ಸಿಬಿಐ ಕಚೇರಿ ಬಳಿ ಹೆಚ್ಚಿದ ಭದ್ರತೆ; ಉಪಚುನಾವಣೆ ಸಂದರ್ಭದಲ್ಲೇ ಅರೆಸ್ಟ್​ ಆಗ್ತಾರಾ ಡಿಕೆ ಶಿವಕುಮಾರ್?

DK Shivakumar: ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ಸೋಲಾರ್ ಪ್ಲಾಂಟ್​ಗಳಿಗೆ ಅನುಮತಿ ನೀಡಿದ್ದರು. ಅನುಮತಿ ನೀಡಲು ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪ ಕೇಳಿಬಂದಿತ್ತು.ಈ ಪ್ರಕರಣದ ವಿಚಾರಣೆ ನಡೆಸಿರುವ ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್

 • Share this:
  ಬೆಂಗಳೂರು (ಅ. 5): ಅಕ್ರಮವಾಗಿ ಹಣ ಸಂಪಾದಿಸಿರುವ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ. ಕಳೆದ ವರ್ಷ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಇದೀಗ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್​ಗೆ ಬಂಧನ ಭೀತಿ ಎದುರಾಗಿದೆ. ಆರ್​ಆರ್​ ನಗರ ಮತ್ತು ಶಿರಾ ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವುದರಿಂದ ಇದೇ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ಬಂಧನಕ್ಕೊಳಗಾಗಲಿದ್ದಾರಾ? ಎಂಬುದು ಇಂದು ಸಂಜೆಯೊಳಗೆ ಗೊತ್ತಾಗಲಿದೆ.  ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಇಂದು ಮುಂಜಾನೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ಮಾತ್ರವಲ್ಲದೆ ಅವರಿಗೆ ಸೇರಿರುವ ಒಟ್ಟು 14 ಕಡೆ ಸಿಬಿಐ ದಾಳಿ ನಡೆಸಲಾಗಿದೆ. ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಕರ್ನಾಟಕದ 9 ಕಡೆ, ದೆಹಲಿಯ 4 ಕಡೆ ಹಾಗೂ ಮುಂಬೈನ 1 ಕಡೆ ಇಂದು ದಾಳಿ ನಡೆದಿದೆ. ಈಗಾಗಲೇ ಬೆಂಗಳೂರಿನ ಡಿಕೆಶಿ ಮನೆಯಲ್ಲಿ ದಾಳಿ ಮುಕ್ತಾಯ ಹಂತಕ್ಕೆ ಬಂದಿದ್ದು, ಯಾವುದೇ ಕ್ಷಣದಲ್ಲೂ ಡಿಕೆ ಶಿವಕುಮಾರ್ ಅವರನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

  ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿತ್ತು. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಬೆಂಗಳೂರಿನಲ್ಲಿರುವ ಗಂಗಾನಗರ ಸಿಬಿಐ ಕಚೇರಿ ಬಳಿ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಕೆಎಸ್ಆರ್ ಪಿ ಮತ್ತು ಆರ್​ಟಿ ನಗರ ಪೊಲೀಸರ ನಿಯೋಜನೆ ಮಾಡಲಾಗಿದೆ. ಸಿಬಿಐ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಹೆಚ್ಚಿನ ಪೊಲೀಸರನ್ನೂ ನಿಯೋಜನೆ ಮಾಡಲಾಗಿದೆ. ಸಿಬಿಐ ಕಚೇರಿ ಬಳಿ ಇಬ್ಬರು ಎಸಿಪಿಗಳನ್ನು ನಿಯೋಜನೆ ಮಾಡಲಾಗಿದೆ. ಜೆ ಸಿ ನಗರ ಎಸಿಪಿ ರೀನಾ ಸುವರ್ಣ, ಮಲ್ಲೇಶ್ವರಂ ಎಸಿಪಿ ವೆಂಕಟೇಶ್ ನಾಯ್ಡು ಹಾಗೂ ಇನ್ಸ್‌ಪೆಕ್ಟರ್ ಗಳಾದ ಅಶ್ವತ್ ಹಾಗೂ ನಾಗರಾಜು ಮತ್ತು ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

  ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.

  ಇದನ್ನೂ ಓದಿ: ಕಾನೂನು ಹೋರಾಟದಲ್ಲಿ ಗೆಳೆಯ ಡಿಕೆ ಶಿವಕುಮಾರ್ ಗೆದ್ದು ಬರಲಿ; ಸಚಿವ ರಮೇಶ್ ಜಾರಕಿಹೊಳಿ ಹಾರೈಕೆ!

  ಡಿ.ಕೆ. ಶಿವಕುಮಾರ್ ಮನೆ ಜೊತೆಗೆ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿತ್ತು. ಈಗಾಗಲೇ ಐಟಿ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳಿಂದ ಡಿಕೆಶಿ ವಿಚಾರಣೆ ನಡೆಸಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಸಾರ್ವಜನಿಕರ ಹಣವನ್ನು ದುರುಪಯೋಗ ಮಾಡಿಕೊಂಡು, ಬಹುಕೋಟಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಲೆಹಾಕಿದ್ದ ಐಟಿ ಮತ್ತು ಇಡಿ ಇಲಾಖೆ ಆ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಇದೇ ಕಾರಣಕ್ಕೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

  ಸೋಲಾರ್ ಪ್ಲಾಂಟ್​ಗಳ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ಸೋಲಾರ್ ಪ್ಲಾಂಟ್​ಗಳಿಗೆ ಅನುಮತಿ ನೀಡಿದ್ದರು. ಅನುಮತಿ ನೀಡಲು ಕಿಕ್ ಬ್ಯಾಕ್ ಪಡೆದಿದ್ದಾರೆಂಬ ಆರೋಪ ಕೇಳಿಬಂದಿತ್ತು. ಬಳ್ಳಾರಿಯ ಹಗರಿಬೊಮ್ಮನಹಳ್ಳಿಯ ಗದ್ದಿನಕೇರಿಯಲ್ಲಿ 1950 ಎಕರೆಯಲ್ಲಿ ನಿರ್ಮಾಣವಾಗಿರುವ ದೇಶದ ಅತಿ ದೊಡ್ಡ ಪ್ಲಾಂಟ್​ಗೆ ಅನುಮತಿ ನೀಡುವ ವೇಳೆ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಪ್ರಕರಣದ ಬೆನ್ನತ್ತಿರುವ ಸಿಬಿಐ ಅಧಿಕಾರಿಗಳು ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಮನೆ ಮೇಲೆ ದಾಳಿ ನಡೆಸಿದ್ದರು.
  Published by:Sushma Chakre
  First published: