Deepavali Festival: ದೀಪಾವಳಿ ಹಬ್ಬಕ್ಕೆ ಹುಬ್ಬಳ್ಳಿ ವಿಭಾಗದಿಂದ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ

ಹೋಗುವ ಮತ್ತು ಬರುವಾಗಿನ ಪ್ರಯಾಣಕ್ಕೆ ಆಸನಗಳನ್ನು ಒಮ್ಮೆಗೇ ಕಾಯ್ದಿರಿಸಿದರೆ ಬರುವಾಗಿನ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.

ವಾಯುವ್ಯ ಕರ್ನಾಟಕ ಸಾರಿಗೆ

ವಾಯುವ್ಯ ಕರ್ನಾಟಕ ಸಾರಿಗೆ

  • Share this:

ಹುಬ್ಬಳ್ಳಿ(ನ.09): ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಂಗಳೂರು ಮತ್ತಿತರ ಸ್ಥಳಗಳಿಂದ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕೋವಿಡ್-19 ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ನವೆಂಬರ್ 14 ರಂದು ನರಕ ಚತುರ್ದಶಿ ಮತ್ತು ಎರಡನೇ ಶನಿವಾರ, 15ರಂದು ರವಿವಾರ ದೀಪಾವಳಿ ಅಮಾವಾಸ್ಯೆ ಹಾಗೂ 16ರಂದು ಸೋಮವಾರ ಬಲಿಪಾಡ್ಯಮಿ ಪ್ರಯುಕ್ತ  ಹೆಚ್ಚಿನ ಜನದಟ್ಟಣೆ  ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ವೋಲ್ವೋ, ಸ್ಲೀಪರ್ ಹಾಗೂ ರಾಜಹಂಸ ಮುಂತಾದ ಐಷಾರಾಮಿ ಬಸ್ಸುಗಳು ಮತ್ತು ವೇಗದೂತ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ.


ಮುಂಗಡ ಬುಕ್ಕಿಂಗ್ ಹಾಗೂ ಪ್ರಯಾಣ ದರದಲ್ಲಿ ರಿಯಾಯಿತಿ


ಹಬ್ಬದ ವಿಶೇಷ ಬಸ್ಸುಗಳಿಗೆ ಆನ್ ಲೈನ್ ಮತ್ತು ಬುಕ್ಕಿಂಗ್ ಕೌಂಟರ್​​ಗಳ ಮೂಲಕ ಮುಂಚಿತವಾಗಿ ಆಸನಗಳನ್ನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವಾಗ 4 ಅಥವಾ 4 ಕ್ಕಿಂತ ಹೆಚ್ಚಿನ ಆಸನಗಳಿಗೆ ಒಂದೇ ಟಿಕೆಟ್ ಪಡೆದುಕೊಂಡರೆ ಮೂಲ ಪ್ರಯಾಣ ದರದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಹೋಗುವ ಮತ್ತು ಬರುವಾಗಿನ ಪ್ರಯಾಣಕ್ಕೆ ಆಸನಗಳನ್ನು ಒಮ್ಮೆಗೇ ಕಾಯ್ದಿರಿಸಿದರೆ ಬರುವಾಗಿನ ಪ್ರಯಾಣದ ಮೂಲ ಟಿಕೆಟ್ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.


ಕೊರೋನಾ ಪ್ರಮಾಣ ಇಳಿಕೆ; ಪ್ರವಾಸೋದ್ಯಮ‌ ಚಟುವಟಿಕೆ ಏರಿಕೆ; ಮತ್ತೆ ಹಿಂದಿನ ಸ್ಥಿತಿಯತ್ತ ಉತ್ತರ ಕನ್ನಡ

ಸಾರ್ವಜನಿಕರು ಈ ಹೆಚ್ಚುವರಿ ಬಸ್ಸುಗಳ ಮತ್ತು ರಿಯಾಯಿತಿಗಳ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮನವಿ ಮಾಡಿದ್ದಾರೆ.


ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘ ಮಂಡಳಿ ಚುನಾವಣೆ: 30 ನಾಮಪತ್ರ ಸಲ್ಲಿಕೆ


ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘ ನಿಯಮಿತದ ನಿರ್ದೇಶಕ ಮಂಡಳಿ ಚುನಾವಣೆಗೆ ಸಂಬಂಧಿಸಿದಂತೆ ಇದುವರೆಗೆ 30 ನಾಮಪತ್ರಗಳು ಸಲ್ಲಿಕೆಯಾಗಿವೆ. 21 ಸಾಮಾನ್ಯ ಅಭ್ಯರ್ಥಿಗಳು, ಓರ್ವ ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಮೂವರು ಹಿಂದುಳಿದ ಅ ವರ್ಗ  ಹಾಗೂ ಮೂವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. ನವೆಂಬರ್ 10 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.




ಕರ್ನಾಟಕ ರಾಜ್ಯ ಸಾರಿಗೆ ನಿಗಮದ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ವತಿಯಿಂದ, ಮತದಾರ ಪಟ್ಟಿ ಪರಿಷ್ಕರಿಸಲು ಹಾಗೂ ಸಹಕಾರಿ ಪತ್ತಿನ ಚುನಾವಣೆಯನ್ನು ತಡೆಹಿಡಿಯಲು ಮನವಿ ಸಲ್ಲಿಸಲಾಗಿದೆ. ಈ ಮನವಿಯನ್ನು ಸಹಕಾರ ಚುನಾವಣಾ ಪ್ರಾಧಿಕಾರದ ಜಂಟಿ ನಿಬಂಧಕರು ಹಾಗೂ ಚುನಾವಣಾಧಿಕಾರಿ ಕಳುಹಿಸಲಾಗಿದೆ ಎಂದು ಹುಬ್ಬಳ್ಳಿ ನಗರ ತಹಶೀಲ್ದಾರ ಹಾಗೂ ರಿಟರ್ನಿಂಗ್ ಆಫೀಸರ್ ಆದ ಶಶಿಧರ ಮಾಡ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published by:Latha CG
First published: