Siddaramotsava: ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯ ಗುಣಗಾನ, ಸಾಮೂಹಿಕ ನಾಯಕತ್ವದ ಬಗ್ಗೆ ಡಿಕೆಶಿ ಜಪ!

ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಸಿದ್ದರಾಮಯ್ಯರನ್ನು ಸನ್ಮಾನಿಸಿದರು. ರೇಷ್ಮೆ ಸಾಲು ಹಾಕಿ, ಇಂದಿರಾ ಗಾಂಧಿ ಅವರ ಬಗೆಗಿನ ಪುಸ್ತಕ ಕೊಟ್ಟು ಹುಟ್ಟುಹಬ್ಬದ ಶುಭಾಶಯ ಕೋರಿದರು.

ಸಿದ್ದರಾಮಯ್ಯ ಹುಟ್ಟುಹಬ್ಬದಲ್ಲಿ ಭಾಗಿಯಾದ ಡಿಕೆಶಿ

ಸಿದ್ದರಾಮಯ್ಯ ಹುಟ್ಟುಹಬ್ಬದಲ್ಲಿ ಭಾಗಿಯಾದ ಡಿಕೆಶಿ

  • Share this:
ದಾವಣಗೆರೆ: ಸಿದ್ದರಾಮಯ್ಯನವರ (Siddaramaiah) 75ನೇ ವರ್ಷದ ಹುಟ್ಟುಹಬ್ಬದ (75th birthday) ಪ್ರಯುಕ್ತ ಸಿದ್ದರಾಮೋತ್ಸವ  (Siddaramotsava) ಕಾರ್ಯಕ್ರಮ ನಡೆಯುತ್ತಿದೆ. ದಾವಣಗೆರೆಯ (Davanagere) ಶಾಮನೂರು ಪ್ಯಾಲೇಸ್‌ ಮೈದಾನದಲ್ಲಿ (Shamanuru Palace Ground) ಅದ್ಧೂರಿ ಕಾರ್ಯಕ್ರಮ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) , ವೇಣುಗೋಪಾಲ್, ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ ರಾಜ್ಯದ ಹಲವೆಡೆಯಿಂದ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

 ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿಕೆಶಿ

 ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಸಿದ್ದರಾಮಯ್ಯರನ್ನು ಸನ್ಮಾನಿಸಿದರು. ರೇಷ್ಮೆ ಸಾಲು ಹಾಕಿ, ಇಂದಿರಾ ಗಾಂಧಿ ಅವರ ಬಗೆಗಿನ ಪುಸ್ತಕ ಕೊಟ್ಟು ಹುಟ್ಟುಹಬ್ಬದ ಶುಭಾಶಯ ಕೋರಿದರು. ಸಿದ್ದರಾಮಯ್ಯ ಅವರು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ನಾಯಕರಲ್ಲ. ಅವರು ಎಲ್ಲಾ ಧರ್ಮದ, ಎಲ್ಲಾ ಜಾತಿಯ, ಎಲ್ಲಾ ವರ್ಗಗಳ ನಾಯಕ ಅಂತ ಹೊಗಳಿದರು. ದೇಶದ 75ನೇ ಸ್ವಾತಂತ್ರ್ಯೋತ್ಸವದಲ್ಲೇ ಸಿದ್ದರಾಮಯ್ಯ ಅವ್ರಿಗೆ 75 ವರ್ಷ ತುಂಬಿರೋದು ಮತ್ತಷ್ಟು ಸಂತಸ ತಂದಿದೆ ಅಂದ್ರು.ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸೋಣ

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಡಿಕೆಶಿ, ಇದು ಭ್ರಷ್ಟ ಸರ್ಕಾರ ಅಂತ ಆರೋಪಿಸಿದ್ರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜನಸಾಮಾನ್ಯರು ಹತ್ತಬೇಕಾದ್ರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು, ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಅಂತ ಕಾರ್ಯಕರ್ತರಿಗೆ ಕರೆ ಕೊಟ್ಟರು. ಅಲ್ಲದೇ ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತೆ ಶ್ರಮಿಸುತ್ತೇವೆ ಅಂತ ಪಕ್ಷದ ಕಾರ್ಯಕರ್ತರಲ್ಲಿ ಪ್ರಮಾಣ ಮಾಡಿಸಿದ್ರು.

ಇದನ್ನೂ ಓದಿ: Siddramotsava: ಮೈಸೂರು ಪಾಕ್, ಲಾಡು, ರುಚಿ ರುಚಿ ಊಟ; ಸಿದ್ದರಾಮೋತ್ಸವದಲ್ಲಿ ಭರ್ಜರಿ ಭೋಜನ

ಸಿದ್ದು ಅಭಿಮಾನಿಗಳಿಗೆ ಭರ್ಜರಿ ಭೋಜನ

ಸಿದ್ದರಾಮೋತ್ಸವಕ್ಕೆ ಬಂದಿರುವ ಜನರಿಗೆ ನೀಡಲು ಭರ್ಜರಿ ಊಟ, ತಿಂಡಿ ರೆಡಿ ಮಾಡಲಾಗಿತ್ತು. ಬಿಸಿಬೇಳೆ ಬಾತ್, ಸಿಹಿಯಾದ ಮೈಸೂರು ಪಾಕ್, ಇಡ್ಲಿ, ಪೊಂಗಲ್, ಚಿತ್ರಾನ್ನ, ಬಿಸಿ ಬಿಸಿ ಕಾಫಿ, ಟೀ, ಹಾಲು, ನೀರಿನ ವ್ಯವಸ್ಥೆ ಮಾಡಲಾಗಿತ್ತು. ಕಳೆದ ಒಂದು ವಾರದಿಂದ ಹಾಲು ತುಪ್ಪ ಎಣ್ಣೆಯಿಂದ 5 ಲಕ್ಷ ಗರಿಗರಿ ಮೈಸೂರು ಪಾಕ್ ತಯಾರಿಸಲಾಗಿದೆ. ಒಂದೇ ಬಾರಿ 10 ಸಾವಿರ ಕಾರ್ಯಕರ್ತರಿಗೆ ಉಣಬಡಿಸುವುದಕ್ಕೆ ಕೌಂಟರ್ ಗಳು ಸಜ್ಜಾಗಿವೆ. ಸುಮಾರು 2, 500 ಅಡುಗೆ ಸಿಬ್ಬಂದಿಗಳು ಭರ್ಜರಿ ಊಟ ತಯಾರಿಸಿದ್ದಾರೆ. ಸಿದ್ದರಾಮೋತ್ಸವ ನಡೆಯುವ ಸ್ಥಳದಲ್ಲಿ 4.5 ಲಕ್ಷ ಕುರ್ಚಿಗಳನ್ನು ಹಾಕಲಾಗಿದ್ದು 6 ಲಕ್ಷಕ್ಕೂ ಅಧಿಕ ಮಂದಿ ಇಂದು ಭಾಗಿಯಾಗಿರುವ ನಿರೀಕ್ಷೆಯಿದೆ.

ಇದನ್ನೂ ಓದಿ: Rahul Gandhi: ಶಿವಮೂರ್ತಿ ಮುರುಘಾ ಶರಣರಿಗೆ ಅಪಮಾನ ಮಾಡಿದ್ರಾ ರಾಹುಲ್ ಗಾಂಧಿ? ಇಷ್ಟಲಿಂಗ ಧಾರಣೆ ಪಡೆಯೋ ವೇಳೆ ಏನಾಯ್ತು?

ಸಿದ್ದರಾಮೋತ್ಸವ ಸಮಾರಂಭಕ್ಕೆ ಬಿಗಿ ಭದ್ರತೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು ಸಿದ್ದರಾಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬಿಗಿ ಭದ್ರತೆಗಾಗಿ 16 ಡಿವೈಎಸ್ಪಿಗಳು, 118 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 360 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳು, 354 ಎಎಸ್‌ಐಗಳು, 2,796 ಪೊಲೀಸ್ ಪೇದೆಗಳು, ಕೆಎಸ್‌ಆರ್‌ಪಿ, ಡಿಎಆರ್ ಪೊಲೀಸರು, ಹೋಂ ಗಾರ್ಡ್‌ಗಳು ಮತ್ತು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಭದ್ರತೆ ಕೈಗೊಂಡಿರುವ ಪೊಲೀಸರು ಜನರ ಚಲನವಲನದ ಮೇಲೆ ನಿಗಾ ಇಡಲು ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿದ್ದಾರೆ. ಸಮಾರಂಭದಲ್ಲಿ ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಿಂದ ಡ್ರೋನ್ ಕ್ಯಾಮೆರಾಗಳನ್ನು ನಿಯೋಜಿಸಲಾಗಿದೆ.
Published by:Annappa Achari
First published: