• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • 17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ

17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ

ಡಾ. ಅಶ್ವಥ್ ನಾರಾಯಣ

ಡಾ. ಅಶ್ವಥ್ ನಾರಾಯಣ

ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಇದಕ್ಕೆ ಇನ್ನೂ ಹೆಚ್ಚಿನ ಆರ್ಥಿಕ ಶಕ್ತಿ ತುಂಬಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

  • Share this:

ಬೆಂಗಳೂರು: ಸ್ವಯಂ ಉದ್ಯೋಗದಿಂದ ಆರ್ಥಿಕ ಸ್ವಾವಲಂಬನೆ ಸಾಧಿಸುತ್ತಿರುವ ಗ್ರಾಮ ಮಟ್ಟದ ಸಂಜೀವಿನಿ ಘಟಕಗಳಡಿ ಕಾರ್ಯ ನಿರ್ವಹಿಸುವ 17,121 ಮಹಿಳಾ ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿಯನ್ನು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತಾ ಇಲಾಖೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಬಿಡುಗಡೆ ಮಾಡಿದರು.


ಬೆಂಗಳೂರಿನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ, ಸಮುದಾಯ ಬಂಡವಾಳ ನಿಧಿ ಬಿಡುಗಡೆ ಜತೆಗೆ ಅತ್ಯುತ್ತಮವಾಗಿ ಕೆಲಸ ಮಾಡಿ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರರಾದ ಸ್ವಸಹಾಯ ಗುಂಪಿಗೆ  ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥನಾರಾಯಣ; "ಡೇ-ಎನ್‌ಆರ್‌ಎಲ್‌ಎಂ (ರಾಷ್ಟ್ರೀಯ ಜೀವನೋಪಾಯ ಇಲಾಖೆ) ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟಗಳಿಗೆ ಒಳಪಡುವ ಸ್ವಸಹಾಯ ಗುಂಪುಗಳಿಗೆ 14,221.75 ಲಕ್ಷ ರೂ. ಹಾಗೂ ಎನ್‌ಆರ್‌ಇಟಿಪಿ (national rural economic transformation project) ಕಾರ್ಯಕ್ರಮದಡಿ ಕೆಲಸ ಮಾಡುವ 74 ಗ್ರಾಮ ಪಂಚಾಯಿತಿಗಳ ಒಕ್ಕೂಟಗಳಲ್ಲಿರುವ 862 ಸ್ವಸಹಾಯ ಗುಂಪುಗಳಿಗೆ 6.82 ಕೋಟಿ ರೂ. ಸೇರಿ ಒಟ್ಟು 17,121 ಸ್ವಸಹಾಯ ಗುಂಪುಗಳಿಗೆ 149 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಲಾಗಿದೆ ಎಂದರು.


2021-22ನೇ ಸಾಲಿನಲ್ಲಿ ಈ ಸ್ವಸಹಾಯ ಗುಂಪುಗಳಿಗೆ ಒಟ್ಟು 400 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಬಿಡುಗಡೆ ಮಾಡಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಬಂಡವಾಳದ ನೆರವಿನಿಂದ ಸ್ವಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಮಹಿಳೆಯರು ಕೃಷಿ, ಹೈನುಗಾರಿಕೆ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ ಸಾಕಣೆ, ಗುಡಿ ಕೈಗಾರಿಕೆ, ಟೈಲರಿಂಗ್‌, ಹೋಟೆಲ್‌ ಉದ್ಯಮ ಇತ್ಯಾದಿಗಳನ್ನು ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾಬಲಂಬನೆ ಸಾಧಿಸಲು ಸರಕಾರ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಹೇಳಿದರು.


ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಇದಕ್ಕೆ ಇನ್ನೂ ಹೆಚ್ಚಿನ ಆರ್ಥಿಕ ಶಕ್ತಿ ತುಂಬಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.


1 ಲಕ್ಷ ರೂ. ರಾಷ್ಟ್ರೀಯ ಪುರಸ್ಕಾರ


ಲಾಭ ಗಳಿಕೆ, ಬಂಡವಾಳ  ನಿಧಿ ಸದುಪಯೋಗದ ಮೂಲಕ ಅತ್ಯುತ್ತಮ ಕಾರ್ಯ ನಿರ್ವಹಣೆ ಮಾಡಿ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಪಾತ್ರವಾದ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಮಾಗಡಿ ಗ್ರಾಮ ಪಂಚಾಯಿತಿಯ ʼರೇಣುಕಾ ದೇವಿʼ ಸ್ವಸಹಾಯ ಗುಂಪಿಗೆ 1 ಲಕ್ಷ ರೂ. ನಗದು, ಪ್ರಶಸ್ತಿ ಫಲಕ ಒಳಗೊಂಡ ಪುರಸ್ಕಾರವನ್ನು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಪ್ರಧಾನ ಮಾಡಿದರು. ಗುಂಪಿನ ಪರವಾಗಿ ರೇಖಾ ತಳವಾರ ಅವರು ನಗದು ಮತ್ತು ಪ್ರಶಸ್ತಿ ಸ್ವೀಕರಿಸಿದರು. ವಿಡಿಯೊ ಸಂವಾದದ ಮೂಲಕ ಮೈಸೂರು, ರಾಮನಗರ. ಕೊಪ್ಪಳ ಸೇರಿದಂತೆ ಇತರ ಜಿಲ್ಲೆಗಳ ಸ್ವಸಹಾಯ ಗುಂಪುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.


ಇದನ್ನು ಓದಿ: ಈ ಊರಂದ್ರೆ ಕೋವಿಡ್​ಗೆ ಭಯ; ಕೊರೋನಾ ಹೆಮ್ಮಾರಿಗೇ ದಿಗ್ಬಂಧನ ಹಾಕಿದ ಅಲ್ಲಾಪುರ!


ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಯ ಕಾರ್ಯದರ್ಶಿ ಡಾ.ಸೆಲ್ವಕುಮಾರ್‌, ಸಂಜೀವಿನಿ ಅಭಿಯಾನ ನಿರ್ದೇಶಕಿ ಎನ್.‌ಮಂಜುಶ್ರೀ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಅರ್ ವಿಶ್ವನಾಥ ಮುಂತಾದವರು ಹಾಜರಿದ್ದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ.

Published by:HR Ramesh
First published: