ಬೆಂಗಳೂರು (ಫೆಬ್ರವರಿ 28); ಸ್ವಾತಂತ್ರ್ಯ ಹೋರಾಟಗಾರ ಎಂಬ ನೆಪದಲ್ಲಿ ಹೆಚ್.ಎಸ್. ದೊರೆಸ್ವಾಮಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುವುದು ತಪ್ಪು ಎಂದು ಹೇಳುವ ಮೂಲಕ ಮಾಜಿ ಸಚಿವ ರೇಣುಕಾಚಾರ್ಯ ಸಹ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇಂದು ತುಮಕೂರಿನಲ್ಲಿ ಮಾತನಾಡಿರುವ ರೇಣುಕಾಚಾರ್ಯ, “ದೊರೆಸ್ವಾಮಿ ಹಿರಿಯರು, ಪಕ್ಷಾತೀತವಾಗಿ ಕೆಲಸ ಮಾಡಲಿ, ಸರ್ಕಾರಕ್ಕೆ ಸಲಹೆ ಸೂಚನೆ ನೀಡಲಿ ಬೇಜಾರಿಲ್ಲ. ಆದರೆ, ಅದನ್ನು ಬಿಟ್ಟು ಸ್ವಾತಂತ್ರ್ಯ ಹೋರಾಟಗಾರ ಎಂಬ ನೆಪದಲ್ಲಿ ಕಾಂಗ್ರೆಸ್-ಜೆಡಿಎಸ್ ಪರ ಏಜೆಂಟ್ ರೀತಿಯಲ್ಲಿ ಕೆಲಸ ಮಾಡಬಾರದು. ದೇಶದ್ರೋಹಿಗಳಿಗೆ ಬೆಂಬಲ ನೀಡಬಾರದು” ಎಂದು ಕಿಡಿಕಾರಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ವಿರುದ್ಧವೂ ಗುಡುಗಿರುವ ಅವರು, “ಪ್ರಧಾನಿಯನ್ನು ಅವಹೇಳನ ಮಾಡುವ ಯು.ಟಿ. ಖಾದರ್ ಒಬ್ಬ ಅಯೋಗ್ಯ, ಆತನಿಗೆ ಕರ್ನಾಟಕದಲ್ಲಿ ಇರಲು ಯೋಗ್ಯನಲ್ಲ. ಇಂಥವರಿಂದಲೇ ದೇಶದಲ್ಲಿ ಶಾಂತಿ ಕದಡಿರುವುದು.
ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ದೇಶದ್ರೋಹಿ ಘೋಷಣೆ ಹೆಚ್ಚಿದೆ. ಪಾಕಿಸ್ತಾನದಲ್ಲಿ ಹೋಗಿ ಭಾರತದ ಪರ ಘೋಷಣೆ ಕೂಗಲು ಇವರಿಗೆ ತಾಕತ್ತು ಇದೆಯಾ?, ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಕಂಡಲ್ಲಿ ಗುಂಡು ಹಾಕಬೇಕು,ಗಲ್ಲಿಗೇರಿಸಬೇಕು. ಇದು ಸಾಧ್ಯವಾದರೆ ಮಾತ್ರ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಅವಕಾಶವಾದಿ ರಾಜಕಾರಣ ಮಾಡುವ ಕಾಂಗ್ರೆಸ್ನವರಿಗೆ ಮಾನ-ಮಾರ್ಯಾದೆ ಇದೆಯಾ?; ಬಿಸಿ ಪಾಟೀಲ್ ಕಿಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ