HOME » NEWS » State » DEVEGOUDA FAMILY CANNOT BE PURCHASED BY MONEY SAYS FORMER CM HD KUMARSWAMY HK

ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ: ಹೆಚ್​ ಡಿ ಕುಮಾರಸ್ವಾಮಿ

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ನಾಯಕರುಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ

news18-kannada
Updated:October 18, 2020, 7:27 PM IST
ದೇವೇಗೌಡರ ಕುಟುಂಬವನ್ನು ಹಣ ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ: ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
  • Share this:
ಬೆಂಗಳೂರು(ಅಕ್ಟೋಬರ್​. 18): ದೇವೇಗೌಡರ ಕುಟುಂಬವನ್ನುಹಣ ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ. ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ದೇಶದಲ್ಲಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಆರ್​ ಆರ್​​ ನಗರ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ನಾಯಕರುಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ. ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯುವವರ ಬಗ್ಗೆ ನಾನು ಮಾತನಾಡಲ್ಲ. 250 ಕೋಟಿ ರೂಪಾಯಿ ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ ಎಂದರು

ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೋನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಪುಡ್‌ ಕಿಟ್‌ ನೀಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಸರಕಾರವನ್ನು ಯಾರೂ 10 ಪರ್ಸೆಂಟ್‌ ಸರಕಾರ ಎಂದು ಯಾರೂ ಹೇಳಲಿಲ್ಲ. ನಾನು ಅಧಿಕಾರದಲ್ಲಿದ್ದಾಗ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ತಿಳಿಸಿದರು.

ಇದನ್ನೂ ಓದಿ : ಕನಕಪುರ ಬಂಡೆ ಪುಡಿಮಾಡುವ ಡೈನಮೈಟ್ ಗಳು ಬಿಜೆಪಿ ಬಳಿ ಇವೆ ; ನಳಿನ್ ಕುಮಾರ್ ಕಟೀಲ್

ಆರು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು ಎಂದು ತಿಳಿದು ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
Youtube Video

ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮಾತನಾಡಿ, ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಮುನಿರತ್ನ‌ ಅವರು ಬಿಜೆಪಿಗೆ ಹೋಗಿದ್ದಾರೆ. ಹನುಮಂತರಾಯಪ್ಪನವರಿಗೆ ಜೆಡಿಎಸ್ ಎದುರು ನಿಲ್ಲಲು ಧೈರ್ಯ ಇಲ್ಲ. ನಮ್ಮ ಪಕ್ಷದ ನಾಯಕರನ್ನು ಸೆಳೆಯುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನಿಮ್ಮ ಮತಗಳನ್ನ ಗಿರವಿ ಅಂಗಡಿಯಲ್ಲಿ ಅಡ ಇಡುವ ಕೆಲಸ ಮಾಡುತ್ತಿವೆ ಎಂದು ಹೇಳಿದರು.
Published by: G Hareeshkumar
First published: October 18, 2020, 7:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories