• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • BSY ಕಣ್ಣೀರಿನಲ್ಲಿ ಕೊಚ್ಚಿ ಹೋದ BJP ಖಾವಿಧಾರಿಗಳನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದ ಸ್ವಾಮೀಜಿ

BSY ಕಣ್ಣೀರಿನಲ್ಲಿ ಕೊಚ್ಚಿ ಹೋದ BJP ಖಾವಿಧಾರಿಗಳನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದ ಸ್ವಾಮೀಜಿ

ದಿಂಗಾಲೇಶ್ವರಿ ಸ್ವಾಮೀಜಿ / ಬಿ ಎಸ್ ಯಡಿಯೂರಪ್ಪ

ದಿಂಗಾಲೇಶ್ವರಿ ಸ್ವಾಮೀಜಿ / ಬಿ ಎಸ್ ಯಡಿಯೂರಪ್ಪ

Dingaleshwari Swamiji: ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಹಿರಿಯ ನಾಯಕರ ಕಡೆಗಣನೆಯಿಂದಾಗಿಯೇ ಬಿಜೆಪಿಗೆ ಈ ಗತಿಯಾಗಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಕಿಡಿಕಾರದ್ದಾರೆ. ಈಗಲಾದರೂ ಬಿಜೆಪಿ ನಾಯಕರಿಗೆ ಬುದ್ಧಿ ಬರಲಿ ಎಂದು ಸಲಹೆ ನೀಡಿದ್ದಾರೆ.

  • Share this:

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ (Former CM BS Yediyurappa) ಅವರ ಕಣ್ಣೀರಲ್ಲಿ ಬಿಜೆಪಿ (BJP) ಕೊಚ್ಚಿ ಹೋಗಿದೆ ಎಂದು ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ (Dingaleshwara Swamiji) ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯ ನೂಲ್ವಿ ಕ್ರಾಸ್ ಬಳಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ನಾನು ಹಿಂದೆ ಯಡಿಯೂರಪ್ಪ ಅವರ ಕಣ್ಣೀರನಲ್ಲಿ ಬಿಜೆಪಿ ಸರ್ಕಾರ (BJP Government) ಕೊಚ್ಚಿ ಹೋಗುತ್ತದೆ ಎಂದಿದ್ದೆ. ಇವತ್ತು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದ್ರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ ಎಂದು ಸ್ವಾಮೀಜಿ ಹೇಳಿದರು.


ನಾನು ಅವತ್ತು ಒಬ್ಬ ವ್ಯಕ್ತಿ ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೂ ಬೇಕಾದ ನಾಯಕರು. ಅವತ್ತು ಎಲ್ಲಾ ಸಮಾಜದ ನಾಯಕರು ಯಡಿಯೂರಪ್ಪರನ್ನು ಮುಂದುವರಿಸಬೇಕು ಎಂದಿದ್ದರು. ಯಾವುದೋ ಕೆಟ್ಟ ಉದ್ದೇಶ, ಅಥವಾ ಸ್ವಾರ್ಥಕ್ಕೆ ತೆಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿಗೆ ಕಾರಣವಾಗಿದೆ ಎಂದರು.


ಖಾವಿಧಾರಿಗಳನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ


ಹಿಂದೆ ಪರ್ಸೆಂಟೇಜ್ ಬಗ್ಗೆ ದುರಹಂಕಾರಿಯಾಗಿ ಮಾತನಾಡಿದ್ದರು. ಗೂಂಡಾ ವೃತ್ತಿಯಲ್ಲಿ ದಾಳಿ ಮಾಡಿದ್ದರು. ಅದರ ಪರಿಣಾಮವೇ ಇದಾಗುತ್ತೇ ಎಂದು  ಸ್ವಾಮೀಜಿ ಕಿಡಿಕಾರಿದರು. ಸ್ವಾಮೀಜಿ ಗಂಭೀರ ಹೇಳಿಕೆ ಮಾಡಿದಾಗ ಚಿಂತನ ಮಂಥನ ಮಾಡಬೇಕು. ಕೇಸರಿ ಪಡೆ ಎಂದು ಹೇಳಿ ಅಧಿಕಾರಕ್ಕೆ ಬಂದು ಖಾವಿಧಾರಿಗಳನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಖಾವಿಧಾರಿಗಳು ಪಾಠ ಮಾಡಿದ್ರು, ಅವರು ಪಾಠ ಕಲಿಯಲಿಲ್ಲ ಎಂದು ಬೇಸರ ಹೊರ ಹಾಕಿದರು.


ಪಕ್ಷ ಕಟ್ಟಿದ ವ್ಯಕ್ತಿಯ ಮಾತು ಕೇಳಬೇಕಿತ್ತು


ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ ಇಂದಿನ ಸ್ಥಿತಿಗೆ ಕಾರಣ. ಯಡಿಯೂರಪ್ಪ, ಸವದಿ, ಶೆಟ್ಟರ್, ಈಶ್ವರಪ್ಪ ಕಡೆಗಣಸಿರೋದೆ ಇದಕ್ಕೆಲ್ಲ ಕಾರಣ. ಪಕ್ಷ ಕಟ್ಟದ ವ್ಯಕ್ತಿ ಮಾತು ಕೇಳಬೇಕು ಅಂದ್ರೆ ಏನು ಎಂದ ಅವರು ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ಜಗದೀಶ್ ಶೆಟ್ಟರ್, ಸವದಿಯನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕಿತ್ತು. ಎಂದ ಅವರು, ಬ್ರಾಹ್ಮಣ ವಿಚಾರವಾಗಿ ನಾನು ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡ್ತೀನಿ. ರಾಜ್ಯದಲ್ಲಿ ಏನಾಗಿದೆ ಅನ್ನೋ ದಾಖಲೆ ಇವೆ. ಬ್ರಾಹ್ಮಣರ ಬಗ್ಗೆ ಮಾತಾಡೋಕೆ ನನಗೆ ಭಯ ಇಲ್ಲ. ನನಗೆ ಯಾರ ಅಂಕುಶವೂ ಇಲ್ಲ ಎಂದು ಸ್ವಾಮೀಜಿ ಗುಡುಗಿದರು.




ಬಹಳ ಮಾತಾಡಿ ಉಪಯೋಗ ಇಲ್ಲ


ರಾಜ್ಯದ ನಾಯಕರನ್ನು ಬಹಳ ಕೆಟ್ಟ ರೀತಿಯಲ್ಲಿ ನೋಡಿಕೊಂಡರು. ಅವರದು ಅವರೇ ಉಂಡರು. ದಕ್ಷಿಣದ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ. ಕರ್ನಾಟಕದ ನಾಯಕರನ್ನು ಬಿಟ್ಡು ಏನಾದರೂ ಮಾಡ್ತೀನಿ ಅಂದುಕೊಂಡರು.


Jagadish shettar reacts bs yediyurappa s lingayat leaders meeting mrq
ಜಗದೀಶ್ ಶೆಟ್ಟರ್/ ಬಿಎಸ್ ಯಡಿಯೂರಪ್ಪ


ರಾಜ್ಯದ ಮತದಾರರು ಬುದ್ದಿಗೇಡಿಗಳಾ? ರಾಷ್ಟ್ರ ನಾಯಕರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ರಾಜ್ಯವನ್ನು ಸರಿಯಾದ ರೀತಿ ನಡೆಸುವ ವ್ಯಕ್ತಿ ಸಿಎಂ ಆಗಬೇಕು ಎಂದ ಸ್ವಾಮೀಜಿ ಆಗ್ರಹಿಸಿದರು.


ಇದನ್ನೂ ಓದಿ:  Karnataka CM: ಸಿಎಂ ಸ್ಥಾನ ಯಾರಿಗೆ, ಸಿದ್ದುಗೋ? ಡಿಕೆಶಿಗೋ? ನಾಳೆಯೇ ಅಧಿಕೃತ ಘೋಷಣೆ


ಲಿಂಗಾಯತ ನಾಯಕನಿಗೆ ಡಿಸಿಎಂ ಪಟ್ಟ ನೀಡಲಿ


ಇನ್ನೂ ಸಮರ್ಥ, ಯೋಗ್ಯ ವ್ಯಕ್ತಿ ಸಿಎಂ ಆಗಬೇಕು,ಕರ್ನಾಟಕ ಒಂದು ದೃಷ್ಟಿಕೋನದಲ್ಲಿ ನೋಡುವವರು ಸಿಎಂ ಆಗಬೇಕು. ಲಿಂಗಾಯತ ನಾಯಕನಿಗೆ ಉಪಮುಖ್ಯಮಂತ್ರಿ ನೀಡಬೇಕು. ಲಿಂಗಾಯತ ಉತ್ತರ ಕರ್ನಾಟಕದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಇದು ನಮ್ಮ ಅಭಿಪ್ರಾಯ ಎಂದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

First published: