ಮಲ್ಲಿಕಾರ್ಜುನ ಖರ್ಗೆ ಸೋಲು-ಗೆಲುವು ನಿಂತಿರೋದು ಜನರ ಮೇಲೆ - ಸಚಿವ ಪ್ರಿಯಾಂಕ್ ಖರ್ಗೆ

news18
Updated:August 31, 2018, 12:14 AM IST
ಮಲ್ಲಿಕಾರ್ಜುನ ಖರ್ಗೆ ಸೋಲು-ಗೆಲುವು ನಿಂತಿರೋದು ಜನರ ಮೇಲೆ - ಸಚಿವ ಪ್ರಿಯಾಂಕ್ ಖರ್ಗೆ
news18
Updated: August 31, 2018, 12:14 AM IST
- ಶಿವರಾಮ ಅಸುಂಡಿ, ನ್ಯೂಸ್ 18 ಕನ್ನಡ

ಕಲಬುರ್ಗಿ( ಆಗಸ್ಟ್ 30) :  ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ನಷ್ಟವೇನೂ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲೆಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿರುವುದಾಗಿ ಆ ಪಕ್ಷದ ಮುಖಂಡರು ಹೇಳಿಕೆ ನೀಡಿದ್ದಾರೆ. ಆದರೆ ನಮ್ಮ ತಂದೆಯವರನ್ನು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವುದು ಅಥವಾ ಸೋಲಿಸುವುದು ಜನತೆಗೆ ಬಿಟ್ಟದ್ದು ಎಂದರು.

ಚಿಂಚನಸೂರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಹೋಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿರುವುದಕ್ಕೆ ಕಾಂಗ್ರೆಸ್ ಕಾರಣವಲ್ಲ. ಪಕ್ಷದಲ್ಲಿ ಸುದೀರ್ಘವಾಗಿ ಎಲ್ಲವನ್ನೂ ಅನುಭವಿಸಿ, ಪಕ್ಷ ಬಿಟ್ಟು ಹೋಗುವಾಗ ಬ್ಲೇಮ್ ಮಾಡುವುದು ಸರಿಯಲ್ಲ. ಯಾರೇ ಪಕ್ಷ ಬಿಟ್ಟು ಹೋಗಲಿ, ಕಾಂಗ್ರೆಸ್ ಪಕ್ಷಕ್ಕೇನು ನಷ್ಟವಿಲ್ಲ, ನಮಗೆ ಜನಶಕ್ತಿಯಿದೆ, ನಮ್ಮ ಶಕ್ತಿಯ ಮೇಲೆಯೇ ಚುನಾವಣೆಗಳನ್ನು ಎದುರಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದೀಗೆ ಬರವಿರೋದ್ರಿಂದ ಮಾಧ್ಯಮದವ್ರು ಹೀಗೆ ಮಾಡ್ತಾರೆ

ಸುದ್ದಿಗೆ ಬರವಿರೋದ್ರಿಂದ ಮಾಧ್ಯಮದವರು ಸಮ್ಮಿಶ್ರ ಸರ್ಕಾರದ ವಿರುದ್ಧ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗೋದಾಗಿ ವಿವಾದ ಹುಟ್ಟು ಹಾಕುತ್ತಿದ್ದಾರೆ  ಎಂದು ಮಧ್ಯಗಳ ವಿರುದ್ದ ಸಚಿವರು ಕಿಡಿಕಾರಿದರು.

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು 100 ದಿನಗಳಾಗಿದ್ದು, ನಾವಿನ್ನೂ ಅಂಬೆಗಾಲಿಟ್ಟು ನಡೆಯುತ್ತಿದ್ದೇವೆ. ಆದರೆ ಮಾಧ್ಯಮಗಳು ಮಾತ್ರ ಇನ್ನಿಲ್ಲದ ಸುದ್ದಿಗಳನ್ನು ಸೃಷ್ಟಿಸುತ್ತಿವೆ ಎಂದರು.
Loading...

ಸಿದ್ಧರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವುದಾಗಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,  ಅವರು ಹೇಳಿಕೆ ನೀಡಿದ್ದ ಸಂದರ್ಭ ಸನ್ನಿವೇಷಗಳೇ ಬೇರೆ. ಆದರೆ ಮಾಧ್ಯಮದವರು ಸುದ್ದಿಗೆ ಬರವಿದೆ ಎಂದು ಈ ರೀತಿಯ ವಿವಾದಗಳನ್ನು ಸೃಷ್ಟಿಸಿ ದೊಡ್ಡದು ಮಾಡಿಕೊಂಡು ಹೋಗುತ್ತಿದ್ದಾರೆ. ಸಿದ್ಧರಾಮಯ್ಯ ಅವರೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಹೊಸ ಮುಖ್ಯಮಂತ್ರಿ ವಿಚಾರ ಮಾತನಾಡುವುದು ಈಗ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ನೂರು ದಿನ ಕಳೆದಿದ್ದು, ಸಾಕಷ್ಟು ಕೆಲಸಗಳನ್ನು ಪ್ರಾರಂಭಿದ್ದೇವೆ. ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಐದು ವರ್ಷ ಕಾಲಾವಧಿಯಲ್ಲಿ ಹೆಚ್ಚು ಹೆಚ್ಚು ಕೆಲಸ ಮಾಡಬೇಕೆಂಬ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದರು.
First published:August 30, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...