ಯೋಗೇಶ್ ಗೌಡ ಕೊಲೆ ಪ್ರಕರಣ: ಸಿಬಿಐನಿಂದ ಆರು ಆರೋಪಿಗಳ ವಿರುದ್ದ ಪ್ರಕರಣ ದಾಖಲು

ಸಿಬಿಐ ವಹಿಸಿಕೊಂಡ ನಂತರ ಮೊದಲ ಬಾರಿಗೆ 6 ಆರೋಪಿಗಳ ವಿರುದ್ದ ಪ್ರಕರಣ ದಾಖಲು ಮಾಡಿದೆ. ರಾಜ್ಯ  ಸರ್ಕಾರ ಸೆಪ್ಟೆಂಬರ್​ 8ರಂದು  ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

G Hareeshkumar | news18-kannada
Updated:September 25, 2019, 11:01 PM IST
ಯೋಗೇಶ್ ಗೌಡ ಕೊಲೆ ಪ್ರಕರಣ: ಸಿಬಿಐನಿಂದ ಆರು ಆರೋಪಿಗಳ ವಿರುದ್ದ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
G Hareeshkumar | news18-kannada
Updated: September 25, 2019, 11:01 PM IST
ಬೆಂಗಳೂರು(ಸೆ.25): ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಆರಂಭಿಸಿರುವ ಸಿಬಿಐ ಆರು ಮಂದಿ ಆರೋಪಿಗಳ ವಿರುದ್ದಎಫ್​ಐಆರ್​ ದಾಖಲು ಮಾಡಿದೆ.

ಬಸವರಾಜ ಶಿವಪ್ಪ, ವಿಕ್ರಮ್ ಬಳ್ಳಾರಿ, ಕೀರ್ತಿ ಕುಮಾರ್ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಾಟಗಿ, ಮಹಾಬಲೇಶ್ವರ ಹೊನಗಲ್ ವಿರುದ್ಧ ಇಂದು ಸಿಬಿಐ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡ ನಂತರ ಮೊದಲ ಬಾರಿಗೆ 6 ಜನರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. ರಾಜ್ಯ  ಸರ್ಕಾರ ಸೆಪ್ಟೆಂಬರ್​ 8ರಂದು  ಯೋಗೇಶ್ ಗೌಡ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಏನಿದು ಯೋಗೇಶ್​ ಗೌಡ ಹತ್ಯೆ ಪ್ರಕರಣ?

ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15 ರಂದು ಸಪ್ತಾಪುರದ ಉದಯ್ ಜಿಮ್  ಬಳಿ ಹತ್ಯೆ ಮಾಡಲಾಗಿತ್ತು. ಕಾರಿನಲ್ಲಿ ಜಿಮ್ ಗೆ ಬಂದ ಯೋಗೇಶ ಗೌಡ ಪೇಪರ್ ಓದುತ್ತಾ ಕುಳಿತುಕೊಂಡ ಸಮಯದಲ್ಲಿ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದರು. ತಕ್ಷಣ ಓಡಿ ಹೋಗಲು ಯತ್ನಿಸಿದಾಗ ಬಲಗೈಗೆ ಮಚ್ಚಿನಿಂದ ಕೊಚ್ಚಿದ್ದರು. ನಂತರ ತಮ್ಮ ಜಿಮ್ ಒಳಗೆ ಓಡಿದ ಯೋಗೇಶನನ್ನು ಬೆನ್ನತ್ತಿದ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ, ಭೀಕರವಾಗಿ ಕೊಲೆಗೈದಿದ್ದರು.

ಇದನ್ನೂ ಓದಿ : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಾನು ಆರೋಪಿ ಅಲ್ಲ; ಇದೆಲ್ಲಾ ಜೋಶಿ ಕುತಂತ್ರ: ವಿನಯ್​ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​ ಮಾಜಿ ಸಚಿವ ವಿನಯ್ ಕುಲಕರ್ಣಿ ಹೆಸರು ಕೂಡಾ ತಳಕು ಹಾಕಿಕೊಂಡಿತ್ತು. ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಯೋಗೇಶ ಗೌಡ ಅವರ ಸಹೋದರ ಗುರುನಾಥ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಅಮಿತ್ ಶಾ ಹಾಗೂ ಯಡಿಯೂರಪ್ಪ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಭರವಸೆ ನೀಡಿದ್ದರು.
Loading...

First published:September 25, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...