• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣ ಫಲಾನುಭವಿಗಳ ಪಟ್ಟಿಗೆ ಕೊಕ್ಕೆ: ಕನಕಗಿರಿ ಶಾಸಕರ ಹಸ್ತಕ್ಷೇಪ (ಭಾಗ-01)

ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣ ಫಲಾನುಭವಿಗಳ ಪಟ್ಟಿಗೆ ಕೊಕ್ಕೆ: ಕನಕಗಿರಿ ಶಾಸಕರ ಹಸ್ತಕ್ಷೇಪ (ಭಾಗ-01)

ಫಲಾನುಭವಿ ರೈತರನ್ನೇ ಇವರು ಕಾಂಗ್ರೆಸ್ ನವರು, ಅವರು ಬಿಜೆಪಿ ಪರ ರೈತರು ಎಂದು ವಿಭಜನೆ ಮಾಡುತ್ತಿದ್ದು, ತಮಗೆ ಬೇಕಾದವರಿಗೆ, ಹಾಗೂ ತಾವು ಬಯಸಿದ್ದನ್ನು ಕೊಡುವವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲು ಒತ್ತಡ ಹಾಕಲಾಗಿದೆ

ಫಲಾನುಭವಿ ರೈತರನ್ನೇ ಇವರು ಕಾಂಗ್ರೆಸ್ ನವರು, ಅವರು ಬಿಜೆಪಿ ಪರ ರೈತರು ಎಂದು ವಿಭಜನೆ ಮಾಡುತ್ತಿದ್ದು, ತಮಗೆ ಬೇಕಾದವರಿಗೆ, ಹಾಗೂ ತಾವು ಬಯಸಿದ್ದನ್ನು ಕೊಡುವವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲು ಒತ್ತಡ ಹಾಕಲಾಗಿದೆ

ಫಲಾನುಭವಿ ರೈತರನ್ನೇ ಇವರು ಕಾಂಗ್ರೆಸ್ ನವರು, ಅವರು ಬಿಜೆಪಿ ಪರ ರೈತರು ಎಂದು ವಿಭಜನೆ ಮಾಡುತ್ತಿದ್ದು, ತಮಗೆ ಬೇಕಾದವರಿಗೆ, ಹಾಗೂ ತಾವು ಬಯಸಿದ್ದನ್ನು ಕೊಡುವವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲು ಒತ್ತಡ ಹಾಕಲಾಗಿದೆ

  • Share this:

ಕೊಪ್ಪಳ(ಡಿ.11):  ರೈತವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಇಂಥ ಸಂಕಷ್ಟದ ನಡುವೆಯೂ ರಾಜ್ಯ ಸರಕಾರ ರೈತರಿಗೆ ಅನುಕೂಲವಾಗಲಿ ಎನ್ನುವ ಸದುದ್ದೇಶದಿಂದ ಕೆಲವು ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಆದರೆ ದೇವರು ವರ ಕೊಟ್ಟರೂ ಪೂಜಾರಿ ನೀಡುವುದಿಲ್ಲ ಎನ್ನುವಂತಾಗಿದೆ ರೈತರ ಸ್ಥಿತಿ. ಇದಕ್ಕೆ ತಾಜಾ ಉದಾಹರಣೆ ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣದ ಫಲಾನುಭವಿಗಳ ಪಟ್ಟಿ.  ಆದರೆ, ಈ ಪಟ್ಟಿಯಲ್ಲಿ ತಾರತಮ್ಯ ಕಂಡು ಬಂದಿದ್ದು, ಇದರಲ್ಲಿ ಶಾಸಕರ ಹಸ್ತಕ್ಷೇಪ ಕಂಡುಬಂದಿದೆ. ಈರುಳ್ಳಿ ಬೆಳೆಗಾರರ ಸಂಕಷ್ಟ ಅರಿತ ಸರಕಾರ ಈರುಳ್ಳಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ರೈತರಿಗೆ ಸಬ್ಸಿಡಿ ನೀಡುವ ಸೌಲಭ್ಯ ಆರಂಭಿಸಿದೆ. ಇದಕ್ಕಾಗಿ ತೋಟಗಾರಿಕಾ ಇಲಾಖೆಗೆ ಗುರಿಯನ್ನೂ ನೀಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆನ್ನುವುದು ಸರಕಾರದ ಮಹಾತ್ವಾಕಾಂಕ್ಷೆ. ಸುಮಾರು 1.25 ಲಕ್ಷ ರೂ.ವೆಚ್ಚದಡಿ ನಿರ್ಮಾಣವಾಗುವ ಪ್ರತಿ ಘಟಕಕ್ಕೆ ಸರಕಾರ ಸುಮಾರು 85 ಸಾವಿರ ರೂಪಾಯಿ ಸಬ್ಸಿಡಿ ನೀಡುತ್ತದೆ. ಇದಕ್ಕೆ ಈರುಳ್ಳಿ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿ ಅರ್ಹರನ್ನ ಫಲಾನುಭವಿಗಳನ್ನಾಗಿ ಮಾಡಲಾಗುತ್ತದೆ. ಆದರೆ, ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯ ಸಿಗದೇ ವಂಚಿತರಾಗುತ್ತಿದ್ದಾರೆ. 


ಈರುಳ್ಳಿ ಸಂಸ್ಕರಣಾ ಘಟಕ ಏಕೆ ಬೇಕು?:


ಈರುಳ್ಳಿ ಬೆಲೆ ಕುಸಿದು ಬೆಳೆಗಾರರು ಈರುಳ್ಳಿಯನ್ನು ಮಾರಾಟ ಮಾಡಲಾಗದೇ ರಸ್ತೆಗೆ ಚೆಲ್ಲಿ ನಷ್ಟ ಅನುಭಬಿಸುವುದನ್ನು ತಪ್ಪಿಸಲು ರಾಜ್ಯ ಸರಕಾರ ಈರುಳ್ಳಿಯನ್ನು ಸಂರಕ್ಷಿಸಲು ಅಗತ್ಯವಿರುವ ವಾತಾವರಣದ ಜೊತೆಗೆ ಜಮೀನಿನಲ್ಲೇ ಈರುಳ್ಳಿ ಸಂಸ್ಕರಿಸುವ ಕಟ್ಟಡ ನಿರ್ಮಿಸಲು ಸಹಾಯಧನ ನೀಡುತ್ತದೆ. ಇದರಿಂದ ರೈತರು ಹಾಳಾಗಬಹುದಾದ ಈರುಳ್ಳಿಯನ್ನು ಸಂರಕ್ಷಿಸಬಹುದು, ಜೊತೆಗೆ ಆ ಕಟ್ಟಡವನ್ನು ಕೃಷಿಪರ ವಿವಿಧೋದ್ದೇಶಗಳಿಗೂ ಬಳಸಬಹುದು ಎಂಬ ಆಲೋಚನೆಯಿಂದ ಸರಕಾರ ಇದನ್ನು ಆರಂಭಿಸಿದೆ. ಆದರೆ ಈ ಯೋಜನೆಯಲ್ಲೂ ಕೆಲ ಚುನಾಯಿತ ಜನಪ್ರತಿನಿಧಿಗಳು ಅನರ್ಹರ ಹೆಸರನ್ನು ಸೇರಿಸಲು, ಆ ಮೂಲಕ ಸರಕಾರದ ಸಬ್ಸಿಡಿಯಲ್ಲೂ ಪಾಲು ಪಡೆಯಲು ಹುನ್ನಾರ ನಡೆಸಿರುವುದು ಬೆಳಕಿಗೆ ಬಂದಂತಾಗಿದೆ.


ರೈತರನ್ನೇ ವಿಭಜನೆ ಮಾಡಿದ ಶಾಸಕರು?:


ತೋಟಗಾರಿಕಾ ಇಲಾಖೆ ಯೋಜನೆಯಡಿ ಅರ್ಜಿ ಆಹ್ವಾನಿಸಿದಾಗ ಜಿಲ್ಲಾದ್ಯಂತ ಸಾವಿರಕ್ಕೂ ಅರ್ಜಿ ಬಂದಿವೆ. ಸರಕಾರ ಜಿಲ್ಲೆಗೆ ಕೊಟ್ಟಿರುವ ಗುರಿ 300. ಈಗಾಗಲೇ ಇಲಾಖೆ ಗುರಿ ತಲುಪಿದ್ದು, ಈಗ ಕನಕಗಿರಿ ಹಾಗೂ ಕುಷ್ಟಗಿ ಭಾಗಗಳಿಂದ ಬೇಡಿಕೆ ಬರುತ್ತಿದೆ. ಮೊದಲು ಕುಷ್ಟಗಿ, ಗಂಗಾವತಿಯಲ್ಲಿ ಅಷ್ಟಾಗಿ ಬೇಡಿಕೆ ಈರಲಿಲ್ಲ. 2020-21ನೇ ಸಾಲಿನಡಿ ಯೋಜನೆಯ ಪ್ರಯೋಜನ ಪಡೆಯಲು ಕೊಪ್ಪಳ ತಾಲೂಕಿನಿಂದ 600, ಕುಷ್ಟಗಿ ತಾಲೂಕಿನಿಂದ 150, ಗಂಗಾವತಿ ತಾಲೂಕಿನಿಂದ 60, ಯಲಬುರ್ಗಾ ತಾಲೂಕಿನಿಂದ 100 ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದಿಂದ 90 ಅರ್ಜಿಗಳು ಸಲ್ಲಿಕೆಯಾಗಿವೆ.


ಇದನ್ನು ಓದಿ: ಲೈವ್​ನಲ್ಲಿ ಲಗ್ನ; ಮನೆ ಬಾಗಿಲಿಗೆ ವಿವಾಹ ಭೋಜನ; ಕೊರೋನಾ ಮದುವೆ ಟ್ರೆಂಡ್​ ಇದು


ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಇರದ ತಾರತಮ್ಯ ಕನಕಗಿರಿ ಕ್ಷೇತ್ರದಲ್ಲಿ ಕಂಡು ಬಂದಿದೆ. ಫಲಾನುಭವಿಗಳ ಆಯ್ಕೆಪಟ್ಟಿ ತಯಾರಿಸಬೇಕಾದವರು ಆಯಾ ಭಾಗದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು. ಆದರೆ ಕನಕಗಿರಿ ಕ್ಷೇತ್ರದಲ್ಲಿ ಅಧಿಕಾರಿಗಳ ಕರ್ತವ್ಯದಲ್ಲಿ ಮೂಗು ತೂರಿಸುವ ಶಾಸಕ ಬಸವರಾಜ ದಢೇಸೂಗೂರು ಫಲಾನುಭವಿ ರೈತರನ್ನೇ ಇವರು ಕಾಂಗ್ರೆಸ್ ನವರು, ಅವರು ಬಿಜೆಪಿ ಪರ ರೈತರು ಎಂದು ವಿಭಜನೆ ಮಾಡುತ್ತಿದ್ದು, ತಮಗೆ ಬೇಕಾದವರಿಗೆ, ಹಾಗೂ ತಾವು ಬಯಸಿದ್ದನ್ನು ಕೊಡುವವರ ಹೆಸರನ್ನು ಫಲಾನುಭವಿಗಳ ಪಟ್ಟಿಯಲ್ಲಿ ಸೇರಿಸಲು ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.


ಈ ಕುರಿತು ಶಾಸಕ ಬಸವರಾಜ ದಢೇಸೂಗೂರು ಅವರ ಪ್ರತಿಕ್ರಿಯೆ ಪಡೆಯಲು ಅವರ ಮೊಬೈಲ್ ಸಂಖ್ಯೆಗೆ ಹಲವು ಬಾರಿ ಸಂಪರ್ಕ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ. ಅವರ ಆಪ್ತ ಸಹಾಯಕರೂ ಸಹ ಶಾಸಕರ ಹಾದಿಯನ್ನೇ ಅನುಸರಿಸಿದರು.


(ವರದಿ: ಬಸವರಾಜ್​ ಕುರಗಲ್​)

Published by:Seema R
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು