• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Race for DCM: ಸಿಎಂ ಕಸರತ್ತಿಗೆ ತೆರೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

Race for DCM: ಸಿಎಂ ಕಸರತ್ತಿಗೆ ತೆರೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

(ಸಾಂದರ್ಭಿಕ ಚಿತ್ರ)

(ಸಾಂದರ್ಭಿಕ ಚಿತ್ರ)

Karnataka Congress: ಈಗಾಗಲೇ‌ ಬಹಿರಂಗವಾಗಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

 • News18 Kannada
 • 2-MIN READ
 • Last Updated :
 • Karnataka, India
 • Share this:

ಬೆಂಗಳೂರು: ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಸಿಎಂ ಸ್ಪರ್ಧೆಗೆ ತೆರೆ ಬಿದ್ದಿದೆ. ಈ ಕಸರತ್ತು ಮುಗಿದ ಬೆನ್ನಲ್ಲೇ ಒಂದೇ ಒಂದು ಡಿಸಿಎಂ ಹುದ್ದೆ ಸೃಷ್ಟಿಗೆ ಕಾಂಗ್ರೆಸ್ ಹಿರಿಯ ನಾಯಕರು (Congress Senior Leaders) ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಚುನಾವಣೆ ಫಲಿತಾಂಶ (Election Results) ಬಳಿಕ ಎಂಟಕ್ಕೂ ಅಧಿಕ ಜನರು ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದರೆ ಡಿಕೆ ಶಿವಕುಮಾರ್​ ಒಬ್ಬರಿಗೆ ಡಿಸಿಎಂ ಸ್ಥಾನ ನೀಡಲಾಗಿದೆ. ಪ್ರಮುಖ ಮೂರು ಸಮುದಾಯದ ನಾಯಕರು ತಮಗೆ ಈ ಬಾರಿ ಡಿಸಿಎಂ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ರು. ಇಂದು ಸಂಜೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC DK Shivakumar) ಶಾಸಕಾಂಗ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಇನ್ನೆರಡು ಡಿಸಿಎಂ ಸ್ಥಾನ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.


ಇಂದು ನಡೆಯುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ವೀರಶೈವ ಲಿಂಗಾಯತ, ದಲಿತ ಹಾಗೂ ಮುಸ್ಲಿಂ ಮುಖಂಡರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಚರ್ಚೆ ನಡೆಸಲು ಚಿಂತನೆ ನಡೆಸಿದ್ದಾರೆ. ನಾಲ್ಕು ಡಿಸಿಎಂ ಹುದ್ದೆ ಸೃಷ್ಟಿಗೆ ಒತ್ತಡ ಹೇರಲು ಮೂರು ಸಮುದಾಯಗಳು ಮುಂದಾಗಿವೆ.


ಈಗಾಗಲೇ‌ ಬಹಿರಂಗವಾಗಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.
ಇದನ್ನೂ ಓದಿ:  Karnataka DCM: ಡಿಸಿಎಂ ಹುದ್ದೆಗೆ ಸಾಂವಿಧಾನಿಕ ಮಾನ್ಯತೆ ಇಲ್ಲ, ಎಕ್ಸ್‌ಟ್ರಾ ಪವರ್ ಏನೂ ಇಲ್ಲ: ಸತೀಶ್ ಜಾರಕಿಹೊಳಿ


ಹಿರಿಯ ಕಾಂಗ್ರೆಸ್​ ನಾಯಕರ ಪ್ರತ್ಯೇಕ ಸಭೆ


ಇನ್ನು ಮತ್ತೊಂದು ಕಡೆ ಮೂಲ ಕಾಂಗ್ರೆಸ್ ಹಿರಿಯ ನಾಯಕರು ರಹಸ್ಯ ಸ್ಥಳದಲ್ಲಿ ಸಭೆ ನಡೆಸಿದ್ದರೆ ಎಂದು ತಿಳಿದು ಬಂದಿದೆ. ಒಗ್ಗಟ್ಟಾಗಿ ಸಚಿವ ಸ್ಥಾನ ಕೇಳುವ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

First published: