ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ; ದಿನೇಶ್​ ಗುಂಡೂರಾವ್​

ಜನತಾ ನ್ಯಾಯಾಲಯ ಉತ್ತಮ ತೀರ್ಪನ್ನು ಕೊಡುತ್ತೆ  ಎನ್ನುವ ವಿಶ್ವಾಸ ಇತ್ತು. ಪಕ್ಷ ದ್ರೋಹ ಮಾಡಿದ್ದಕ್ಕೆ ಜನತೆ ಶಿಕ್ಷೆ ನೀಡುತ್ತಾರೆ ಎಂದುಕೊಂಡಿದ್ದೆವು. ಉತ್ತಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದೆವು. ಎಲ್ಲಾ ನಾಯಕರು, ಕಾರ್ಯಕರ್ತರು ಉತ್ತಮ ರೀತಿಯಲ್ಲಿ, ಶಕ್ತಿಮೀರಿ ಕೆಲಸ ಮಾಡಿದ್ದಾರೆ. 

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಸುದ್ದಿಗೋಷ್ಠಿ

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಸುದ್ದಿಗೋಷ್ಠಿ

  • Share this:
ಬೆಂಗಳೂರು(ಡಿ.09): ಉಪಚುನಾವಣೆಯಲ್ಲಿ ಕಾಂಗ್ರೆಸ್​​​ ಹೀನಾಯ ಸೋಲು ಅನುಭವಿಸಿರುವ ಹಿನ್ನೆಲೆ, ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ದಿನೇಶ್​ ಗುಂಡೂರಾವ್​ ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿನೇಶ್​ ಗುಂಡೂರಾವ್​, ಪಕ್ಷ ಮುಕ್ತ ಅವಕಾಶವನ್ನು ನನಗೆ ನೀಡಿತ್ತು. ನನ್ನ ನೈತಿಕ ಜವಾಬ್ದಾರಿ ಹೊತ್ತು ಉಪಚುನಾವಣೆಯಲ್ಲಿ ಸೋಲಿನ ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ದಿನೇಶ್​ ಗುಂಡೂರಾವ್ ರಾಜೀನಾಮೆ ಪತ್ರ

ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಇಂದು ಕೊನೆಯ ಮೊಳೆ ಬಿದ್ದಿದೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ನಾನು ಅಧ್ಯಕ್ಷನಾದಾಗಿನಿಂದಲೂ ಶಾಂತಿಯ ವಾತಾವರಣ ಇರಲಿಲ್ಲ. ರಾಜೀನಾಮೆ ಕೊಡಲು ತೀರ್ಮಾನ ಮಾಡಿದ್ದೇನೆ. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ. ಪಕ್ಷ ಸಂಘಟನೆಗೆ ನನ್ನ ಸಹಕಾರ ಯಾವಾಗಲೂ ಇರುತ್ತೆ. ನನ್ನ ತೀರ್ಮಾನವನ್ನ ನಿನ್ನೆಯೇ ವರಿಷ್ಠರ ಗಮನಕ್ಕೆ ತಂದಿದ್ದೆ ಎಂದರು.

ಜನತಾ ನ್ಯಾಯಾಲಯ ಉತ್ತಮ ತೀರ್ಪನ್ನು ಕೊಡುತ್ತೆ  ಎನ್ನುವ ವಿಶ್ವಾಸ ಇತ್ತು. ಪಕ್ಷ ದ್ರೋಹ ಮಾಡಿದ್ದಕ್ಕೆ ಜನತೆ ಶಿಕ್ಷೆ ನೀಡುತ್ತಾರೆ ಎಂದುಕೊಂಡಿದ್ದೆವು. ಉತ್ತಮ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದೆವು. ಎಲ್ಲಾ ನಾಯಕರು, ಕಾರ್ಯಕರ್ತರು ಉತ್ತಮ ರೀತಿಯಲ್ಲಿ, ಶಕ್ತಿಮೀರಿ ಕೆಲಸ ಮಾಡಿದ್ದಾರೆ.

ಜನತಾ ನ್ಯಾಯಾಲಯದ ತೀರ್ಪು ಅಂತಿಮ. ಆ ತೀರ್ಪನ್ನು ನಾನು ಗೌರವಿಸುತ್ತೇನೆ.  ಅದನ್ನು ನಾನು ತಪ್ಪಾಗಿ ಭಾವಿಸಲ್ಲ. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹುಣಸೂರಿನಿಂದ ಮಂಜುನಾಥ, ಶಿವಾಜಿನಗರದ ರಿಜ್ವಾನ್ ಹಾಗೂ ಪಕ್ಷೇತರ ಅಭ್ಯರ್ಥಿ ಶರತ್ ಸೇರಿ ಬಿಜೆಪಿ ಅಭ್ಯರ್ಥಿಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದರು.

ಉಪಚುನಾವಣೆ ಶಾಕ್: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ
First published: