• Home
  • »
  • News
  • »
  • state
  • »
  • Satish Jarkiholi: ಸತೀಶ್‌ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ, ಮತ್ತೊಂದೆಡೆ ಬಿಜೆಪಿಯಿಂದ ದೂರು!

Satish Jarkiholi: ಸತೀಶ್‌ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ, ಮತ್ತೊಂದೆಡೆ ಬಿಜೆಪಿಯಿಂದ ದೂರು!

ಸತೀಶ್ ಜಾರಕಿಹೊಳಿ ವಿರುದ್ಧ ದೂರು

ಸತೀಶ್ ಜಾರಕಿಹೊಳಿ ವಿರುದ್ಧ ದೂರು

"ಹಿಂದೂ ಎಂಬ ಪದವೇ ಅಶ್ಲೀಲ" ಅಂತ ಹೇಳಿದ್ದ ಸತೀಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ. ಒಂದೆಡೆ ಸತೀಶ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೆ, ಮತ್ತೊಂದೆಡೆ ದೂರು ದಾಖಲಾಗಿದೆ. ಈ ನಡುವೆ ವಕೀಲರೊಬ್ಬರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

  • News18 Kannada
  • Last Updated :
  • Koppal, India
  • Share this:

ಬೆಂಗಳೂರು/ಕೊಪ್ಪಳ: “ಹಿಂದೂ (Hidnu) ಎಂಬ ಪದ ಅಶ್ಲೀಲ” ಅಂತ ಹೇಳಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ (atish Jarkiholi) ವಿರುದ್ಧ ದೂರು (complaint) ನೀಡಲಾಗಿದೆ. ಕೊಪ್ಪಳದಲ್ಲಿ (Koppala) ಸತೀಶ್ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು (BJP Party Workers), ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಇತ್ತ ಬೆಂಗಳೂರಿನಲ್ಲಿ (Bengaluru) ವಕೀಲ ದಿಲೀಪ್ ಕುಮಾರ್ (Lawyer Dilip Kumar) ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ (defamation case) ದಾಖಲಿಸಿದ್ದಾರೆ. ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ್‌ನಲ್ಲಿ (8th ACMM Court Bengaluru) ಖಾಸಗಿ ದೂರು ದಾಖಲಿಸಿದ್ದಾರೆ.


“ಹಿಂದೂ ಶಬ್ದವೇ ಅಶ್ಲೀಲ” ಎಂದಿದ್ದ ಸತೀಶ್ ಜಾರಕಿಹೊಳಿ


ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದರು. ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ. ಅದನ್ನು ನೀವು ಕೇಳಿದ್ರೆ ನಾಚಿಕೆ ಪಡುತ್ತೀರಿ ಎಂದಿದ್ದಾರೆ. ಬೇಕಾದರೆ ಯಾರಾದರೂ ಗೂಗಲ್‌ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.


ಸತೀಶ್ ಜಾರಕಿಹೊಳಿ ವಿರುದ್ಧ ದೂರು


ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ


ಸತೀಶ್ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಬೆಂಗಳೂರಿನಲ್ಲಿ ವಕೀಲರೊಬ್ಬರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ.


ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆ


ಇದನ್ನೂ ಓದಿ: Satish Jarkiholi: ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ ಹೇಳಿಕೆಗೆ ಕಾಂಗ್ರೆಸ್‌ನಲ್ಲೇ ವಿರೋಧ! ರಣದೀಪ್ ಸುರ್ಜೇವಾಲ ಖಂಡನೆ


ನವೆಂಬರ್‌ 18ಕ್ಕೆ ಕೋರ್ಟ್‌ನಲ್ಲಿ ವಿಚಾರಣೆ


ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ದಿಲೀಪ್ ಕುಮಾರ್ ಪರವಾಗಿ ವಕೀಲ ಧರ್ಮಪಾಲ್ ಅವರಿಂದ ಅರ್ಜಿ ಸಲ್ಲಿಕೆಯಾಗಿದೆ. ಮಾನನಷ್ಟ, ಸಮಾಜದಲ್ಲಿ ಗಲಭೆ, ದಂಗೆಗೆ ಸತೀಶ್ ಜಾರಿಕಹೊಳಿ ನೀಡಿರುವ ಹೇಳಿಕೆ ಕಾರಣವಾಗಲಿದೆ ಅಂತ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಈ ಅರ್ಜಿ ವಿಚಾರಣೆಯನ್ನು ಕೋರ್ಟ್ ನವೆಂಬರ್ 18ಕ್ಕೆ ನಿಗದಿ ಮಾಡಿದೆ.


ಸತೀಶ್ ಜಾರಕಿಹೊಳಿ ವಿರುದ್ಧ ಕೊಪ್ಪಳದಲ್ಲಿ ದೂರು


ಇನ್ನು ಸತೀಶ್ ಜಾರಕಿಹೊಳಿ ವಿರುದ್ಧ ಕೊಪ್ಪಳದಲ್ಲಿ ದೂರು ದಾಖಲಾಗಿದೆ. ಬಿಜೆಪಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಯಮಕನಮರಡಿ ಶಾಸಕ ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಹಿಂದೂ ಧರ್ಮದವರ ಭಾವನೆ ಧಕ್ಕೆ ಉಂಟು ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.


ಇದನ್ನೂ ಓದಿ: Satish Jarkiholi: ನನ್ನ ಭಾಷಣ ಇನ್ನೂ 10 ಸಲ ನೋಡಿ, ತಪ್ಪಿದ್ರೆ ಚರ್ಚೆ ಮುಂದುವರಿಸಿ; ಜಾರಕಿಹೊಳಿ ಸ್ಪಷ್ಟನೆ


ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ


ಇನ್ನು ಕೊಪ್ಪಳದ ಅಶೋಕ ವೃತ್ತದಲ್ಲಿ ಸತೀಶ ಜಾರಕಿಹೊಳಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸತೀಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್‌ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಪ್ರಮುಖರು ಹಿಂದೂ ಎಂಬುದು ಅಶ್ಲೀಲ ಪದ ಎಂದು ಹೇಳುವುದರ ಮೂಲಕ ಅವರು ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

Published by:Annappa Achari
First published: