ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾದ ಡಿ.ಕೆ.ರವಿ ಹೆಂಡತಿ ಕುಸುಮಾ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರಿಕೊಂಡರು.

ಕಾಂಗ್ರೆಸ್​ ಸೇರ್ಪಡೆಯಾದ ಕುಸುಮಾ

ಕಾಂಗ್ರೆಸ್​ ಸೇರ್ಪಡೆಯಾದ ಕುಸುಮಾ

 • Share this:
  ಬೆಂಗಳೂರು(ಅ.04): ರಾಜರಾಜೇಶ್ವರಿ ನಗರದ ಟಿಕೆಟ್​ ಆಕಾಂಕ್ಷಿ ದಿವಂಗತ ಡಿ.ಕೆ.ರವಿ ಪತ್ನಿ ಹಾಗೂ ಹನುಮಂತರಾಯಪ್ಪನವರ ಮಗಳು ಕುಸುಮಾ ಇಂದು ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಗೆ ಕುಟುಂಬ ಸಮೇತವಾಗಿ ಆಗಮಿಸಿದ್ದ ಕುಸುಮಾ ಇಂದು ಬೆಳಗ್ಗೆ 11.45ರಲ್ಲಿ ಕಾಂಗ್ರೆಸ್​ ಸದಸ್ಯತ್ವವನ್ನು ಪಡೆದರು. ಈ ಶುಭ ಗಳಿಗೆಗಾಗಿ ಹನುಂತರಾಯಪ್ಪ ಕುಟುಂಬ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಬೆಳಗ್ಗೆ 10.40ಕ್ಕೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ , ಮಾಜಿ ಡಿಸಿಎಂ ಪರಮೇಶ್ವರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಭಾಗಿಯಾಗಿದ್ದರು.

  Bangalore Drug Mafia: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳ ಬಂಧನ

  ಕೊನೆಗೂ ಕೈ ಹಿಡಿದ ಡಿ.ಕೆ ರವಿ ಪತ್ನಿ ಕುಸುಮಾ

  ಕೊನೆಗೂ ಡಿ.ಕೆ.ರವಿ ಪತ್ನಿ ಕುಸುಮಾ ಕೈ ಪಡೆ ಸೇರಿದ್ದಾರೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಕಾಂಗ್ರೆಸ್​ ಪಕ್ಷಕ್ಕೆ ಸೇರಿಕೊಂಡರು.

  ಇದೇ ವೇಳೆ ಹನುಮಂತರಾಯಪ್ಪ ಹಾಗೂ ಅವರ ಬೆಂಬಲಿಗರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಜೊತೆಗೆ ಸಿರಾ ಕ್ಷೇತ್ರದ ಬೇರೆ ಪಕ್ಷದ ನೂರಾರು ಮುಖಂಡರೂ ಸಹ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ , ಮಾಜಿ ಡಿಸಿಎಂ ಪರಮೇಶ್ವರ್, ಮಾಜಿ ಸಚಿವ ಜಯಚಂದ್ರ ಸೇರಿದಂತೆ ಹಿರಿಯರ ಸಮ್ಮುಖದಲ್ಲಿ ಸೇರ್ಪಡೆಯಾದರು.
  Published by:Latha CG
  First published: