‘ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ‘: ಡಿ.ಕೆ ಶಿವಕುಮಾರ್​​

ರಾಜಕೀಯದಲ್ಲಿ ಏನಾದರೂ ಆಗಬಹುದು. ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂಬುದು ಅರಿವಿದೆ. ಅವರ ಪಕ್ಷಕೇನು ಬೇಕೋ ಅದನ್ನೇ ಮಾಡುತ್ತಾರೆ. ಡಿಸಿಎಂ ಡಾ. ಅಶ್ವಥ್ ನಾರಾಯಣ ಕನಕಪುರ ಕ್ಲೀನ್​​ ಮಾಡುತ್ತೇನೆ ಎಂದಿದ್ದಾರೆ. ಅವರಿಗೆ ಒಳ್ಳೆಯದಾಗಲಿ - ಡಿಕೆಶಿ

news18-kannada
Updated:January 13, 2020, 1:07 PM IST
‘ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ‘: ಡಿ.ಕೆ ಶಿವಕುಮಾರ್​​
ಡಿ.ಕೆ ಶಿವಕುಮಾರ್
  • Share this:
ಬೆಂಗಳೂರು(ಜ.13): "ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ" ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರ ಜತೆ ಮಾತಾಡಿದ ಡಿಕೆಶಿ, ನಾನು ಬಿಜೆಪಿ ಪ್ರತಿಭಟನೆಯಿಂದ ನನಗೆ ನಡುಕ ಶುರುವಾಗಿದೆ. ಈಗಲೂ ನಡುಗುತ್ತಿದ್ದೇನೆ. ಅವರಿಗೇ ಹೆದರಿ ಮನೆಯಿಂದ ಹೊರಗಡೆ ಬಂದೆ ಕುಹಕವಾಡಿದ್ದಾರೆ.

ಮಾಗಡಿ ರಸ್ತೆಯಲ್ಲಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕ್ರೈಸ್ತರು 5 ಎಕರೆ ಜಮೀನು ನೀಡಿದ್ದಾರೆ. ರಾಜಕಾರಣ ಮಾಡಬೇಕೆಂದು ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ. ಅವರ ಬಳಿ ಅಧಿಕಾರ ಇದೆ ಮಾಡಲಿ. ಎಲ್ಲಿಂದ ಎಷ್ಟು ಜನ ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ. ಯಾರು ಜನರನ್ನು ಕರೆಸಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಅವರಿಗೆ ಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಹೀಗೆ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್​​ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.

ರಾಜಕೀಯದಲ್ಲಿ ಏನಾದರೂ ಆಗಬಹುದು. ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ ಎಂಬುದು ಅರಿವಿದೆ. ಅವರ ಪಕ್ಷಕೇನು ಬೇಕೋ ಅದನ್ನೇ ಮಾಡುತ್ತಾರೆ. ಡಿಸಿಎಂ ಡಾ. ಅಶ್ವಥ್ ನಾರಾಯಣ ಕನಕಪುರ ಕ್ಲೀನ್​​ ಮಾಡುತ್ತೇನೆ ಎಂದಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಮುಂದಿನ ಚುನಾವಣೆಯಲ್ಲಿ 150 ಸೀಟು ಗೆಲ್ಲಲಿ ಎಂದರು.

ಇದನ್ನೂ ಓದಿ: ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರ ಚಲೋ; ಕಲ್ಲಡ್ಕ ಪ್ರಭಾಕರ್ ಭಟ್ ನೇತೃತ್ವ

ರಾಮನಗರ, ಕನಕಪುರ, ಚನ್ನಪಟ್ಟಣದಿಂದ ಎಷ್ಟು ಗಾಡಿಗಳಲ್ಲಿ ಜನ ಬಂದಿದ್ದಾರೆ ಎಂಬ ಬಗ್ಗೆ ರಾಮನಗರದ ಮಾಜಿ ಸಚಿವರೇ ನನಗೆ ಮಾಹಿತಿ ನೀಡಿದ್ದಾರೆ. ಏನೋ ಮಾಡಿಕೊಂಡು ಹೋಗುತ್ತೇವೆ ತಪ್ಪಾಗಿ ತಿಳಿಯಬೇಡಿ ಎಂದಿದ್ಧಾರೆ. ಸಿ.ಪಿ ಯೋಗೇಶ್ವರ್​​ ನನಗೆ ಫೋನ್​​ ಮಾಡಿದ್ರು. ಎಲ್ಲಿಂದ ಎಷ್ಟು ಜನ ಬರುತ್ತಿದ್ದಾರೆ ಎಂದು ಹೇಳಿದ್ದರು. ಅವರಿಗೆ ಮಂತ್ರಿ ಆಗಬೇಕೆಂಬ ಆಸೆ ಇದೆ, ಆಗಲಿ ಬಿಡಿ ಎಂದರು.

ಇನ್ನು ರಾಜಕಾರಣದಲ್ಲಿ ನಮ್ಮ ನೆರಳನ್ನೂ ನಂಬಬಾರದು. ರಾತ್ರಿ ಆದರೆ ನಮ್ಮ ನೆರಳೇ ನಮ್ಮೊಂದಿಗಿರಲ್ಲ. ನನ್ನ ಕಾರ್ಯಕರ್ತರಿಗೆ ಹೇಳಿದ್ದೇನೆ. ಯಾರು ಏನೇ ಮಾತಾಡಿದರು ಸುಮ್ಮನಿರಬೇಕು. ಎಷ್ಟೇ ಬೈದರು ಸುಮ್ಮನೆ ಕೇಳಿಸಿಕೊಳ್ಳಬೇಕು. ಯಾರು ಗಲಾಟೆ ಮಾಡಬೇಡಿ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ಹೇಳಿದ್ದೇನೆ ಎಂದರು ಡಿಕೆಶಿ.

ಕನಕಪುರದ ಕಪಾಲ ಬೆಟ್ಟದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶಗಳು ಕೇಳಿಬಂದ ನಂತರ ಪ್ರತಿಮೆ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು. ಕನಕಪುರದಲ್ಲಿ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ಯೋಜನೆ ವಿರೋಧಿಸಿ ಇಂದು 'ಕನಕಪುರ ಚಲೋ' ಹೆಸರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಾವಿರಾರು ಬಿಜೆಪಿ ಮತ್ತು ಆರ್​ಎಸ್​ಎಸ್​​ ಕಾರ್ಯಕರ್ತರು ಕನಕಪುರ ಚಲೋದಲ್ಲಿ ಭಾಗಿಯಾಗಿದ್ದಾರೆ. ಇದರ ನೇತೃತ್ವ ಕಲ್ಲಡ್ಕ ಪ್ರಭಾಕರ್ ಭಟ್ ವಹಿಸಿದ್ಧಾರೆ.
First published:January 13, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ