HOME » NEWS » State » DK SHIVAKUMAR CBI RAIDS RESIDENCE OF KPCC PRESIDENT DK SHIVAKUMAR SCT

DK Shivakumar: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ; ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ

CBI Raids on DK Shivakumar: ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

news18-kannada
Updated:October 5, 2020, 9:35 AM IST
DK Shivakumar: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ; ಟ್ರಬಲ್ ಶೂಟರ್​ಗೆ ಮತ್ತೊಂದು ಸಂಕಷ್ಟ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
  • Share this:
ಬೆಂಗಳೂರು (ಅ. 5): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಹಿನ್ನೆಲೆಯಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆದಿರುವ ಸಾಧ್ಯತೆಯಿದೆ.

ಇದನ್ನೂ ಓದಿ: ಶಿರಾದಲ್ಲಿ ಜೆಡಿಎಸ್​ಗೆ ಮರ್ಮಾಘಾತ ನೀಡಿ ಕೈ ಹಿಡಿದ ಕಲ್ಕೆರೆ ರವಿ

ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳಿಂದ ವಿಚಾರಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್​ಗೆ ಕೋಟಿ ಕೋಟಿ ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಮನೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸಿಬಿಐ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಇಬ್ಬರನ್ನೂ ವಿಚಾರಣೆ ಮಾಡುತ್ತಿದ್ದಾರೆ. ಡಿ.ಕೆ. ಸುರೇಶ್ ಕೂಡ ಡಿ.ಕೆ. ಶಿವಕುಮಾರ್ ಮನೆಯಲ್ಲೇ ಇದ್ದರು. ಹೀಗಾಗಿ, ಸಹೋದರರಿಬ್ಬರ ವಿಚಾರಣೆಯನ್ನೂ ಒಟ್ಟಿಗೇ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆದಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರು ಡಿಕೆಶಿ ಮನೆಯ ಬಳಿ ಸೇರಿದ್ದಾರೆ.
Published by: Sushma Chakre
First published: October 5, 2020, 9:15 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories