• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ದೆಹಲಿಯಲ್ಲಿ ಮೂರು ದಿನ ಕಾದು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಡಿ.ಕೆ. ಶಿವಕುಮಾರ್!

ದೆಹಲಿಯಲ್ಲಿ ಮೂರು ದಿನ ಕಾದು ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಡಿ.ಕೆ. ಶಿವಕುಮಾರ್!

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್.

ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್.

ಕಳೆದ ಒಂದು ವಾರದಿಂದ ಕಾಂಗ್ರೆಸ್​ನಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಯನ್ನು ಹಲವು ಶಾಸಕರು ಬಹಿರಂಗವಾಗಿ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಮುಂದೆ ಓದಿ ...
  • Share this:

ನವದೆಹಲಿ (ಜೂ. 22): ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚರ್ಚೆ ಆಗುತ್ತಿರುವ 'ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ' ಎಂಬ ವಿವಾದ ಈಗ ಹೈಕಮಾಂಡ್ ಅಂಗಳವನ್ನೂ ತಲುಪಿದೆ. ಮಂಗಳವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಸಂಸದರೂ ಆದ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌‌ ಶಿವಕುಮಾರ್ ಅವರು 'ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡುತ್ತಿರುವ ಶಾಸಕರಿಗೆ ಮತ್ತು ಈ ಬಗ್ಗೆ ಮೌನವಾಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.


ರಾಹುಲ್ ಗಾಂಧಿ ಮತ್ತು ರಣದೀಪ್ ಸುರ್ಜೆವಾಲಾ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, 'ರಾಜ್ಯ ಕಾಂಗ್ರೆಸಿನಲ್ಲಿ ಆಂತರಿಕ ಕಚ್ಚಾಟವೇ ಇಲ್ಲ' ಎಂದರು. ಆಂತರಿಕ ಕಚ್ಚಾಟ ಇಲ್ಲದಿರುವುದರಿಂದ ಹೈಕಮಾಂಡ್ ನಾಯಕರ ಬಳಿ ದೂರುವ ಪ್ರಶ್ನೆಯೇ ಇಲ್ಲ ಎಂದರು. ಆದರೆ ಮೂರು ದಿನಗಳಿಂದ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲೇಬೇಕು ಎಂದು ದೆಹಲಿಯಲ್ಲಿ ಕಾದು ಕುಳಿತಿದ್ದೇ 'ಸಿದ್ದರಾಮಯ್ಯ ವಿರುದ್ಧ ದೂರು' ನೀಡಲು ಎಂದು ತಿಳಿದುಬಂದಿದೆ.
ಇದೂ ಅಲ್ಲದೇ ರಣದೀಪ್ ಸುರ್ಜೆವಾಲಾ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ ಡಿ.ಕೆ. ಶಿವಕುಮಾರ್, ಆ ನಂತರ ಪದೇ ಪದೇ ಕೆಲ ಶಾಸಕರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ.‌ ಈ ರೀತಿ ಹೇಳಿಕೆ ಕೊಡುವವರಿಗೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನಿಮ್ಮ ಸೂಚನೆ ಏನು ಎಂಬ ಪ್ರಶ್ನೆಗೆ ಉತ್ತರಿಸುತ್ತಾ 'ಶಾಸಕರ ವರ್ತನೆ ಬಗ್ಗೆ ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಶಾಸಕರನ್ನು ಹತೋಟಿಯಿಂದ ಇಟ್ಟುಕೊಳ್ಳುವುದು ಅವರಿಗೆ ಗೊತ್ತಿದೆ' ಎಂದು ಉತ್ತರಿಸಿದರು. ಈ ಮೂಲಕ ಪರೋಕ್ಷವಾಗಿ ವಿವಾದದ ಚೆಂಡನ್ನು ಸಿದ್ದರಾಮಯ್ಯ ಅಂಗಳಕ್ಕೆ ತಳ್ಳಿದರು.


ಮುಂದಿನ ಸಿಎಂ ಸಿದ್ದರಾಮಯ್ಯ ಅವರೇ ಎಂಬ ಹೇಳಿಕೆಗಳು ಬಗ್ಗೆ ಹೈಕಮಾಂಡ್ ನಾಯಕರ ಗಮನಕ್ಕೆ ಬಂದಿದೆ. ಈ ಬಗ್ಗೆ ಪಕ್ಷ ನೋಡಿಕೊಳ್ಳುತ್ತದೆ. ಇದಕ್ಕೆ ಸಂಬಂಧಿಸಿದಂತೆ ಏನು ಹೇಳಬೇಕು ಎನ್ನುವುದನ್ನು ಹೈಕಮಾಂಡ್ ನಾಯಕರೇ ಹೇಳುತ್ತಾರೆ. ನಾನು ರಾಹುಲ್ ಗಾಂಧಿ ಅಥವಾ ರಣದೀಪ್ ಸುರ್ಜೆವಾಲಾ ಅವರ ಬಳಿ ಮುಂದೆ ಸಿಎಂ ಯಾರಾಗಬೇಕು ಎಂಬ ವಿಚಾರ ಚರ್ಚೆ ಮಾಡಿಲ್ಲ. ಈ ವಿಷಯವನ್ನು ಹೈಕಮಾಂಡ್ ಬಳಿ ಚರ್ಚಿಸುವುದು ನನ್ನ ಅಜೆಂಡಾ ಆಗಿರಲಿಲ್ಲ. ನಮ್ಮ ಹೋರಾಟ ಏನಿದ್ದರೂ ಬಿಜೆಪಿ ವಿರುದ್ಧ ಎಂದು ಹೇಳಿದರು.


ರಣದೀಪ್ ಸುರ್ಜೆವಾಲಾ ಜೊತೆಗೆ ಕೇಡರ್ ಬೇಸ್ ಪಕ್ಷದ ರೀತಿಯಲ್ಲಿ ಸಂಘಟನೆ ಮಾಡುವ ಬಗ್ಗೆ ಚರ್ಚಿಸಿದ್ದೇನೆ. ಬ್ಲಾಕ್ ಕಾಂಗ್ರೆಸ್ ಮರು ವಿಗಂಡಣೆ, ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಬಗ್ಗೆ ಚರ್ಚಿಸಿದ್ದೇನೆ.‌ ಒಂದು ವಾರದಲ್ಲಿ ಆತಂರಿಕವಾಗಿ ಚರ್ಚಿಸಿ ತಿರ್ಮಾನ ಮಾಡಲಾಗುವುದು ಎಂದು ಡಿ.ಕೆ.‌ ಶಿವಕುಮಾರ್ ಹೇಳಿದರು.


ಇದನ್ನು ಓದಿ: ಗುದದ್ವಾರಕ್ಕೆ ಲಾಠಿ ತುರುಕಿ ಮಾಜಿ ಸೈನಿಕನ ಮೇಲೆ ಪೊಲೀಸರ ದೌರ್ಜನ್ಯ; ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಿದ ನಿವೃತ್ತ ಯೋಧ!


ಕಳೆದ ಒಂದು ವಾರದಿಂದ ಕಾಂಗ್ರೆಸ್​ನಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಯನ್ನು ಹಲವು ಶಾಸಕರು ಬಹಿರಂಗವಾಗಿ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

Published by:HR Ramesh
First published: