ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ, ಸಂಪುಟ ವಿಸ್ತರಣೆಯಿಂದ ಯಾವ ಪ್ರಳಯವೂ ಆಗಲ್ಲ; ಕಾರಜೋಳ ತಿರುಗೇಟು

ಸಂಪುಟ ವಿಸ್ತರಣೆಯಾದರೆ ಸಿದ್ದರಾಮಯ್ಯ ಹೇಳುವಂತೆ ಯಾವ ಸ್ಫೋಟವೂ ಆಗುವುದಿಲ್ಲ. ಈಗ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಈ ಕುರಿತು ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಗೋವಿಂದ ಕಾರಜೋಳ- ಸಿದ್ದರಾಮಯ್ಯ

ಗೋವಿಂದ ಕಾರಜೋಳ- ಸಿದ್ದರಾಮಯ್ಯ

  • Share this:
ಮೈಸೂರು (ಜ. 21): ರಾಜ್ಯದಲ್ಲಿ ಸಂಪುಟ ರಚನೆಯಾದರೆ ಮಹಾಸ್ಫೋಟವಾಗಲಿದೆ. ಗೆದ್ದವರಿಗೆಲ್ಲ ಸಚಿವ ಸ್ಥಾನ ನೀಡಲಾಗದೆ ಯಡಿಯೂರಪ್ಪ ಪರದಾಡುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ ಸಂಪುಟ ವಿಸ್ತರಣೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.

ಸಂಪುಟ ವಿಸ್ತರಣೆಯಾದರೆ ಪ್ರಳಯ ಆಗುವುದಿಲ್ಲ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶದಿಂದ ವಾಪಾಸಾದ ಬಳಿಕ ಈ ಬಗ್ಗೆ ಘೋಷಿಸುತ್ತಾರೆ. ಸಂಪುಟ ವಿಸ್ತರಣೆಯಾದರೆ ಸಿದ್ದರಾಮಯ್ಯ ಹೇಳುವಂತೆ ಯಾವ ಸ್ಫೋಟವೂ ಆಗುವುದಿಲ್ಲ. ಈಗ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಈ ಕುರಿತು ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂಬುದನ್ನು ನಮ್ಮ ನಾಯಕರು ನಿರ್ಧಾರ ಮಾಡುತ್ತಾರೆ. ಉಪ ಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಮೈಸೂರಿನಲ್ಲಿ ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ದೇಶದ್ರೋಹಿ ಮುಸ್ಲಿಮರು ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಸಂಗ್ರಹಿಸುತ್ತಾರೆ; ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ

ಹಿಂದೂಗಳಲ್ಲಿ ಯಾರೂ ಟೆರರಿಸ್ಟ್ ಇಲ್ಲ. ಹಿಂದೂ ಟೆರರಿಸಂ ಎಂಬ ಪದವನ್ನು ನಾನು ಕೇಳಿಲ್ಲ. ಭಯೋತ್ಪಾದಕರೆಂದರೆ ಪಾಕಿಸ್ತಾನದಿಂದ ಬಂದವರು. ಸುಮ್ಮನೆ ಹಿಂದೂ ಭಯೋತ್ಪಾದಕರು ಎಂಬ ಪದ ಬಳಸುವುದು ಸರಿಯಲ್ಲ ಎಂದು ಕಾರಜೋಳ ಹೇಳಿದ್ದಾರೆ.

ಮಂಗಳೂರು ಬಾಂಬ್ ಪತ್ತೆ ಪ್ರಕರಣದ ತನಿಖೆಯಾಗಲಿ. ತನಿಖಾ ಹಂತದಲ್ಲಿ ವ್ಯತಿರಿಕ್ತ ಹೇಳಿಕೆ ಬೇಡ. ಇಡೀ ಪ್ರಕರಣದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
First published: