Dengue Fever: ಯಾದಗಿರಿಯಲ್ಲಿ‌ ಮಕ್ಕಳಿಗೆ ಡೆಂಗ್ಯೂ, ಜ್ವರದ ಲಕ್ಷಣ; ಆತಂಕದಲ್ಲಿ ಪೋಷಕರು

ಕಳೆದ ಒಂದೂವರೆ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಎರಿಕೆಯಾಗಿದೆ.

ಚಿಕಿತ್ಸೆ

ಚಿಕಿತ್ಸೆ

  • Share this:
ಯಾದಗಿರಿ (ಸೆ. 16): ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ಜೊತೆ ಈಗ ಮಕ್ಕಳಲ್ಲಿ ಸಾಮಾನ್ಯ ಜ್ವರ ಕಾಣಿಸಿಕೊಳ್ಳುತ್ತಿರುವುದು ಸಾಕಷ್ಟು ಆತಂಕ ಮೂಡಿಸಿದೆ.  ಜಿಲ್ಲೆಯಲ್ಲಿ ಕೂಡ ಜ್ವರದಿಂದ ಬಳಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಜೊತೆಗೆ ಮಕ್ಕಳಲ್ಲಿ ಡೆಂಗ್ಯೂ ಸೋಂಕು (dengue Fever) ಹೆಚ್ಚಾಗುತ್ತಿರುವುದು ಪೋಷಕರಲ್ಲಿ ದಿಗಿಲು ಮೂಡಿಸಿದೆ.  ಜಿಲ್ಲೆಯ ಸುರಪುರ, ಶಹಾಪುರ, ಗುರು ಮಠಕಲ್, ವಡಗೇರಾ ಮೊದಲಾದ ಹಳ್ಳಿಗಳಲ್ಲಿ ಅತಿ ಹೆಚ್ಚಿನ ಮಕ್ಕಳಲ್ಲಿ ಅನಾರೋಗ್ಯ ಸಮಸ್ಯೆ ಕಂಡು ಬರುತ್ತಿದೆ. ಕೋವಿಡ್ ಭಯದಿಂದ ಈಗಾಗಲೇ ಸಾಕಷ್ಟು ನಲುಗಿರುವ ಪೋಷಕರು ಮಕ್ಕಳಲ್ಲಿ ಕಂಡು ಬರುತ್ತಿರುವ ಜ್ವರದಿಂದ ಆಸ್ಪತ್ರೆಗಳತ್ತ ಹೆಚ್ಚಿನ ಸಂಖ್ಯೆಯತ್ತ ಮುಖ ಮಾಡುತ್ತಿದ್ದಾರೆ

ಕಳೆದ ಒಂದೂವರೆ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಎರಿಕೆಯಾಗಿದೆ. ಖಾಸಗಿ  ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲು ಪೋಷಕರು ಮುಗಿ ಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.   ನಗರದಲ್ಲಿರುವ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ. ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೂಡ ಕೂಡ ನಿತ್ಯವೂ 80 ಕ್ಕೂ ಹೆಚ್ಚು ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇಲ್ಲಿವರಗೆ 22 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು,ಅದರಲ್ಲಿ 9 ಜನ ಮಕ್ಕಳಲ್ಲೂ ಡೆಂಗ್ಯೂ ಸೊಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಸಾಮಾನ್ಯ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ
ಈಗಾಗಲೇ ಹಳ್ಳಿಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಜನರಿಗೆ  ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಮನೆ ಸುತ್ತಲೂ ನೀರು ಸಂಗ್ರಹವಾಗದಂತೆ ನೋಡಿಕೊಂಡು ಸೊಳ್ಳೆಗಳು ಕೂರದಂತೆ ಎಚ್ಚರಿಸಿದ್ದಾರೆ.

ಇದನ್ನು ಓದಿ: ಭವಿಷ್ಯದಲ್ಲಿ ಉತ್ತಮ ಸಂಪಾದನೆ ಕನಸು ಕಾಣುತ್ತಿದ್ರೆ ಪಿಯುಸಿ ಬಳಿಕ ಈ ಕೋರ್ಸ್​ ಆರಿಸಿಕೊಳ್ಳಿ

ಇನನು ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿರುವ ಕುರಿತು ನ್ಯೂಸ್ 18 ಕನ್ನಡಕ್ಕೆ ಮಾತನಾಡಿದ  ಮಕ್ಕಳ ತಜ್ಞ ವೈದ್ಯ ಡಾ.ರವಿ‌ ಪಾಟೀಲ, ಮಕ್ಕಳಲ್ಲಿ ಹೆಚ್ಚಾಗಿ ಜ್ವರ ,ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದು ನಿತ್ಯವೂ 80 ಕ್ಕೂ ಹೆಚ್ಚು ಮಕ್ಕಳಿಗೆ ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದ್ದಾರೆ. ನಿತ್ಯವೂ ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.  ಕೋವಿಡ್ ಪಾಸಿಟಿವಿಟಿ ಪ್ರಕರಣ ಪತ್ತೆಯಾಗದ ಹಿನ್ನೆಲೆ ಆತಂಕ ದೂರುವಾದಂತಾಗಿದೆ.

ಡಿಎಚ್ ಓ ಡಾ.ಇಂದುಮತಿ ಪಾಟೀಲ ಮಾತನಾಡಿ, ಇಲ್ಲಿವರಗೆ 22 ಜನರಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು,ಅದರಲ್ಲಿ 8 ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ವಾತಾವರಣ ಬದಲಾವಣೆ ಆಗಿರುವುದರಿಂದ  ಜ್ವರ, ಕೆಮ್ಮು, ನೆಗಡಿಯಿಂದ ಬಳಲುವ ಪ್ರಕರಣಗಳು ಹೆಚ್ಚಾಗಿವೆ. ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 15 ಬೆಡ್ ಗಳ ಸೌಲಭ್ಯ ಮಾಡಲಾಗಿದ್ದು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ.  ಮಕ್ಕಳ ತಜ್ಞ ವೈದ್ಯರು ಈ ಬಗ್ಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಪೋಷಕರು ಮಕ್ಕಳ ಆರೋಗ್ಯದಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹೆಚ್ಚಿನ ಯಾವುದೇ ಭಯಪಡುವ ಅಗತ್ಯವಿಲ್ಲ. ಆದಷ್ಟು ಮಕ್ಕಳ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು ಎಂದರು.
Published by:Seema R
First published: