ದರೂ, ಎಲ್ಲರಿಗೂ ಹೊರರೋಗಿಗಳೆಂದು ಪರಿಗಣಿಸಿ ಚಿಕಿತ್ಸೆ ನೀಡಬೇಕು. ಇದು ಎಲ್ಲೆಡೆ ಆಗಲೇಬೇಕು ಎಂದು ಮೌಖಿಕವಾಗಿ ಆದೇಶಿಸಿದರು. ಇನ್ನು ರೆಮಿಡಿಸಿವಿರ್ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿದೆ, ಖಾಸಗಿ ಆಸ್ಪತ್ರೆಗೂ ರೆಮಿಡಿಸಿವಿರ್ ನೀಡುತ್ತೇವೆ. ಇದರಲ್ಲಿ ಇದರಲ್ಲಿ ಯಾವುದೇ ಅಕ್ರಮ ಆದಲ್ಲಿ,  ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಳ್ಳಾರಿಯಲ್ಲಿ ಸಾವಿನ ಸರಣಿ ಮುಂದುವರಿಕೆ; ಒಂದೇ ದಿನ 18 ಜನರನ್ನು ಬಲಿ ಪಡೆದ ಕೊರೋನಾ ಹೆಮ್ಮಾರಿ

ಇನ್ನು ರಾಜ್ಯದಲ್ಲಿ ಲಾಕ್‍ಡೌನ್ ಮಾಡಿಲ್ಲ ಎಂದು ಅಶ್ವಥ್ ನಾರಾಯಣ ಅವರು ತಿಳಿಸಿದ್ದು, ಜನತಾ ಕರ್ಫ್ಯೂ ಜಾರಿ ಮಾಡಿರುವ ಹಿನ್ನಲೆ ಕೆಲ ಕಠಿಣ ನಿಯಮಗಳನ್ನ ಜಾರಿ ಮಾಡಿದ್ದೇವೆ. ಆದರೂ ಕೆಲ ಸೇವೆಯಲ್ಲಿ ವಿನಾಯಿತಿ ನೀಡಲಾಗಿದೆ. ಜನರು ಬೆಂಗಳೂರಿನಿಂದ ಗೂಳೆ ಹೋಗುವುದರಿಂದ ಇನ್ನೂ ಸಮಸ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು.

ಕೋವಿಡ್ 19 ಪ್ರಕರಣ ತಡೆಗಟ್ಟಲು ಹಲವು ಸೂಚನೆ: ಸಲಹೆ ನೀಡಿದ‌ ಡಿಸಿಎಂ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಕೋವಿಡ್ ಪರೀಕ್ಷೆ ನಡೆಸಿದ 24 ಗಂಟೆಗಳ ಒಳಗೆ ಫಲಿತಾಂಶ ನೀಡಬೇಕು. ಪಾಸಿಟಿವ್ ಬಂದ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭ ಮಾಡಿ ವೇಗವಾಗಿ ಕೋವಿಡ್ ನಿಯಂತ್ರಣ ಮಾಡಲಾಗುವುದು ಎಂದು ಡಿಸಿಎಂ ಡಾ ಅಶ್ವಥ್ ನಾರಾಯಣ ಅವರು ತಿಳಿಸಿದರು.

ಕೋವಿಡ್ ಎರಡೂ ಅಲೆಗಳ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದವರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣಕ್ಕೆ, ವೈದ್ಯಾಧಿಕಾರಿಯನ್ನು ಮೊದಲ ಅಲೆ ಬಂದಾಗಿನಿಂದ ಏನು ಮಾಡುತ್ತಿದ್ದೀರಿ ? ಎಷ್ಟು ಸೋಂಕಿತರು ಬಂದರು ? ಎಷ್ಟು ಜನ ದಾಖಲಾದರು ? ಎಷ್ಟು ಜನ ಚಿಕಿತ್ಸೆ ಪಡೆದರು? ಇತ್ಯಾದಿ ಮಾಹಿತಿ ಇಲ್ಲದಿದ್ದರೆ ಹೇಗೆ? ಸರಿಯಾಗಿ ಮಾಹಿತಿಯೇ ಇಲ್ಲದಿದ್ದರೆ ನೀವು ಉತ್ತಮ ಸೌಲಭ್ಯ ನೀಡಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಹೇಗೆ ಸಾಧ್ಯ? ಎಂದು ಮಾಹಿತಿ ಕೇಳಿದರು.

ಕೋವಿಡ್ ವಾರ್ ರೂಂಗೆ ಸೋಂಕಿತರ ಪ್ರತಿ ಮಾಹಿತಿ ಅಪ್‌ಡೇಟ್ ಮಾಡಬೇಕು. ಪ್ರತಿ ಸೋಂಕಿನ ಮಾಹಿತಿಯನ್ನು ಚಾಚೂ ತಪ್ಪದೇ ಇಟ್ಟಿರಬೇಕು. ಹೋಮ್ ಐಸೋಲೇಷನ್ ಆದವರು ಮಾತ್ರವಲ್ಲ ಉಳಿದೆಲ್ಲ ಸೋಂಕಿತರಿಗೆ ಇರುವ ಸೌಲಭ್ಯ ಮತ್ತಿತರೆ ಎಲ್ಲ ಅಂಶಗಳ ಬಗ್ಗೆಯೂ ಕಾಲ್ ಸೆಂಟರ್‌ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
Published by:Latha CG
First published: