HOME » NEWS » State » DEPUTY CM GOVIND KARAJOL INAUGURATION OF LITERARY CONFERENCE OFFICE IN KALBURGI HK

ಫೆಬ್ರವರಿಯಲ್ಲಿ ಸಾಹಿತ್ಯ ಸಮ್ಮೇಳನ - ಕಾರ್ಯಚಟುವಟಿಕೆಗಳಿಗೆ ಡಿಸಿಎಂ ಕಾರಜೋಳ ಚಾಲನೆ

ಕಲಬುರ್ಗಿಯಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

news18-kannada
Updated:December 13, 2019, 10:11 PM IST
ಫೆಬ್ರವರಿಯಲ್ಲಿ ಸಾಹಿತ್ಯ ಸಮ್ಮೇಳನ - ಕಾರ್ಯಚಟುವಟಿಕೆಗಳಿಗೆ ಡಿಸಿಎಂ ಕಾರಜೋಳ ಚಾಲನೆ
ಡಿಸಿಎಂ ಗೋವಿಂದ​ ಕಾರಜೋಳ ನೇತ್ರತ್ವದ ಪೂರ್ವಸಿದ್ಧತಾ ಸಭೆ
  • Share this:
ಕಲಬುರ್ಗಿ(ಡಿ.12): ಫೆಬ್ರವರಿ 05 ರಿಂದ ಮೂರು ದಿನಗಳ ಕಾಲ ಕಲಬುರ್ಗಿಯಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಇಲ್ಲಿಯ ಕನ್ನಡ ಭವನದಲ್ಲಿ ಡಿಸಿಎಂ  ಗೋವಿಂದ ಕಾರಜೋಳ ಸಮ್ಮೇಳನ ಕಛೇರಿ ಉದ್ಘಾಟಿಸಿದರು. 

ಕಲಬುರ್ಗಿಯಲ್ಲಿ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಸಮ್ಮೇಳನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಭಾಗವಹಿಸಿದ ವಿವಿಧ ಸಾಹಿತಿಗಳು, ಜನಪ್ರತಿನಿಧಿಗಳು, ಸಲಹೆಗಳನ್ನು ನೀಡಿದರು. ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಕಲ್ಯಾಣ ಕರ್ನಾಟಕ ಸಾಹಿತಿಗಳನ್ನು ಕಡೆಗಣಿಸಲಾಗಿದೆ ಎಂದು ಕೆಲ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದರು.

kalburgi dcm
ಸಮ್ಮೇಳನದ ಕಛೇರಿಯನ್ನು ಡಿಸಿಎಂ ಗೋವಿಂದ ಕಾರಜೋಳ ಉದ್ಘಾಟಿಸಿದರು


ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಚೆನ್ನಣ್ಣ ವಾಲೀಕಾರ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಿಸಬೇಕು. ಸಮ್ಮೇಳನದ ಮುಖ್ಯ ವೇದಿಕೆಗೆ ವಾಲೀಕಾರರ ಹೆಸರಿಡಬೇಕೆಂದು ಸಾಹಿತಿ ಶಿವರಾಜ ಪಾಟೀಲ ಆಗ್ರಹಿಸಿದರು. ಇದೇ ವೇಳೆ ಸಮ್ಮೇಳನದ ಸ್ವಾಗತ ಸಮಿತಿ ಸೇರಿ 16 ಸಮಿತಿಗನ್ನು ಸಚಿವ ಗೋವಿಂದ ಕಾರಜೋಳ ಪ್ರಕಟಿಸಿದರು.

ನಂತರ ಕನ್ನಡ ಭವನಕ್ಕೆ ತೆರಳಿ ಸಮ್ಮೇಳನದ ಕಛೇರಿ ಉದ್ಘಾಟಿಸುವ ಮೂಲಕ ಸಮ್ಮೇಳನ ಕಾರ್ಯಚಟುವಟಿಕೆಗಳಿಗೆ ಅಧಿಕೃತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಮರುನಾಮಕರಣಗೊಂಡ ನಂತರ ಮೊದಲ ಬಾರಿಗೆ ಕಲಬುರ್ಗಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದ್ದು, ಸಮ್ಮೇಳನ ಯಶಸ್ಸಿಗೆ ಕಂಕಣಬದ್ಧರಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಮೂರು ದಶಕಗಳ ನಂತರ ಕಲಬುರ್ಗಿಗೆ ಅಖಿಲ ಭಾರತ ಸಮ್ಮೇಳನದ ಆತಿಥ್ಯ ಸಿಕ್ಕಿದ್ದು, ಅದರ ಯಶಸ್ಸಿಗೆ ಶ್ರಮಿಸೋದಾಗಿ ಸಾಹಿತಿಗಳು, ಜನಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದರು. ನಾಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗಾಗಿ ವಿಸ್ತೃತ ಚರ್ಚೆ ನಡೆಯಲಿದೆ.ಇದನ್ನೂ ಓದಿ : ಮಂತ್ರಿಯಾಗಲಿ ಬಿಡಲಿ, ಎಂಟು ಬಾರಿ ಶಾಸಕನಾಗಿರುವ ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ; ಉಮೇಶ್ ಕತ್ತಿ

 
Youtube Video
Published by: G Hareeshkumar
First published: December 12, 2019, 8:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories