ಇರೋ ಆಸ್ತಿ ಮಾರಿ ಹಣ ನೀಡಿದ್ದಾರೆ
ಸಚಿವರ ಸಂಬಂಧಿ ಕೈವಾಡ ಸತ್ಯವಿರಬಹುದು, ಇಲ್ಲದಿರಬಹುದು. ಒಂದೇ ತಾಲೂಕಿನ ಮೂವರು ಈ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದು, ಅವರು ಆಸ್ತಿ ಮಾರಿ ಹಣ ನೀಡಿರುವುದು ಇಡೀ ಊರಿಗೆ ಗೊತ್ತಿರುವ ವಿಚಾರ. ಈ ವಿಚಾರವಾಗಿ ನಾನು ನೋಟಿಸ್ ಪಡೆಯುವ ಅಗತ್ಯವಿರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು
ಸಿಐಡಿಯವರು ಎಷ್ಟು ಪ್ರಾಮಾಣಿಕವಾಗಿ ಈ ಪ್ರಕರಣದ ತನಿಖೆ ಮಾಡುತ್ತಾರೆ ಎಂಬುದು ಈಗ ಬಹಳ ಮುಖ್ಯ. ನಾವು ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ, ಮುಖ್ಯಮಂತ್ರಿಗಳು ನಾವು ರಭಸವಾಗಿ ಆಡಳಿತ ಮಾಡಿದರೆ ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಎಂದು ಹೇಳುತ್ತಾರೆ. ಮತ್ತೊಂದು ಕಡೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು, ಇಲ್ಯಾರೂ ಗಂಡಸರಿಲ್ಲ ಎಂದು ಸವಾಲು ಹಾಕುತ್ತಾರೆ. ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು. ಹೀಗಾಗಿ ನಮಗೆ ಭಯ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ: New Helpline: ಸರ್ಕಾರದಿಂದ ಹೊಸ ಸಹಾಯವಾಣಿ ಲೋಕಾರ್ಪಣೆ, ಇದು ಬದಲಾವಣೆ ಕಾಲ ಎಂದ್ರು CM ಬೊಮ್ಮಾಯಿ
ಪ್ರಭಾವಿಗಳನ್ನು ರಕ್ಷಿಸುವ ಹುನ್ನಾರ
ಸರ್ಕಾರ ತನಿಖೆ ಮಾಡಿ ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂದು ಪ್ರಕಟಿಸುವ ಮುನ್ನವೇ ಪರೀಕ್ಷೆ ರದ್ದು ಮಾಡಿ ಮರು ಪರೀಕ್ಷೆಗೆ ಆದೇಶಿಸಿದ್ದಾರೆ. ಈ ನಿರ್ಧಾರದ ಮೂಲಕ ಸರ್ಕಾರ ಕಾನೂನು ವ್ಯಾಜ್ಯಕ್ಕೆ ದಾರಿ ಮಾಡಿಕೊಡುತ್ತಿದೆ. ಜತೆಗೆ ಪ್ರಭಾವಿಗಳನ್ನು ರಕ್ಷಿಸುವ ಹುನ್ನಾರವಿದೆ. ಪೊಲೀಸ್ ಇಲಾಖೆಗೆ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕರೇ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪೊಲೀಸ್ ಮಹಾನಿರ್ದೇಶಕರು, ಗೃಹ ಸಚಿವರ ಹೇಳಿಕೆಗಳು ಭಿನ್ನವಾಗಿರುವುದು ಉತ್ತಮ ಆಡಳಿತವೇ? ಯಾರೋ ಕರೆ ಮಾಡಿದರು ಎಂದು ವಿಚಾರಣೆ ಮಾಡದೇ ಆರೋಪಿಗಳನ್ನು ಬಿಟ್ಟು ಕಳುಹಿಸುವುದು ಎಷ್ಟು ಸರಿ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಬದ್ಧತೆ ಇದ್ದಲ್ಲಿ ಈ ಪ್ರಕರಣದಲ್ಲಿ ಯಾರೆ ಭಾಗಿಯಾಗಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದು ಬಿಜೆಪಿ ಶಾಸಕರು, ನಾಯಕರು, ಮಂತ್ರಿಗಳಾಗಿರಲಿ, ಕಾಂಗ್ರೆಸ್, ಜೆಡಿಎಸ್ ನವರಾಗಿರಲಿ, ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು.ಅಭ್ಯರ್ಥಿಯಿಂದ ಹಣ ಪಡೆದವರ ವಿಚಾರಣೆ ಮಾಡದಂತೆ ಒತ್ತಡ ಹಾಕಿದವರು ಯಾರು? ಎಂಬ ವಿಚಾರವಾಗಿ ಮುಖ್ಯಮಂತ್ರಿಗಳು ಮಾಹಿತಿ ಪಡೆಯಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Ashwath Narayan: 'ನಮ್ಮ ಕುಟುಂಬ ಏನು ಡಿಕೆಶಿ ಕುಟುಂಬದ ತರ ಅಲ್ಲ, ಅವನ ಒಂದೊಂದೇ ಬಂಡವಾಳ ಬಿಚ್ಚಿಡುತ್ತೇನೆ'
ಮುಖ್ಯಮಂತ್ರಿ ಆಗುವವರು ಪ್ರಕರಣ ಮುಚ್ಚಿಹಾಕ್ತಾರೆ
ಈ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತದೆ ಎಂದು ಕಾದು ನೋಡುತ್ತೇವೆ. ನಂತರ ನಾವು ಮಾತನಾಡುತ್ತೇವೆ. ನನಗೂ ಅನೇಕರು ಫೋನ್ ಕರೆ ಮಾಡಿ ಅವರು ಮುಂದೆ ಮುಖ್ಯಮಂತ್ರಿ ಆಗುವವರು, ಅವರ ಹೆಸರು ಎಳೆದು ತರಬೇಡಿ, ಮುಚ್ಚಿಹಾಕಿ ಎಂದು ಹೇಳುತ್ತಿದ್ದಾರೆ. ಬೇಕಾದರೆ ನನ್ನ ಫೋನ್ ಕರೆ ವಿವರ ಪರಿಶೀಲಿಸಿ. ಮಂಡ್ಯದ ನಾಯಕರೊಬ್ಬರು ನನಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಬಿಜೆಪಿಯವರು ನಾಯಕತ್ವ ಬದಲಾವಣೆ ಮಾಡುವ ವಿಚಾರ ಅವರಿಗೆ ಬಿಟ್ಟದ್ದು, ಆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ದೂರಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ