• Home
  • »
  • News
  • »
  • state
  • »
  • D K Shivakumar: ಇತ್ತ ಇಡಿ ಸಂಕಷ್ಟ, ಅತ್ತ ಪಕ್ಷದಲ್ಲೇ ಗುದ್ದಾಟ; ರಾಜಕೀಯಕ್ಕೆ ಗುಡ್​ ಬೈ ಹೇಳ್ತಾರಾ ಡಿಕೆ ಶಿವಕುಮಾರ್!?

D K Shivakumar: ಇತ್ತ ಇಡಿ ಸಂಕಷ್ಟ, ಅತ್ತ ಪಕ್ಷದಲ್ಲೇ ಗುದ್ದಾಟ; ರಾಜಕೀಯಕ್ಕೆ ಗುಡ್​ ಬೈ ಹೇಳ್ತಾರಾ ಡಿಕೆ ಶಿವಕುಮಾರ್!?

ಡಿ ಕೆ ಶಿವಕುಮಾರ್​

ಡಿ ಕೆ ಶಿವಕುಮಾರ್​

ನನಗೆ ಇದೀಗ 60 ವರ್ಷ ತುಂಬಿದೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಸುಳಿವು ನೀಡಿದ್ದಾರೆ. 

  • Share this:

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar)​ ಅವರು ನಿವೃತ್ತಿ ಬಗ್ಗೆ ಮಾತಾಡಿದ್ದಾರೆ. ನನಗೆ ನೀವು ಕೊಟ್ಟಿರುವ ಪೊಷಿಷನ್ ಸಾಕು, ಇನ್ಯಾವ ಪೊಷಿಷನ್ (Position) ಬೇಡ. ನನಗೆ ಇದೀಗ 60 ವರ್ಷ ತುಂಬಿದೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ಸುಳಿವು ನೀಡಿದ್ದಾರೆ. ಆಯುಧ ಪೂಜೆ ದಿನ ಕನಕಪುರದ ತಮ್ಮ ನಿವಾಸದಲ್ಲಿ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರ ಸಭೆಯಲ್ಲಿ (Meeting) ಅವರು ಮಾತನಾಡಿರುವ ಇದೀಗ ವೀಡಿಯೋ ವೈರಲ್‌ ಆಗಿದೆ.


ನಾನು ಇನ್ನು 8-10 ವರ್ಷ ರಾಜಕಾರಣ ಮಾಡ್ಬೋದು


ನಾನು ಇನ್ನು 8-10 ವರ್ಷ ಮಾತ್ರ ರಾಜಕಾರಣ ಮಾಡಬಹುದು. ಆ ನಂತರ ರಾಜಕೀಯ ಮಾಡಲು ಆಗಲ್ಲ. ಕನಕಪುರ ಕ್ಷೇತ್ರದ ಜನರು ನನಗೆ ಮತ ನೀಡಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ನಾನು ರಾಜಕೀಯ ನಿವೃತ್ತಿ ಪಡೆಯುವುದರ ಒಳಗಾಗಿ ಈ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಬದಲಾವಣೆ ತರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


ದೇವರು ನಂಗೆ ಎಲ್ಲವನ್ನೂ ಕೊಟ್ಟಿದ್ದಾನೆ


ನಾನು ಯಾರಿಂದಲೂ ಯಾವುದೇ ಪ್ರತಿಫಲ ನಿರೀಕ್ಷೆ ಮಾಡುವುದಿಲ್ಲ. ನಾನು ಸಾಕಷ್ಟು ಸಂಪಾದನೆ ಮಾಡಿದ್ದೇನೆ. ದೇವರು ಎಲ್ಲವನ್ನೂ ಕೊಟ್ಟಿದ್ದಾನೆ. ನನ್ನ ಮೇಲೆ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವನ್ನೂ ಅನುಭವಿಸುತ್ತೇನೆ ಎಂದು ಹೇಳಿದ್ದಾರೆ.


ಯಾವುದೇ ಕಾಮಗಾರಿಯಲ್ಲೂ ಕಮಿಷನ್ ಪಡೆದಿಲ್ಲ


ಈ ತಾಲೂಕಿನಲ್ಲಿ ಯಾವುದೇ ವಿಚಾರಕ್ಕೂ ಯಾರ ಮುಂದೆಯೂ ಕೈಚಾಚಿಲ್ಲ. ಯಾವುದೇ ಕಾಮಗಾರಿಯಲ್ಲೂ ಕಮಿಷನ್ ಪಡೆದಿಲ್ಲ. ಜಾತಿ ಮೇಲೆ ನನಗೆ ನಂಬಿಕೆ ಇಲ್ಲ. ನೀತಿಯ ಮೇಲೆ ನನಗೆ ನಂಬಿಕೆ ಇದೆ ಅಷ್ಟೇ ಎಂದು ತಿಳಿಸಿದ್ದಾರೆ. ರಾಜಕೀಯ ರಣರಂಗದಲ್ಲೇ ರಾಜಕೀಯ ಕದನ


ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ (ಕೆಪಿಸಿಸಿ) ಡಿ.ಕೆ ಶಿವಕುಮಾರ್‌ ಅವರು ಶುಕ್ರವಾರ ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಡಿ.ಕೆ ಶಿವಕುಮಾರ್‌ ಶುಕ್ರವಾರ ಹಾಜರಾಗಿದ್ದಾರೆ. ಈ ಮಧ್ಯೆ ಅವರು ಈ ಟ್ವೀಟ್‌ ಮಾಡಿದ್ದಾರೆ.


ಬಿಜೆಪಿಯಿಂದ ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ  


ರಾಜಕೀಯ ಕದನಗಳನ್ನು ರಾಜಕೀಯ ರಣರಂಗದಲ್ಲಿಯೇ ನಡೆಸಬೇಕು. ಬಿಜೆಪಿ ತನ್ನ ರಾಜಕೀಯ ಎದುರಾಳಿಗಳಿಗೆ ಕಿರುಕುಳ ನೀಡಿ, ಬೆದರಿಸಲು ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ. ಇದಕ್ಕೆ ಮೇ 2023ರಲ್ಲಿ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ. ಇ.ಡಿ ಮೂಲಕ ನಿರುದ್ಯೋಗ, ಬೆಲೆ ಏರಿಕೆಯನ್ನು ನಿಗ್ರಹಿಸಲು ಸಾಧ್ಯವಿಲ್ಲ ಎನ್ನುವುದು ಬಿಜೆಪಿಗೆ ಅರಿವಾಗಬೇಕಿದೆ’ ಎಂದು ಅವರು ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: 108 Health Workers: ಕೊನೆಗೂ 108 ಆ್ಯಂಬುಲೆನ್ಸ್​ ಸಿಬ್ಬಂದಿ ಸಮಸ್ಯೆಗೆ ಸಿಗ್ತು ಪರಿಹಾರ; ವಾರದೊಳಗೆ ಸಂಬಳದ ಭರವಸೆ


ಇಂದಿನ ವಿಚಾರಣೆ ಮುಕ್ತಾಯ

ನ್ಯಾಷನಲ್​ ಹೆರಾಲ್ಡ್​ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದು, ಇಂದಿನ ವಿಚಾರಣೆ ಮುಕ್ತಾಯವಾಗಿದೆ. ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಡಿಕೆ ಶಿವಕುಮಾರ್​​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಕರ್ನಾಟಕದಲ್ಲಿ ಭಾರತ್​ ಜೋಡೋ ಯಾತ್ರೆ ನಡೆಯುತ್ತಿರುವುದರಿಂದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಡಿಕೆ ಶಿವಕುಮಾರ್​​ ಮನವಿ ಮಾಡಿದ್ದರು. ಆದರೆ, ಡಿಕೆಶಿ ಮನವಿಯನ್ನು ಇಡಿ ಪುರಸ್ಕರಿಸದೇ ಇಂದೇ ವಿಚಾರಣೆಗೆ ಹಾಜರಾಗಲೇಬೇಕು ಎಂದು ಹೇಳಿತ್ತು.Published by:ಪಾವನ ಎಚ್ ಎಸ್
First published: