ಅಕ್ರಮ ಹಣ ವರ್ಗಾವಣೆ ಪ್ರಕರಣ​​: ಡಿಕೆಶಿ ತಾಯಿ ಮತ್ತು ಹೆಂಡತಿ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿಕೆ

ವಾದ ಮಂಡನೆಗೆ  ನವೆಂಬರ್​ 15 ವರೆಗೆ ಸಮಯವನ್ನು ನೀಡಿ ಎಂದು ಜಾರಿ ನಿರ್ದೇಶನಾಲಯದ ಪರ ವಕೀಲ ಅಮಿತ್ ಮಹಾಜನ್ ಕೇಳಿದ್ದರು. ಅಂದೇ ವಾದ ಮಾಡಲೇಬೇಕೆಂದು ವಾದ ಮಾಡದಿದ್ದರೂ ಆದೇಶ ನೀಡುತ್ತೇನೆ ಎಂದು ಇಡಿ ವಕೀಲರಿಗೆ ಜಡ್ಜ್ ಬ್ರಿಜೇಶ್ ಸೇಥಿ ಖಡಕ್ ಸೂಚನೆ ನೀಡಿದ್ದಾರೆ.

G Hareeshkumar | news18-kannada
Updated:November 7, 2019, 2:54 PM IST
ಅಕ್ರಮ ಹಣ ವರ್ಗಾವಣೆ ಪ್ರಕರಣ​​: ಡಿಕೆಶಿ ತಾಯಿ ಮತ್ತು ಹೆಂಡತಿ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿಕೆ
ಡಿಕೆಶಿ ತಾಯಿ ಗೌರಮ್ಮ ಮತ್ತು ಹೆಂಡತಿ ಉಷಾ
  • Share this:
ಬೆಂಗಳೂರು(ನ.07): ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಸಮನ್ಸ್​ ರದ್ದು ಕೋರಿ ಡಿಕೆಶಿ​​ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನವೆಂಬರ್​ 15ಕ್ಕೆ  ದೆಹಲಿ ಹೈಕೋರ್ಟ್​​ನಲ್ಲಿ ಮುಂದೂಡಿದೆ. ಜಡ್ಜ್  ಬ್ರಿಜೇಶ್ ಸೇಥಿ ನೇತೃತ್ವದ ಏಕ ಸದಸ್ಯ ಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದ್ದು, ವಾದ-ಪ್ರತಿವಾದ ಆಲಿಸಲಿದೆ. ಈಗಾಗಲೇ ಹೈಕೋರ್ಟ್​ ಐದು ಬಾರಿ ಅರ್ಜಿ ವಿಚಾರಣೆ ಮುಂದೂಡಿದೆ. 

ವಾದ ಮಂಡನೆಗೆ  ನವೆಂಬರ್​ 15 ವರೆಗೆ ಸಮಯವನ್ನು ನೀಡಿ ಎಂದು ಜಾರಿ ನಿರ್ದೇಶನಾಲಯದ ಪರ ವಕೀಲ ಅಮಿತ್ ಮಹಾಜನ್ ಕೇಳಿದ್ದರು. ಅಂದೇ ವಾದ ಮಾಡಲೇಬೇಕೆಂದು ವಾದ ಮಾಡದಿದ್ದರೂ ಆದೇಶ ನೀಡುತ್ತೇನೆ ಎಂದು ಇಡಿ ವಕೀಲರಿಗೆ ಜಡ್ಜ್ ಬ್ರಿಜೇಶ್ ಸೇಥಿ ಖಡಕ್ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಡಿಕೆಶಿ ತಾಯಿ ಮತ್ತು ಪತ್ನಿ ತಮಗೆ ಇಡಿ ಅಧಿಕಾರಿಗಳು ನೀಡಿರುವ ಸಮನ್ಸ್ ರದ್ದು ಕೋರಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಡಿಕೆಶಿ ತಾಯಿ ಪರವಾಗಿ ವಾದ ಮಂಡಿಸಿದ ವಕೀಲ ದಯಾನ್ ಕೃಷ್ಣನ್, ಗೌರಮ್ಮಗೆ 85 ವರ್ಷ. ಸಿಆರ್‌ಪಿಸಿ ಅನ್ವಯ 65 ವರ್ಷ ಮೇಲ್ಪಟ್ಟವರಿಗೆ ಪೊಲೀಸ್​​ ಠಾಣೆಗೆ ವಿಚಾರಣೆಗೆ ಬರಬೇಕೆಂದು ಸಮನ್ಸ್ ನೀಡುವಂತಿಲ್ಲ ಎಂದಿದ್ದರು. ಜತೆಗೆ ಅನಾರೋಗ್ಯದ ಕಾರಣ ಡಿಕೆಶಿ ತಾಯಿ ಮತ್ತು ಪತ್ನಿ ಇಬ್ಬರ ವಿಚಾರಣೆಯೂ ಬೆಂಗಳೂರಿನಲ್ಲೇ ನಡೆಸಬೇಕೆಂದು ಮನವಿ ಮಾಡಿದ್ದರು.

ಕಳೆದ ಅ.21ರಂದು ಡಿಕೆಶಿ ತಾಯಿ ಮತ್ತು ಪತ್ನಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಬ್ರಿಜೇಶ್ ಸೇಥಿ ನೇತೃತ್ವದ ಪೀಠ, ಇಬ್ಬರಿಗೂ ಹೊಸ ಸಮನ್ಸ್​ ನೀಡುವಂತೆ ಸೂಚಿಸಿತು. ಈ ವೇಳೆ ಇಡಿ ಪರವಾಗಿ ಹಾಜರಿದ್ದ ವಕೀಲರು ಕಾಂಗ್ರೆಸ್​​ ಟ್ರಬಲ್​​ ಶೂಟರ್​​ ಡಿ.ಕೆ ಶಿವಕುಮಾರ್ ಪತ್ನಿ ಉಷಾ, ತಾಯಿ ಗೌರಮ್ಮಗೆ ಹೊಸ ಸಮನ್ಸ್ ನೀಡಲಾಗುತ್ತದೆ ಎಂದು ತಿಳಿಸಿದ್ದರು.

ಇದನ್ನೂ ಓದಿ : ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ; ಮಾಜಿ ಸಂಸದ ಮುನಿಯಪ್ಪ ಸ್ಪಷ್ಟನೆ

ಡಿಕೆಶಿ ತಾಯಿ ಹಾಗೂ ಪತ್ನಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಉಷಾ ಅವರು ವಿಚಾರಣೆಗೆ ಹಾಜರಾಗಬೇಕಿಲ್ಲ. ಅಲ್ಲದೇ ಗೌರಮ್ಮಗೆ ನೀಡಿದ್ದ ಸಮನ್ಸ್ ಕೂಡ ಹಿಂಪಡೆಯಲಾಗಿದೆ. ಹೊಸದಾಗಿ ಸಮನ್ಸ್ ನೀಡುತ್ತೇವೆ ಎಂದು ಇಡಿ ಅಧಿಕಾರಿಗಳು  ಹೇಳಿದ್ದರು.

ಏನಿದು ಪ್ರಕರಣ?: ತಾಯಿ, ಪತ್ನಿ ಸೇರಿ ಇತರರ ಹೆಸರಲ್ಲಿ ಡಿಕೆ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಕಂಡು ಬಂದಿದ್ದರಿಂದ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರಿದಿದೆ. ಇಡಿ ತನಿಖೆ ಮುಗಿದ ಬಳಿಕ ಸರ್ಕಾರ ಅಧಿಕೃತವಾಗಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಈ ಹಿಂದೆ 2017ರ ಆಗಸ್ಟ್​ನಲ್ಲಿ ಐಟಿ ಅಧಿಕಾರಿಗಳು ಶಿವಕುಮಾರ್ ಮೇಲೆ ನಡೆಸಿದ ದಾಳಿ ವೇಳೆ ಸುಮಾರು 400 ಕೋಟಿ ರೂ.ಗೂ ಅಧಿಕ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿತ್ತು. ಆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿದಾಗ ಹಲವರ ಹೆಸರಲ್ಲಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ. (ವರದಿ : ಧರಣೀಶ್ ಬೂಕನಕೆರೆ)



 
First published: November 7, 2019, 7:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading