ಶಾಸಕ ರೇವೂರ ಧಮಕಿ ಪ್ರಕರಣ; ವರದಿ ನೀಡಲು ಕಲಬುರ್ಗಿ ಡಿಸಿಗೆ ಡಿಸಿಎಂ ಕಾರಜೋಳ ಸೂಚನೆ 

ರೇವೂರ ಆಡಿಯೋ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಇದೀಗ ಆ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ ಕಾರಜೋಳ ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ.

  • Share this:
ಬೆಂಗಳೂರು (ಮೇ 29): ಕಲಬುರ್ಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧಿಕಾರಿಗಳಿಗೆ ಧಮಕಿ ಹಾಕಿದ ಆಡಿಯೋ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಗೋವಿಂದ ಕಾರಜೋಳ ಜಿಲ್ಲಾಧಿಕಾರಿಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಕಾರಜೋಳ, ರೇವೂರ ಆಡಿಯೋ ಬಗ್ಗೆ ಕೆಲ ಮಾಧ್ಯಮದವರೇ ಕರೆ ಮಾಡಿ ಹೇಳಿದ್ದಾರೆ. ನನಗೆ ಆ ಬಗ್ಗೆ ಮಾಹಿತಿ ಇರಲಿಲ್ಲ. ಇದೀಗ ಆ ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ, ಕೊರೋನಾ ನಿಯಂತ್ರಣ ಸಂಬಂಧ ಜಿಲ್ಲೆಯ ಪ್ರಮುಖ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕೆಲ ಸೂಚನೆಗಳನ್ನು ನೀಡಿದ್ದಾರೆ. ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಿಂದ ಇನ್ನೂ ಜನರು ಬರುತ್ತಲೇ ಇದ್ದಾರೆ. ನಮ್ಮ ಮಾಹಿತಿ ಪ್ರಕಾರ 37 ಸಾವಿರ ಜನರು ಬಂದಿದ್ದಾರೆ.‌  ಆದರೆ, ಬೇರೆ ಬೇರೆ ಮಾರ್ಗಗಳ ಮೂಲಕ 67 ಸಾವಿರ ಜನ ಬಂದಿರುವ ಸಾಧ್ಯತೆ ಇದೆ. ಹಾಗಾಗಿ ಅವರಿಗೆ  ಜಾಬ್ ಕಾರ್ಡ್ ಗಳನ್ನು ಕಡ್ಡಾಯವಾಗಿ ನೀಡಬೇಕು. ಬರುವವರನ್ನು ಟೆಸ್ಟ್ ಮಾಡಿಸಬೇಕು. ಹಾಗೂ ಭೀಮಾ ‌ನದಿ ತೀರದವರೆಗೂ ನಿಗಾ ಇಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದೇನೆ ಎಂದು ಕಾರಜೋಳ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ ಹೆಸರಲ್ಲಿ ಕತ್ತಿ ಸಹೋದರರ ರಾಜಕೀಯ ದಾಳ; ಸಿಎಂಗೆ ತಲೆನೋವಾದ ಬೆಳಗಾವಿ ಬೆಂಕಿ..!
First published: