HOME » NEWS » State » DK SHIVAKUMAR AND OTHER CONGRESS LEADERS OPPOSED DECISION ON LEAVE THE TIPU CHAPTER FROM 7TH STRANDED TEXT RH

ಏಳನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಪಾಠ ಕೈ ಬಿಡುವ ಬಗ್ಗೆ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ಆಕ್ರೋಶ

ನಮ್ಮ ಇತಿಹಾಸ ಬದಲಾವಣೆ ಆಗಬಾರದು. ಇವರು ಜನರ ದಾರಿ ತಪ್ಪಿಸಲು ನಾವು ಬಿಡಲ್ಲ ಇದು ಕಾಂಗ್ರೆಸ್ ಪಕ್ಷದ ನಿಲುವು. ಇದರ ಸಾಧಕ ಬಾಧಕಗಳ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುತ್ತೇವೆ. ಇದು ಒಂದು ವರ್ಗ, ಜಾತಿಗೆ ಸೀಮಿತವಾದುದಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಇದು ದೇಶದ ಚರಿತ್ರೆಯ ವಿಚಾರ. ನಮ್ಮ ಮಕ್ಕಳಿಗೆ ತಿಳಿವಳಿಕೆ ಹೇಳಿಕೊಡಬೇಕು. ಇದರ ಬಗ್ಗೆಯೂ ನಮ್ಮ ತಂಡ ಅಧ್ಯಯನ ನಡೆಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

news18-kannada
Updated:July 28, 2020, 5:17 PM IST
ಏಳನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಪಾಠ ಕೈ ಬಿಡುವ ಬಗ್ಗೆ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ಆಕ್ರೋಶ
ನಮ್ಮ ಇತಿಹಾಸ ಬದಲಾವಣೆ ಆಗಬಾರದು. ಇವರು ಜನರ ದಾರಿ ತಪ್ಪಿಸಲು ನಾವು ಬಿಡಲ್ಲ ಇದು ಕಾಂಗ್ರೆಸ್ ಪಕ್ಷದ ನಿಲುವು. ಇದರ ಸಾಧಕ ಬಾಧಕಗಳ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುತ್ತೇವೆ. ಇದು ಒಂದು ವರ್ಗ, ಜಾತಿಗೆ ಸೀಮಿತವಾದುದಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಇದು ದೇಶದ ಚರಿತ್ರೆಯ ವಿಚಾರ. ನಮ್ಮ ಮಕ್ಕಳಿಗೆ ತಿಳಿವಳಿಕೆ ಹೇಳಿಕೊಡಬೇಕು. ಇದರ ಬಗ್ಗೆಯೂ ನಮ್ಮ ತಂಡ ಅಧ್ಯಯನ ನಡೆಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
  • Share this:
ಬೆಂಗಳೂರು; ಟಿಪ್ಪು ಸುಲ್ತಾನ್ ವಿಚಾರ ಒಂದು ಜಾತಿ, ವರ್ಗಕ್ಕೆ ಸೇರಿದ್ದಲ್ಲ. ಟಿಪ್ಪು ಈ ದೇಶದ ಇತಿಹಾಸದ ಭಾಗ. ಬಿಜೆಪಿ ಸ್ವ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.

ಏಳನೇ ತರಗತಿಯಿಂದ ಪಠ್ಯದಿಂದ ಟಿಪ್ಪು ಸುಲ್ತಾನ್ ಅವರ ಪಾಠ ಕೈಬಿಡುವ ಬಗ್ಗೆ ರಾಜ್ಯ ಸರ್ಕಾರದ ಪ್ರಸ್ತಾವನೆ ವಿಚಾರವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ಟಿಪ್ಪು ಜಯಂತಿ ಆಚರಣೆ ಮಾಡುವುದು ಬಿಡುವುದು ಆ ಸರ್ಕಾರಕ್ಕೆ ಬಿಟ್ಟ ವಿಚಾರ. ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ಕೋವಿಂದ್ ಅವರು ವಿಧಾನಸೌಧಕ್ಕೆ ಬಂದು ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ. ಇವತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಅಂತಾ ಇತಿಹಾಸ ಬದಲಿಸಲು ಹೊರಟಿರುವುದು ಹಾಗೂ ಸಂವಿಧಾನವನ್ನು ತಿರುಚಿ ಬರೆಯಲು ಪ್ರಯತ್ನ ನಡೆಯುತ್ತಿರುವುದು ತಪ್ಪು ಜೊತೆಗೆ ಖಂಡನೀಯ ಎಂದು ಅಸಮಾಧಾನ ಹೊರಹಾಕಿದರು.

ನಮ್ಮ ಇತಿಹಾಸ ಬದಲಾವಣೆ ಆಗಬಾರದು. ಇವರು ಜನರನ್ನು ದಾರಿ ತಪ್ಪಿಸಲು ನಾವು ಬಿಡಲ್ಲ ಇದು ಕಾಂಗ್ರೆಸ್ ಪಕ್ಷದ ನಿಲುವು. ಇದರ ಸಾಧಕ ಬಾಧಕಗಳ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸುತ್ತೇವೆ. ಇದು ಒಂದು ವರ್ಗ, ಜಾತಿಗೆ ಸೀಮಿತವಾದುದಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾದುದಲ್ಲ. ಇದು ದೇಶದ ಚರಿತ್ರೆಯ ವಿಚಾರ. ಜಗತ್ತಿನ ಹಲವು ರಾಷ್ಟ್ರಗಳು ಭಾರತದ ಸಂವಿಧಾನವನ್ನು ಪ್ರಶಂಸೆ ಮಾಡಿವೆ. ಆದರೆ ಬಿಜೆಪಿ ಇದನ್ನು ಹಾಳು ಮಾಡಲು ಹೊರಟಂತೆ ಇದೆ. ನಮ್ಮ ಮಕ್ಕಳಿಗೆ ತಿಳಿವಳಿಕೆ ಹೇಳಿಕೊಡಬೇಕು. ಇದರ ಬಗ್ಗೆಯೂ ನಮ್ಮ ತಂಡ ಅಧ್ಯಯನ ನಡೆಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನು ಓದಿ; ನೆಹರೂ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಕುರಿತ ಭಾಗಗಳನ್ನು ಶಾಲಾ ಪಠ್ಯದಿಂದಲೇ ಕೈಬಿಟ್ಟ ಉತ್ತರಪ್ರದೇಶ ಸರ್ಕಾರಮತ್ತೊಂದು ಕಡೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ ಮತ್ತು ಸಲೀಂ ಅಹಮದ್ ಸಹ ಟಿಪ್ಪು ವಿಚಾರದಲ್ಲಿ ಸರ್ಕಾರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Published by: HR Ramesh
First published: July 28, 2020, 5:17 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories