HOME » NEWS » State » DELHI VOTERS SHOWED ITS PREFERENCE FOR ONLY DEVELOPMENT HD KUMARASWAMY MAK

Delhi Election Result: ದೆಹಲಿಯ ಮತದಾರರು ತಮ್ಮ ಆದ್ಯತೆ ಅಭಿವೃದ್ಧಿಗೆ ಮಾತ್ರ ಎಂಬುದರ ಮೇಲ್ಪಂಕ್ತಿ ಹಾಕಿದ್ದಾರೆ; ಹೆಚ್​.ಡಿ. ಕುಮಾರಸ್ವಾಮಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಹಾಗೂ ಅಮಿತ್ ಶಾ ರಣತಂತ್ರವನ್ನೂ ಭೇದಿಸಿರುವ ಆಮ್ ಆದ್ಮಿ ಗೆಲುವು ಇಡೀ ದೇಶದಾದ್ಯಂತ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ಅನೇಕರು ಈಗಾಗಲೇ ಶುಭ ಕೋರಿದ್ದಾರೆ. ಕರ್ನಾಟಕದ ನಾಯಕರು ಸಹ ತಮ್ಮ ಈ ಆಮ್ ಆದ್ಮಿ ಗೆಲುವಿನ ಕುರಿತು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

news18-kannada
Updated:February 11, 2020, 3:12 PM IST
Delhi Election Result: ದೆಹಲಿಯ ಮತದಾರರು ತಮ್ಮ ಆದ್ಯತೆ ಅಭಿವೃದ್ಧಿಗೆ ಮಾತ್ರ ಎಂಬುದರ ಮೇಲ್ಪಂಕ್ತಿ ಹಾಕಿದ್ದಾರೆ; ಹೆಚ್​.ಡಿ. ಕುಮಾರಸ್ವಾಮಿ
ಎಚ್​.ಡಿ. ಕುಮಾರಸ್ವಾಮಿ
  • Share this:
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಹಾಗೂ ಅಮಿತ್ ಶಾ ರಣತಂತ್ರವನ್ನೂ ಭೇದಿಸಿರುವ ಆಮ್ ಆದ್ಮಿ ಗೆಲುವು ಇಡೀ ದೇಶದಾದ್ಯಂತ ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ. ಅನೇಕರು ಈಗಾಗಲೇ ಶುಭ ಕೋರಿದ್ದಾರೆ. ಕರ್ನಾಟಕದ ನಾಯಕರು ಸಹ ತಮ್ಮ ಈ ಆಮ್ ಆದ್ಮಿ ಗೆಲುವಿನ ಕುರಿತು ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

ಈ ಕುರಿತು ಟ್ವಿಟ್ ಮೂಲಕ ಆಮ್ ಆದ್ಮಿ ಪಕ್ಷದ ಗೆಲುವನ್ನು ಕೊಂಡಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, “ಬಿಜೆಪಿ, ಅದರಲ್ಲೂ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಸೇರಿದಂತೆ ಇಡೀ ಕೇಂದ್ರ ಸರಕಾರ ತನ್ನ 'ಚಾಣಕ್ಯ' ಬಲ ಪ್ರದರ್ಶಿಸಿದರೂ ದೆಹಲಿಯ ಪ್ರಬುದ್ಧ ಮತದಾರ ತನ್ನ ನಿಲುವು ಬದಲಿಸಲಿಲ್ಲ. ಜನತಾ ನ್ಯಾಯಾಲಯದ ಈ ತೀರ್ಪು ಸ್ವಾಗತಾರ್ಹ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಮತ್ತೊಂದು ಟ್ವಿಟ್​ನಲ್ಲಿ ”ಅಭಿವೃದ್ಧಿ ಹರಿಕಾರನನ್ನು 'ಭಯೋತ್ಪಾದಕ' ಎಂದಿದ್ದಕ್ಕಾಗಿ ದೆಹಲಿಯ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ಮೂಲಕ ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಎತ್ತಿಹಿಡಿದ ದೆಹಲಿಯ ಮತದಾರರು ತಮ್ಮ ಆದ್ಯತೆ ಅಭಿವೃದ್ಧಿಗೆ ಅಷ್ಟೇ ಎಂಬುದರ ಮೇಲ್ಪಂಕ್ತಿ ಹಾಕಿದ್ದಾರೆ” ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕುಮಟಳ್ಳಿ ಸಿಟ್ಟಿನಲ್ಲಿ ನ್ಯಾಯವಿದೆ, ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಬಿಎಸ್​ವೈ ವಚನ ಭ್ರಷ್ಟರಾಗುತ್ತಾರೆ; ಯತ್ನಾಳ್
Youtube Video
First published: February 11, 2020, 3:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories